ಶಿವಮೊಗ್ಗ: ಕೇಂದ್ರ ಗೃಹ ಸಚಿವ ಅಮಿತ್ ಶಾ ಪೋಸ್ಟ್​ ಮೂಲಕ ಬಳೆ ರವಾನೆ, ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ : ಕಾರಣವೇನು

prathapa thirthahalli
Prathapa thirthahalli - content producer

Youth Congress : ದೇಶದಲ್ಲಿ ಪದೇ ಪದೇ ಸಂಭವಿಸುತ್ತಿರುವ ಭಯೋತ್ಪಾದಕ ದಾಳಿಗಳನ್ನು ತಡೆಯುವಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಆರೋಪಿಸಿರುವ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್, ಇಂದು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿತು. ಕೂಡಲೇ ಅಮಿತ್ ಶಾ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಆಗ್ರಹಿಸಿ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು, ಪ್ರತಿಭಟನೆಯ ಭಾಗವಾಗಿ ಗೃಹ ಸಚಿವರಿಗೆ ಅಂಚೆ ಮೂಲಕ ಬಳೆಗಳನ್ನು ರವಾನಿಸಿ ಆಕ್ರೋಶ ವ್ಯಕ್ತಪಡಿಸಿದರು.

ಶಿವಮೊಗ್ಗದಲ್ಲಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ: ಎಸ್ಪಿ ಕಚೇರಿ ಮುತ್ತಿಗೆಗೆ ಯತ್ನ, ಕಾರಣವೇನು 

ಇತ್ತೀಚೆಗೆ ಕಾಶ್ಮೀರದ ಕಹಿ ಘಟನೆ ಮರೆಯುವ ಮುನ್ನವೇ, ದೇಶದ ಶಕ್ತಿಕೇಂದ್ರವಾದ ನವದೆಹಲಿಯ ಕೆಂಪು ಕೋಟೆಯ ಕೂಗಳತೆಯ ದೂರದಲ್ಲಿ ಉಗ್ರರು ನಡೆಸಿದ ಬಾಂಬ್ ಸ್ಫೋಟದಲ್ಲಿ ಅಮಾಯಕ ನಾಗರಿಕರು ಪ್ರಾಣ ಕಳೆದುಕೊಂಡ ಘಟನೆಯನ್ನು ಯುವ ಕಾಂಗ್ರೆಸ್ ತೀವ್ರವಾಗಿ ಖಂಡಿಸಿತು. ನಗರದ ಗೋಪಿ ವೃತ್ತದಲ್ಲಿ ಜಮಾಯಿಸಿದಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟಿಸಿದರು.

Youth Congress Sends Bangles to Amit Shah
Youth Congress Sends Bangles to Amit Shah

Youth Congress ಅಮಿತ್ ಶಾ ಸಂಪೂರ್ಣ ವಿಫಲ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎನ್. ರಮೇಶ್

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎನ್. ರಮೇಶ್ ಅವರು, ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದಲೂ ಪದೇ ಪದೇ ದೇಶದ ಮೇಲೆ ಉಗ್ರರ ದಾಳಿಯಾಗುತ್ತಿದೆ =. 2019ರ ಪುಲ್ವಾಮಾ ದಾಳಿ (800 ಕೆಜಿ ಗ್ರಾನೇಡ್ ದಾಳಿ) ಮತ್ತು 2025ರ ಏಪ್ರಿಲ್‌ನಲ್ಲಿ ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಾಗರಿಕರ ಹತ್ಯೆಯನ್ನು ಉದಾಹರಿಸಿದ ಅವರು, ಇದೀಗ ದೇಶದ ರಾಜಧಾನಿಯಲ್ಲೇ ಉಗ್ರರ ದಾಳಿಯಾಗಿದ್ದು, ಕೇಂದ್ರ ಸರ್ಕಾರ ನಾಗರಿಕರ ಸುರಕ್ಷತೆಗಾಗಿ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂಬುದನ್ನು ಸಾಬೀತುಪಡಿಸಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಮ್ಮ ಜವಾಬ್ದಾರಿಯನ್ನು ನಿಭಾಯಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

Youth Congress ಚುನಾವಣೆ ಸಂದರ್ಭದಲ್ಲೇ ದಾಳಿ?  ಚೇತನ್ 

ಜವಳಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಚೇತನ್ ಮಾತನಾಡಿ, ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದಲೂ ಇಂತಹ ದಾಳಿಗಳು ಚುನಾವಣಾ ಸಂದರ್ಭದಲ್ಲೇ ನಡೆಯುತ್ತಿವೆ. 2019ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಪುಲ್ವಾಮಾ ದಾಳಿ ನಡೆದಿತ್ತು. ಇದೀಗ ಬಿಹಾರ ವಿಧಾನಸಭೆ ಚುನಾವಣೆ ಸಂದರ್ಭದಲ್ಲೇ ಈ ದಾಳಿ ನಡೆದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಬಿಹಾರ ಚುನಾವಣೆಯಲ್ಲಿ ಎನ್.ಡಿ.ಎ.ಗೆ ಮುಖಭಂಗವಾಗುವುದು ಖಚಿತ ಎಂದು ಸಮೀಕ್ಷೆಗಳು ಹೇಳಿದ ಬೆನ್ನಲ್ಲೇ ಈ ದಾಳಿ ನಡೆದಿರುವುದು ಆತಂಕಕಾರಿ ಎಂದರು.ಪ್ರತಿಭಟನೆಯ ಅಂತ್ಯದಲ್ಲಿ ಯುವ ಕಾಂಗ್ರೆಸ್‌ನ ಮಹಿಳಾ ಪದಾಧಿಕಾರಿಳು  ಕೇಂದ್ರದ ಗೃಹ ಸಚಿವ ಅಮಿತ್ ಶಾ ರವರಿಗೆ ತ ಬಳೆಗಳನ್ನು ಸಂಗ್ರಹಿಸಿ, ಅವುಗಳನ್ನು ಅಂಚೆ ಕಚೇರಿ ಮೂಲಕ ಪೋಸ್ಟ್ ಮಾಡಿದರು.

ಯುವ ಕಾಂಗ್ರೆಸ್ ಕಾರ್ಯಕರ್ತರು ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿ, ಕೂಡಲೇ ಗೌರವಾನ್ವಿತ ರಾಷ್ಟ್ರಪತಿಗಳು ಅಸಮರ್ಥ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು. ನಿನ್ನೆಯ ದಾಳಿಯ ಪಾರದರ್ಶಕ ತನಿಖೆ ನಡೆಸಿ, ದೇಶದ ಸುರಕ್ಷತೆಗಾಗಿ ರಕ್ಷಣಾ ವ್ಯವಸ್ಥೆಯನ್ನು ಬಲಗೊಳಿಸಲು ಕೇಂದ್ರ ಸರ್ಕಾರಕ್ಕೆ ಕಟ್ಟುನಿಟ್ಟಿನ ಆದೇಶ ನೀಡಬೇಕು ಎಂದು ಒತ್ತಾಯಿಸಿದರು.

Youth Congress Sends Bangles to Amit Shah
Youth Congress Sends Bangles to Amit Shah

 

Share This Article