BREAKING / ಬೆಂಗಳೂರಿನ ಮಣಿಪಾಲ್​ ಆಸ್ಪತ್ರೆಗೆ ದಾಖಲಾದ ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ

ಹಂಚಿಕೊಳ್ಳಿ
WhatsApp Facebook X Telegram

KARNATAKA NEWS/ ONLINE / Malenadu today/ SHIVAMOGGA / Apr 23, 2023


ಬೆಂಗಳೂರು/ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಅಡ್ಮಿಟ್ ಆಗಿದ್ದಾರೆ. 

ನಿನ್ನೆ ರಾತ್ರಿ ಅವರು ತಮ್ಮ ಕುಟುಂಬದ ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. 

ತೀವ್ರ ಜ್ವರದಿಂದ ಬಳುತ್ತಿರುವ ಅವರಿಗೆ ವಿಶ್ರಾಂತಿಯ ಅಗತ್ಯವಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದು, ಸದ್ಯ ಅವರು ಚೇತರಿಸಿಕೊಳ್ತಿದ್ದಾರೆ. 

ಬಿಡುವಿಲ್ಲದ ರಾಜಕಾರಣದ ಚಟುವಟಿಕೆಗಳಿಂದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅನಾರೋಗ್ಯಕ್ಕೆ ಒಳಗಾಗಿದ್ದು, ಅವರಿಗೆ ಜ್ವರ ಕಾಡುತ್ತಿದೆ. 

ಇದೀಗ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆದುಕೊಂಡು ನಂತರ ಮತ್ತೆ ಚುನಾವಣೆ ಚಟುವಟಿಕೆಯಲ್ಲಿ ಸಕ್ರಿಯರಾಗಲು ಮುಂದಾಗಿದ್ದಾರೆ. 

 

Malenadutoday.com Social media

ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor