government employees : ಕಂಪ್ಯೂಟರ್ ಪರೀಕ್ಷೆ ಪಾಸಾದ ಸರ್ಕಾರಿ ನೌಕರರಿಗೆ 5000 ರೂಪಾಯಿ ಪ್ರೋತ್ಸಾಹ ಧನ

ಹಂಚಿಕೊಳ್ಳಿ
WhatsApp Facebook X Telegram

government employees : ಸರ್ಕಾರಿ ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ಪಾಸ್ ಆಗುವುದು ಕಡ್ಡಾಯವಾಗಿದೆ. ಈ ನಿಟ್ಟಿನಲ್ಲಿ ಸರ್ಕಾರಿ ನೌಕರರಿಗೆ, ರಾಜ್ಯ ಸರ್ಕಾರ ಗುಡ್​ನ್ಯೂಸ್​ವೊಂದನ್ನ ನೀಡಿದೆ. ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾದ ಸರ್ಕಾರಿ ನೌಕರರಿಗೆ 5 ಸಾವಿರ  ರೂಪಾಯಿ  ಪ್ರೋತ್ಸಾಹ ಧನ ನೀಡಲು ಮುಂದಾಗಿದೆ. 

ಈ ಸಂಬಂಧ  ಸರ್ಕಾರದ ಆದೇಶ ಹೊರಬಿದ್ದಿದ್ದು ಪ್ರೋತ್ಸಾಹ ಧನದ ಸೌಲಭ್ಯವು 2021ರ ಏಪ್ರಿಲ್​ 17ರೊಳಗೆ ಉತ್ತೀರ್ಣರಾಗಿರುವ ಅರ್ಹ ಸೇವಾನಿರತ ಸರ್ಕಾರಿ ನೌಕರರಿಗೆ ಮಾತ್ರ ಸಿಗಲಿದೆ. ನೌಕರರು ಹಾಜರುಪಡಿಸುವ ಡಿಜಿಟಲ್ ಸಹಿ ಹೊಂದಿರುವ ಕಂಪ್ಯೂಟರ್ ಸಾಕ್ಷರತಾ ಪರೀಕ್ಷಾ ಪ್ರಮಾಣವನ್ನು ಪರಿಶೀಲಿಸಿ ಉತ್ತೀರ್ಣರಾದ ದಿನಾಂಕ ಖಚಿತಪಡಿಸಿಕೊಂಡು ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರಿಗಳು ಪ್ರೋತ್ಸಾಹ ಧನವನ್ನು ಮಂಜೂರು ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ. 

*Bhadravathi Old Town police station : ಮನೆ ಮುಂದೆ ನಿಲ್ಲಿಸಿದ್ದ ಬುಲೆಟ್ ಬೆಳಗ್ಗೆ ಮಾಯ! ಮಾಲೀಕನಿಗೆ ಶಾಕ್*​

ಪ್ರೋತ್ಸಾಹ ಧನವನ್ನು ಸರ್ಕಾರಿ ನೌಕರರು ಪಡೆಯುವ ವೇತನದಲ್ಲಿ ಸೇರಿಸಿ ನೀಡಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ತರಬೇತಿ ಪಡೆದ ನೌಕರರಿಗೆ ನೀಡಲ್ಪಡುವ ಪ್ರಮಾಣಪತ್ರದ ನಮೂನೆ ಅಂತಿಮಗೊಳ್ಳದ ಹಿನ್ನೆಲೆಯಲ್ಲಿ ಪ್ರೋತ್ಸಾಹ ಧನ ನೀಡಲು ತಡೆ ನೀಡಲಾಗಿತ್ತು. ಇದೀಗ ಎಲ್ಲಾ ಸಮಸ್ಯೆ ನಿವಾರಣೆ ಆಗಿವೆ.

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com

ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor