ನವೆಂಬರ್ 14, 2025 : ಮಲೆನಾಡು ಟುಡೆ : ಪತ್ನಿಗೆ ಕಿರುಕುಳ ನೀಡಿದ ಪತಿಗೆ ಎರಡು ವರ್ಷ ಜೈಲು ಶಿಕ್ಷೆ, ಸಾಗರ ನ್ಯಾಯಾಲಯದಿಂದ ಮಹತ್ವದ ತೀರ್ಪು, 7,000 ರೂ. ದಂಡ ವಿಧಿಸಿದ ಜೆಎಂಎಫ್‌ಸಿ ನ್ಯಾಯಾಲಯ
ಸಾಗರ ತಾಲ್ಲೂಕು, ಬೇಳೂರು ಗ್ರಾಮದ ನಿವಾಸಿ ಅಶೋಕ ಎಂ. ಎಂಬಾತ, ತನ್ನ ಪತ್ನಿಗೆ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡಿ ಹಲ್ಲೆ ಮಾಡಿದ ಪ್ರಕರಣಕ್ಕೆ(Domestic Violence in Sagar) ಸಂಬಂಧಿಸಿದಂತೆ ಸಾಗರ ಜೆಎಂಎಫ್‌ಸಿ ನ್ಯಾಯಾಲಯವು ಎರಡು ವರ್ಷ ಜೈಲು ಶಿಕ್ಷೆ ಮತ್ತು ₹ 7,000 ದಂಡವನ್ನು ವಿಧಿಸಿ ಆದೇಶಿಸಿದೆ. ದಂಡದ ಮೊತ್ತವನ್ನು ಪಾವತಿಸಲು ತಪ್ಪಿದಲ್ಲಿ ಹೆಚ್ಚುವರಿಯಾಗಿ ಮೂರು ತಿಂಗಳ ಕಾರಾಗೃಹ ವಾಸವನ್ನು ಅನುಭವಿಸಬೇಕಾಗುತ್ತದೆ ಎಂದು ನ್ಯಾಯಾಲಯ ತಿಳಿಸಿದೆ.

ಆರೋಪಿ ಅಶೋಕ್ ಮತ್ತು ಅವರ ಪತ್ನಿ ಜೋಸೆಫ್ ನಗರದಲ್ಲಿ ವಾಸವಿದ್ದವರು. ಅಶೋಕ್ ಬೇರೊಬ್ಬ ಮಹಿಳೆಯೊಂದಿಗೆ ಫೋನ್‌ನಲ್ಲಿ ಸಂಭಾಷಣೆ ನಡೆಸುತ್ತಿದ್ದ ವಿಷಯವನ್ನು ಪತ್ನಿ ಪ್ರಶ್ನೆ ಮಾಡಿದಾಗ, ಆತ ಆಕೆಯ ಮೇಲೆ ಹಲ್ಲೆ ನಡೆಸಿ ಹಿಂಸೆ ನೀಡಿದ್ದ. ಈ ಸಂಬಂಧ ಸಂತ್ರಸ್ತ ಮಹಿಳೆ ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರನ್ನ ಆಧರಿಸಿ, ವಿಚಾರಣೆ ನಡೆದು ಕೋರ್ಟ್ಗೆ ಚಾರ್ಜ್ ಶೀಟ್ ಸಲ್ಲಿಕೆಯಾಗಿತ್ತು. ಈ ಕೇಸ್ನ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಮಾದೇಶ್ ಎಂ.ವಿ. ಅಂತಿಮವಾಗಿ ತೀರ್ಪು ಪ್ರಕಟಿಸಿದ್ದಾರೆ. ಇನ್ನೂ ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಕೀಲ ಚಂದ್ರಶೇಖರ್ ಎಚ್.ಎಸ್. ಅವರು ವಾದ ಮಂಡಿಸಿದ್ದರು. Domestic Violence in Sagar
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel instagram youtube telegram google business malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!
Husband Sentenced to 2 Years in Jail for Domestic Violence in Sagar, Karnataka

