ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಇನ್ನಿಲ್ಲ

prathapa thirthahalli
Prathapa thirthahalli - content producer

Salumarada Thimmakka ಬೆಂಗಳೂರು : ಉಸಿರಾಟದ ತೊಂದರೆಯಿಂದ ಬಳಲುತ್ತಾ ಆಸ್ಪತ್ರೆಗೆ ದಾಖಲಾಗಿದ್ದ ಪ್ರಖ್ಯಾತ ಪರಿಸರವಾದಿ ಮತ್ತು ವೃಕ್ಷ ಮಾತೆ ಎಂದೇ ಖ್ಯಾತಿ ಪಡೆದಿದ್ದ ಸಾಲುಮರದ ತಿಮ್ಮಕ್ಕ ಅವರು ಇಂದು ನಿಧನರಾಗಿದ್ದಾರೆ. ಅವರಿಗೆ 114 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ಜಯನಗರದಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. 

Salumarada Thimmakka
Salumarada Thimmakka

ತುಂಗಾ ಕಾಲೇಜ್​ ಬಳಿ  ಆಲ್ಟೋ ಕಾರ್​ ಪಲ್ಟಿ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ 1911ರ ಜೂನ್‌ 30ರಂದು ಜನಿಸಿದ್ದ ತಿಮ್ಮಕ್ಕ, ನಂತರ ಮಾಗಡಿ ತಾಲೂಕಿನ ಚಿಕ್ಕಯ್ಯ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಅವರಿಗೆ ಮಕ್ಕಳಿರದ ಕಾರಣ, ಆ ದುಃಖವನ್ನು ಮರೆಯಲು ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು, ಅವುಗಳನ್ನೇ ತಮ್ಮ ಮಕ್ಕಳಂತೆ ಭಾವಿಸಿ ಪೋಷಿಸಿದರು. ಪರಿಸರ ಸಂರಕ್ಷಣೆಗೆ ಅವರು ನೀಡಿದ ಮಹತ್ತರ ಕೊಡುಗೆಗಾಗಿ ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದ್ದರು. 

ಈ ಸಾಧನೆಗಾಗಿ ಸಾಲುಮರದ ತಿಮ್ಮಕ್ಕರಿಗೆ 1995ರಲ್ಲಿ ರಾಷ್ಟ್ರೀಯ ಪೌರ ಪ್ರಶಸ್ತಿ, 1997ರಲ್ಲಿ ಇಂದಿರಾ ಪ್ರಿಯದರ್ಶಿನಿ ವೃಕ್ಷಮಿತ್ರ ಪ್ರಶಸ್ತಿ, 2019ರಲ್ಲಿ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ವಿಶಾಲಾಕ್ಷಿ ಪ್ರಶಸ್ತಿ ಮತ್ತು 2010ನೇ ಸಾಲಿನ ‘ನಾಡೋಜ’ ಪ್ರಶಸ್ತಿಗೂ ಅವರು ಪಾತ್ರರಾಗಿದ್ದಾರೆ. ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯವು 2020ರಲ್ಲಿ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿತ್ತು. 

Salumarada Thimmakka

Salumarada Thimmakka

Share This Article