ನವೆಂಬರ್ 13, 2025 : ಮಲೆನಾಡು ಟುಡೆ , ಶಿವಮೊಗ್ಗ : ವರ್ಷಕ್ಕೆ 12 ಮುಟ್ಟಿನ ರಜೆ: ಆದೇಶ ಜಾರಿ : ಉದ್ಯೋಗಸ್ಥ ಮಹಿಳೆಯರಿಗೆ ತಿಂಗಳಿಗೆ ಒಂದರಂತೆ ವರ್ಷಕ್ಕೆ 12 ಮುಟ್ಟಿನ ರಜೆಯನ್ನು (ವೇತನ ಸಹಿತ) ನೀಡುವ ಕುರಿತು ಕಾರ್ಮಿಕ ಇಲಾಖೆ ಆದೇಶ ಹೊರಡಿಸಿದೆ.
ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ, ತೋಟ ಕಾರ್ಮಿಕರ ಕಾಯ್ದೆ, ಬೀಡಿ ಮತ್ತು ಸಿಗಾರ್ ಕಾರ್ಮಿಕರ ಕಾಯ್ದೆ, ಮೋಟಾರು ಸಾರಿಗೆ ಕಾಯ್ದೆ ಅಡಿಯಲ್ಲಿ ನೋಂದಣಿ ಆಗಿರುವ ಕೈಗಾರಿಕೆಗಳು ಮತ್ತು ಸಂಸ್ಥೆಗಳೂ ಸೇರಿದಂತೆ ಎಲ್ಲ ವಲಯಗಳಲ್ಲಿ ಕೆಲಸ ಮಾಡುತ್ತಿರುವವರಿಗೆ ಅನ್ವಯವಾಗಲಿದೆ.

ಶಿವಮೊಗ್ಗ: ಕೇವಲ 9 ದಿನಗಳಲ್ಲಿ ಮಹಿಳಾ ಇಂಜಿನಿಯರ್‌ಗೆ 11 ಲಕ್ಷ ವಂಚನೆ!
ಅಂಕ ಇಳಿಕೆ ಬದಲಾವಣೆ ಇಲ್ಲ
ಬೆಂಗಳೂರು: ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯು ಪರೀಕ್ಷೆ ತೇರ್ಗಡೆಗೆ ನಿಗದಿ ಮಾಡಿರುವ ಶೇ 33 ಅಂಕ ಈ ಶೈಕ್ಷಣಿಕ ಸಾಲಿನಿಂದಲೇ ಅನ್ವಯ ವಾಗಲಿದೆ. ಈ ನಿರ್ಧಾರರಾಷ್ಟ್ರೀಯ ಶಿಕ್ಷಣ ನೀತಿಯ ಅನುಕರಣೆ ಅಲ್ಲ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ಉತ್ತೀರ್ಣತೆಯ ಕನಿಷ್ಠ ಅಂಕವನ್ನು ಶೇ33ಕ್ಕೆ ನಿಗದಿ ಮಾಡಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ ನಂತರವೂ ಕೆಲವರು ವಿರೋಧಿಸುತ್ತಿದ್ದಾರೆ. ಲಕ್ಷಾಂತರ ಮಕ್ಕಳಿಗೆ ಕೆಲವೊಮ್ಮೆ ಎರಡು ಅಂಕಗಳೇ ನಿರ್ಣಾಯಕವಾಗಿರುತ್ತವೆ. ಒಬ್ಬ ವ್ಯಕ್ತಿ ಇಂದು ಚಾಲನಾ ಪರವಾನಗಿ ಪಡೆಯಲು ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ ನೀಡಬೇಕಾಗುತ್ತದೆ ಎಂದರು.

ಶಿವಮೊಗ್ಗ ನಗರದಲ್ಲಿ ಇಂದಿನಿಂದಲೇ ಭಾರೀ ವಾಹನ ಸಂಚಾರ ನಿಷೇಧ: ಜಿಲ್ಲಾಧಿಕಾರಿಗಳ ಆದೇಶ : ಕಾರಣವೇನು
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel instagram youtube telegram google business malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!
