ಚುನಾವಣೆಗೆ ಸಂಬಂಧಿಸಿದ ದೂರುಗಳಿದ್ದಲ್ಲಿ ಕಂಟ್ರೋಲ್ ರೂಂನ ಈ ನಂಬರ್‌ಗೆ ಕರೆ ಮಾಡಿ 

ಹಂಚಿಕೊಳ್ಳಿ
WhatsApp Facebook X Telegram

Shivamogga  Mar 26, 2024  control room   ಚುನಾವಣಾ ನೀತಿ ಸಂಹಿತೆ ಜಾರಿಯಾಗಿದ್ದು, ಚುನಾವಣಾ ಪ್ರಚಾರಗಳ ನಡುವೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ಹಾಗೂ ಚುನಾವಣಾ ಅಕ್ರಮಗಳ ಬಗ್ಗೆ ಚುನಾವಣಾ ಆಯೋಗ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ. ಈ ಸಂಬಂಧ ಜನರಿಗೆ ದೂರು ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. 

ನಿಮ್ಮ ಕಣ್ಣೆದುರು ಅಕ್ರಮ ನಡೆಯುತ್ತಿದ್ದರೇ ಅದರ ಬಗ್ಗೆ ತೀರಾ ಸುಲಭವಾಗಿ ಚುನಾವಣಾ ಆಯೋಗದ ಗಮನಕ್ಕೆ ತರಬಹುದಾಗಿದೆ. ನಿಮ್ಮ ಕೈಯಲ್ಲಿರುವ ಮೊಬೈಲ್‌ನಲ್ಲಿಯೇ ಚುನಾವಣಾ ಅಕ್ರಮವನ್ನು ಬಯಲಿಗೆಳೆಯುವ ಸಾಧ್ಯತೆಯನ್ನು ಚುನಾವಣಾ ಆಯೋಗ ಸಾರ್ವಜನಿಕರಿಗೆ ನೀಡಿದೆ. ಕೇವಲ ಚುನಾವಣಾ ಅಕ್ರಮ ಅಲ್ಲದೆ ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ದೂರುಗಳಿದ್ದಲ್ಲಿ ಕಂಟ್ರೋಲ್‌ ರೂಂಗೆ ಕರೆಮಾಡುವಂತೆ ನಂಬರ್‌ ನೀಡಲಾಗಿದೆ.ಈ ನಿಟ್ಟಿನಲ್ಲಿ ಶಿವಮೊಗ್ಗ ಜಿಲ್ಲಾ ಚುನಾವಣಾ ಅಧಿಕಾರಿಗಳು ಪ್ರಕಟಣೆಯನ್ನು ನೀಡಿದ್ದು ಅದರ ವಿವರ ಇಲ್ಲಿದೆ 

ಚುನಾವಣೆಗೆ ಸಂಬಂಧಿಸಿದ ದೂರುಗಳಿದ್ದಲ್ಲಿ ಕಂಟ್ರೋಲ್ ರೂಂ ಗೆ ಕರೆ ಮಾಡಿ 

ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ರ ಸಂಬಂಧ 111-ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಚುನಾವಣಾ ವಿಚಾರಗಳ ಕುರಿತು ಯಾವುದೇ ದೂರುಗಳನ್ನು ಸಲ್ಲಿಸಲು ಶಿವಮೊಗ್ಗ ತಾಲ್ಲೂಕು ಕಚೇರಿಯಲ್ಲಿ ಕಂಟ್ರೋಲ್ ರೂಂ ನ್ನು ಪ್ರಾರಂಭಿಸಲಾಗಿದೆ.

ಸಾರ್ವಜನಿಕರಲ್ಲಿ ಯಾವುದೇ ರೀತಿಯ ಚುನಾವಣಾ ದೂರುಗಳಿದ್ದಲ್ಲಿ ಕಂಟ್ರೋಲ್ ರೂಂ ದೂ.ಸಂ: 08182-220016 ನ್ನು ಸಂಪರ್ಕಿಸಿ ಸಲ್ಲಿಸಬಹುದೆಂದು 111-ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ವಿಶ್ವನಾಥ ಪಿ ಮುದ್ದಜ್ಜಿ ತಿಳಿಸಿದ್ದಾರೆ.

ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor