ಭಕ್ತಾದಿಗಳ ಗಮನಕ್ಕೆ: ಜನವರಿ 14 ಮತ್ತು 15 ಕ್ಕೆ ಶ್ರೀ ಕ್ಷೇತ್ರ ಸಿಗಂದೂರು ಅಮ್ಮನವರ ಜಾತ್ರೆ/ ಏನೇನೆಲ್ಲಾ ಇರಲಿದೆ? ಸಂಪ್ರದಾಯವೇನು? ಕಾರ್ಯಕ್ರಮಗಳೇನು?

Malenadu Today

ಶಿವಮೊಗ್ಗ ಜಿಲ್ಲೆ  ಸಾಗರ ತಾಲ್ಲೂಕಿನ ಪ್ರಸಿದ್ಧ ಕ್ಷೇತ್ರ ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ (sigandur chowdeshwari) ಸಂಕ್ರಾಂತಿ ಅಂಗವಾಗಿ ಜನವರಿ 14 ಮತ್ತು 15ರಂದು ಜಾತ್ರಾ ಮಹೋತ್ಸವ ನಡೆಯಲಿದೆ.

ಸಾಗರ ಸುದ್ದಿ :  ನಡೆವ ಘಟನೆಗಳಿಗೆಲ್ಲಾ ಕೋಮು ಬಣ್ಣ ಕಲ್ಪಿಸುವುದು ಬೇಡ

ಜನವರಿ14 ರಂದು ಬೆಳಗ್ಗೆ ಸೀಗೆಕಣಿವೆಯಲ್ಲಿ ನಟ ರಾಘವೇಂದ್ರ ರಾಜಕುಮಾರ್‌ ಮತ್ತು ವಡನ್ ಬೈಲು ಪದ್ಮಾವತಿ ದೇವಸ್ಥಾನದ ಧರ್ಮದರ್ಶಿ ವೀರರಾಜಯ್ಯ ಜೈನ್ ಅವರು ಜಾತ್ರೆಗೆ ಚಾಲನೆ ನೀಡಲಿದ್ದಾರೆ 

ಶಿವಮೊಗ್ಗ ನಗರದ ರಾಗಿಗುಡ್ಡದ ಬಳಿಯಲ್ಲಿ ಕಾಣಿಸಿಕೊಂಡ ಬೆಂಕಿ

ಜಾತ್ರೆಯ ವಿಧಿವಿಧಾನಗಳೇನು?/ಸಂಪ್ರದಾಯಗಳೇನು?

  • ಜನವರಿ14 ರಂದು ಬೆಳಗಿನ ಜಾವ 2 ಗಂಟೆಗೆ ಆಲಯ ಶುದ್ಧಿ ನಡೆಯಲಿದೆ.
  • ಬೆಳಗ್ಗೆ 7ಕ್ಕೆ ಚೌಡೇಶ್ವರಿ ದೇವಿಯ ಮೂಲ ಸ್ಥಳವಾದ ಸೀಗೆ ಕಣವೆಯಲ್ಲಿ ಪ್ರಥಮ ಪೂಜೆ ನೆರವೇರಲಿದೆ.
  • ಬಳಿಕ ಧರ್ಮಾಧಿಕಾರಿ ನೇತೃತ್ವದಲ್ಲಿ ಪೂರ್ಣ ಕುಂಭ ಕಳಶ ದೊಂದಿಗೆ ಜ್ಯೋತಿ ರೂಪದ ದೇವಿಯನ್ನು ಈಗಿನ ಸಿಗಂದೂರು ದೇವಸ್ಥಾನಕ್ಕೆ ಮೆರವಣಿಗೆಯಲ್ಲಿ ತರಲಾಗುತ್ತದೆ.
  • ಜ.14 ರಂದು ದೇವಿಗೆ ಹೂವಿನ ಅಲಂಕಾರ, ಪೂಜೆ, ಮಹಾಭಿಷೇಕ, ಆಭರಣ ಪೂಜೆ, ಚಂಡಿಕಾ ಹವನ, ನವ ಚಂಡಿಕಾ ಹವನ ನಡೆಯಲಿದೆ.
  • ಮಧ್ಯಾಹ್ನ 2.30ಕ್ಕೆ ಧಾರ್ಮಿಕ ಸಭೆ ಆಯೋಜಿಸಲಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಗೌರವ ಸಮರ್ಪಣೆ ಮಾಡಲಾಗುತ್ತದೆ.
  • ಸಂಜೆ 5 ಗಂಟೆಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. 5.30ಕ್ಕೆ ಗಂಗಾರತಿ, ಸಿಡಿಮದ್ದು ಪ್ರದರ್ಶನವಿರಲಿದೆ. ರಾತ್ರಿ 10.30ರಿಂದ ಯಕ್ಷಗಾನ ಪ್ರದರ್ಶನವಿರಲಿದೆ.

ಸಾಗರ ಟೌನ್​ನಲ್ಲಿ ನಡೆದ ಹಲ್ಲೆ ಯತ್ನ ಕೇಸ್​ ಬಗ್ಗೆ ಸಮೀರ್ ಸಹೋದರಿ ಹೇಳಿದ್ದೇನು? ವಿಡಿಯೋ ವರದಿ

ಜನವರಿ 15 ರಂದು

ಜನವರಿ15 ರಂದು ಮುಂಜಾನೆ 4 ಗಂಟೆಯಿಂದಲೇ ದೇವಿಗೆ ವಿಶೇಷ ಪೂಜೆ ನೆರವೇರಿಸಲಾಗುತ್ತದೆ.

ಮಧ್ಯಾಹ್ನ 2 ಗಂಟೆಯಿಂದ ಸಾಂಸ್ಕೃತಿಕ ಕಾರ್ಯ ಕ್ರಮಗಳು ನಡೆಯಲಿವೆ.

ರಾತ್ರಿ 8ಕ್ಕೆ ಗಾನ ವೈಭವ ನಡೆಯಲಿದೆ. ಭಕ್ತರು ಕೋವಿಡ್ ನಿಯಮಗಳನ್ನು ಪಾಲಿಸಿ ಜಾತ್ರೆಯಲ್ಲಿ ಪಾಲ್ಗೊಳ್ಳುವಂತೆ ಧರ್ಮದರ್ಶಿ ಡಾ.ರಾಮಪ್ಪ ಅವರು ತಿಳಿಸಿದ್ದಾರೆ.

ಸಾಗರ ಟೌನ್​ನಲ್ಲಿ ಹಲ್ಲೆಗೆ ಯತ್ನ ಕೇಸ್​/ ಆರೋಪಿಗಳ ಬಂಧನ/ ಶಾಸಕ ಹರತಾಳು ಹಾಲಪ್ಪ ಹೇಳಿದ್ದೇನು? ಇಲ್ಲಿದೆ ವಿಡಿಯೋ ವರದಿ

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com

Share This Article