ಶಿವಮೊಗ್ಗದ ಗಾಂಧಿ ಪ್ರತಿಮೆ ಎದುರು ಮಾಜಿ ಸಚಿವ ಕಿಮ್ಮನೆ ರತ್ನಾಕರ್​ ನೇತೃತ್ವದಲ್ಲಿಂದು ಉಪವಾಸ ಸತ್ಯಾಗ್ರಹ ! ಕಾರಣವೇನು?

KARNATAKA NEWS/ ONLINE / Malenadu today/ Jul 3, 2023 SHIVAMOGGA NEWS

ಶಿವಮೊಗ್ಗದಲ್ಲಿ ಇವತ್ತು  ಮಾಜಿ ಸಚಿವ ಕಿಮ್ಮನೆ ರತ್ನಾಕರ್ (kimmane ratnakar) ಮತ್ತೆ ಉಪವಾಸ ಸತ್ಯಾಗ್ರಹ ನಡೆಸಲಿದ್ಧಾರೆ.  ಈ ಭಾರಿ ಕೇಂದ್ರ ಸರಕಾರದ ವಿರುದ್ಧ  ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ಧಾರೆ.  ಶಿವಮೊಗ್ಗ ನಗರದ ಗಾಂಧಿ ಪಾರ್ಕಿನ ಮಹಾತ್ಮ ಗಾಂಧೀಜಿ  ಪ್ರತಿಮೆ ಬಳಿ ಮಾಜಿ ಸಚಿವರು ಉಪವಾಸ ಸತ್ಯಾಗ್ರಹ  ನಡೆಸಲಿದ್ದಾರೆ. ಕೇಂದ್ರ ಸರಕಾರ ಕಳೆದ 9 ವರ್ಷಗಳ ಹಿಂದೆಯೇ ಹಲವು ಭರವಸೆಗಳನ್ನು ನೀಡಿತ್ತು ಆದರೆ ಅದನ್ನ ಈಡೇರಿಸಿಲ್ಲ ಎಂದು ಆರೋಪಿಸಿರುವ ಕಿಮ್ಮನೆ ರತ್ನಾಕರ್​ ಈ ಕಾರಣಕ್ಕೆ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ. 

ಕಿಮ್ಮನೆ ರತ್ನಾಕರ್ ಆರೋಪಗಳು

  • ವರ್ಷಕ್ಕೆ ಎರಡು ಕೋಟಿ ಉದ್ಯೋಗ ನೀಡುವುದಾಗಿ ಹೇಳಿದ್ದರು. ಅದರಂತೆ 9 ವರ್ಷದಲ್ಲಿ 18 ಕೋಟಿ ಉದ್ಯೋಗಗಳನ್ನು ನೀಡಬೇಕಿತ್ತು. ಆದರೆ, ಉದ್ಯೋಗ ನೀಡುವುದಿರಲಿ, ಇರುವ ಉದ್ಯೋಗ ಕಸಿದುಕೊಂಡಿದೆ 
  • ಪ್ರಧಾನಿ ಮೋದಿ ಅವರು ವಿದೇಶದಲ್ಲಿ ರುವ ಕಪ್ಪು ಹಣವನ್ನು ತಂದು ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂ. ಜಮಾ ಮಾಡುತ್ತೇವೆ ಎಂದಿದ್ದರು. ಈ ಬಗ್ಗೆ ಪ್ರಶ್ನೆ ಮಾಡಿದರೆ ಬಿಜೆಪಿಯವರು ಅವರೇನು ಗ್ಯಾರಂಟಿ ಬರೆದುಕೊಟ್ಟಿದ್ದಾರಾ ಎಂದು ಪ್ರಶ್ನೆ ಮಾಡುತ್ತಾರೆ. ಬರೆದುಕೊಟ್ಟರೆ ಮಾತ್ರ ಕೊಡಬೇಕೆ? ಮಾತು ಕೊಟ್ಟರೆ ಕೊಡಬಾರದೆ ?
  • ದೇಶದ ಎಲ್ಲ ರಾಜ್ಯಗಳನ್ನು ಒಕ್ಕೂಟ ವ್ಯವಸ್ಥೆಯಲ್ಲಿ ನೋಡಿಕೊಳ್ಳಬೇಕಾದದ್ದು ಪ್ರಧಾನಿ ಅವರ ಜವಾಬ್ದಾರಿ. ಈಗ ಎಂದು ರಾಜ್ಯ ಸರಕಾರಕ್ಕೆ ಅಕ್ಕಿ ಕೊಡಲ್ಲ ಹೇಳುತ್ತಿ ದ್ದಾರೆ. ಇದು ಒಕ್ಕೂಟ ವ್ಯವಸ್ಥೆಗೆ ಧಕ್ಕೆ ಉಂಟಾಗುವುದಿಲ್ಲವೇ ?


ಹೈಬ್ರೀಡ್ ಕರುಗಳನ್ನು ನಡು ರಸ್ತೆಯಲ್ಲಿ ಬಿಟ್ಟು ಹೋದ ಅಪರಿಚಿತರು! ಏನಿದು ಘಟನೆ?

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ಗಂಡು ಕರುಗಳನ್ನು ರಸ್ತೆ ಮೇಲೆ ಅನಾಥವಾಗಿ ಬಿಟ್ಟು ಹೋದಂತಹ ಘಟನೆ ಬಗ್ಗೆ ಸ್ಥಳೀಯವಾಗಿ ವರದಿಯಾಗಿದೆ. ಹೈಬ್ರಿಡ್​ ತಳಿಯ ಕರುಗಳು ಇವಾಗಿದ್ದು, ಯಾರು ಈ ಕೃತ್ಯವೆಸಗಿದ್ದು ಎಂಬುದು ಗೊತ್ತಾಗಿಲ್ಲ.  ಎಡಜಿಗಳೇಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಾವಿನಸರದ ಬನ್ನಿಕಟ್ಟೆ ಬಳಿಯಲ್ಲಿ ಒಟ್ಟು ನಾಲ್ಕು ಕರುಗಳನ್ನು ಬಿಟ್ಟು ಹೋಗಿದ್ದಾರೆ. ಇದನ್ನ ಗಮನಿಸಿದ ಸ್ಥಳೀಯರು ಕುಂಟಗೋಡಿನ ಪುಣ್ಯಕೋಟಿ ಗೋ ಶಾಲೆಗೆ ಕರುಗಳನ್ನು ಸಾಗಿಸಿ ಆಶ್ರಯ ಒದಗಿಸಿದ್ದಾರೆ.  ಕರುಗಳ ಪೋಷಣೆಗೆ ಶ್ರೀಧರಾಶ್ರಮ ನೆರವಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ. 


ಈಶ್ವರಪ್ಪರಿಗೆ ಸನ್ಮಾನ ಮಾಡಲು ನಿರಾಕರಿಸಿದ್ರಾ ಸಿದ್ದರಾಮಯ್ಯ

ಮಾಜಿ ಶಾಸಕ ಈಶ್ವರಪ್ಪಗೆ ಸನ್ಮಾನ ಮಾಡಲು ಸಿಎಂ ಸಿದ್ದರಾಮಯ್ಯ ನಿರಾಕರಿಸಿದ್ರಾ ಎಂಬ ಪ್ರಶ್ನೆಯೊಂದು ನಿನ್ನೆ ನಡೆದ ಕಾರ್ಯಕ್ರಮದಲ್ಲಿ ಮೂಡಿದೆ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಶಾಖಾ ಮಠದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪ ಪಾಲ್ಗೊಂಡಿದ್ದರು. ಈ ವೇಳೆ ಈಶ್ವರಪ್ಪನವರಿಗೆ ಅಭಿನಂದನೆ ಸಲ್ಲಿಸಲು ನಿರಂಜನಾನಂದಪುರಿ ಶ್ರೀಗಳು ಸಿಎಂ ಸಿದ್ದರಾಮಯ್ಯರಿಗೆ ಸನ್ನೆ ಮಾಡಿದರು. ಅದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ಅವರು ಸನ್ನೆಯಿಂದಲೇ ನೀವೇ ಹಾಕಿ ಅಂತ ಹೇಳಿದರು.  

Malenadu Today


 

Leave a Comment

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು