ರಾಜ್ಯ ಸರ್ಕಾರಿ ನೌಕರರ ಮುಷ್ಕರ ಹಿನ್ನಲೆ ವೈದ್ಯಕೀಯ ತುರ್ತು ಸೇವೆಗಳು ಎಂದಿನಂತಿರುತ್ತವೆ-ಜಿಲ್ಲಾ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ನೌಕರರ ಸಂಘದ ಅಧ್ಯಕ್ಷರ ಸ್ಪಷ್ಟನೆ

ಹಂಚಿಕೊಳ್ಳಿ
WhatsApp Facebook X Telegram

ಸರ್ಕಾರಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಘೋಷಿಸಿ ದಿನಾಂಕ 27 .02.2023ರಂದು ನಡೆದ, ಜಿಲ್ಲಾ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ನೌಕರರ ಸಂಘ ಶಿವಮೊಗ್ಗದ, ತುರ್ತು ಕಾರ್ಯಕಾರಣಿ ಸಭೆಯಲ್ಲಿ ಕೆಲವೊಂದು ಮಹತ್ವದ ತೀರ್ಮಾನ ಕೈಗೊಳ್ಳಾಯಿತುು. ಜಿಲ್ಲಾ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ನೌಕರರ ಸಂಘದ  ಅಧ್ಯಕ್ಷರಾದ ವೈ ಜೈ ಶಶಿಕುಮಾರ್ ನೇತ್ರತ್ಲದ ಸಭೆಯಲ್ಲಿ ಕೈಗೊಂಡ ನಿರ್ಣಯಗಳು ಹೀಗಿವೆ.

ಶಿವಮೊಗ್ಗ ಜಿಲ್ಲೆಯ ಆರೋಗ್ಯ ಇಲಾಖೆಯ ಎಲ್ಲಾ ಅಧಿಕಾರಿ /ನೌಕರರ ವರ್ಗದವರು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಮುಷ್ಕರದ ಮಾರ್ಗ ಸೂಚಿಯಂತೆ ಕರ್ತವ್ಯಕ್ಕೆ ಗೈರು ಹಾಜರಾಗುವುದು.

ಮಾನವೀಯತೆ ದೃಷ್ಟಿಯಿಂದ ತಾಲೂಕು ಆಸ್ಪತ್ರೆ, ಹಾಗೂ ಜಿಲ್ಲಾ ಆಸ್ಪತ್ರೆಯಲ್ಲಿ ತುರ್ತು ಸೇವೆಗಳಾದ ಎಮರ್ಜೆನ್ಸಿ, ಐಸಿಯು, ಡಯಾಲಿಸಿಸ್, ಹೆರಿಗೆ ವಿಭಾಗಗಳಲ್ಲಿ ಕಪ್ಪು ಪಟ್ಟಿ ಧರಿಸಿ ಕರ್ತವ್ಯಕ್ಕೆ ಹಾಜರಾಗಲು ತೀರ್ಮಾನಿಸಲಾಯಿತು.

Malenadu Today Shivamogga

ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor