ಶಿವಮೊಗ್ಗದಲ್ಲಿ ಶಾಲೆಗಳಿಗೆ ರಜೆ ಘೋಷಣೆ! ಕಾಲೇಜುಗಳಿಗೆ ರಜೆ ವಿಚಾರದಲ್ಲಿ ಪ್ರಾಂಶುಪಾಲರ ತೀರ್ಮಾನ ಅಂತಿಮ!

ಹಂಚಿಕೊಳ್ಳಿ
WhatsApp Facebook X Telegram

KARNATAKA NEWS/ ONLINE / Malenadu today/ Jul 24, 2023 SHIVAMOGGA NEWS 

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಬೆಳಗ್ಗೆಯಿಂದಲೂ ಮಳೆಯಾಗುತ್ತಿದೆ. ಜಿಲ್ಲೆಯ ಹಲವೆಡೆ ವ್ಯಾಪಕ ಮಳೆಯಾಗಿರುವ ಬಗ್ಗೆ ವರದಿಯಾಗಿದೆ. ಈ ನಿಟ್ಟಿನಲ್ಲಿ ಇಂದು  ಶಿವಮೊಗ್ಗ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.  ಶಿವಮೊಗ್ಗ ಜಿಲ್ಲಾಡಳಿತದ ಸೂಚನೆ ಮೇರೆಗೆ ಶಾಲಾ ಶಿಕ್ಷಣ ಇಲಾಖೆ ಪ್ರಕಟಣೆ ಹೊರಡಿಸಿದೆ.  

ಶಿವಮೊಗ್ಗ ಜಿಲ್ಲೆಯಲ್ಲಿ ಅತೀ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಶಾಲಾ ಮಕ್ಕಳ ಸುರಕ್ಷತೆ ಹಿತದೃಷ್ಠಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು, ಶಿವಮೊಗ್ಗ ಜಿಲ್ಲೆ. ರವರ ಸೂಚನೆ ಮೇರೆಗೆ ಶಿವಮೊಗ್ಗ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಸದರಿ ರಜೆಯನ್ನು ಮುಂದಿನ ರಜಾ ದಿನದಲ್ಲಿ ತರಗತಿ ನಡೆಸುವ ಮೂಲಕ ಶಾಲಾ ದಿನಗಳನ್ನು ಮರು ಹೊಂದಾಣಿಕೆ ಮಾಡಿಕೊಳ್ಳಲು ಶಾಲಾ ಮುಖ್ಯ ಶಿಕ್ಷಕರಿಗೆ ಸೂಚಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ

ಕಾಲೇಜುಗಳಿಗೆ ರಜೆ ?

ಇನ್ನೂ ಇದೇ ವಿಚಾರದಲ್ಲಿ  ಪರಿಸ್ಥಿತಿ ಅನುಗುಣವಾಗಿ ರಜೆ (Holiday) ನೀಡಲು ಆಯಾ ಕಾಲೇಜು ಪ್ರಾಂಶುಪಾಲರಿಗೆ ಅವಕಾಶ ನೀಡಿ ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ. ಈ ಸಂಬಂಧ  ಭದ್ರಾವತಿ, ಸಾಗರ, ಹೊಸನಗರ, ತೀರ್ಥಹಳ್ಳಿ, ಸೊರಬ, ಶಿಕಾರಿಪುರ ಕೆಲ ಕಾಲೇಜುಗಳಲ್ಲಿ ಪ್ರಾಂಶುಪಾಲರು ರಜೆ ಘೋಷಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ತುಂಗಾನದಿ ಭರಪೂರವಾಗಿ ಹರಿಯುತ್ತಿದ್ದಾಳೆ, ಇನ್ನೂ ಇವತ್ತು ಕೂಡ ಶಿವಮೊಗ್ಗದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅಲ್ಲದೆ  ನಿರ್ದಿಷ್ಟ ಪ್ರದೇಶಗಳಲ್ಲಿ 200 ಮಿಲಿಮೀಟರ್​ಗೂ ಅಧಿಕ ಮಳೆಯಾಗುವ ಸೂಚನೆಯನ್ನ ನೀಡಲಾಗಿದೆ. ಬಿರುಗಾಳಿಯ ಸಮೇತ ಹಲವೆಡೆ ವ್ಯಾಪಕ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡುವ ದೈನಂದಿನ ರಿಪೋರ್ಟ್​ನಲ್ಲಿ ತಿಳಿಸಿದೆ. ಅತಿಹೆಚ್ಚು ಮಳೇಯಾಗುವ ಪ್ರದೇಶಗಳನ್ನು ಹೊರತು ಪಡಿಸಿ, ಉಳಿದೆಡೆಯು ಭಾರೀ ಮಳೆಯಾಗುವ ಸಾಧ್ಯತೆಯನ್ನು ಹವಾಮಾನ ಇಲಾಖೆ ತಿಳಿಸಿದೆ. 

ಮುಖ್ಯವಾಗಿ ಜಿಲ್ಲೆಯ ಬಹುತೇಕ ಶೇಕಡಾ 75 ರಷ್ಟು ಕಡೆಗಳಲ್ಲಿ ಮಳೆಯಾಗಲಿದೆ ಎಂದು ತಿಳಿರುವ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಇನ್ನೂ ನಾಳೆಯಿಂದ 27 ನೇ ತಾರೀಖಿನ ವರೆಗೂ ಶಿವಮೊಗ್ಗದಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.  

Malenadu Today Shivamogga

ನಡುರಸ್ತೆಯಲ್ಲಿ ಮಹಿಳೆಯ ಕೊಲೆ! ಸಾಬೀತಾಯ್ತು ಅಪರಾಧ! ಶಿಕಾರಿಪುರ ಗ್ರಾಮಾಂತರ ಠಾಣೆಯ ಕೇಸ್​ನಲ್ಲಿ ಕೋರ್ಟ್ ತೀರ್ಪು!

ಮಾಜಿ ಸಿಎಂ ಬಿಎಸ್​ವೈ ಇನ್ಮುಂದೆ ಡಾ.ಬಿಎಸ್​ ಯಡಿಯೂರಪ್ಪ! ಅಭಿಮಾನಿಗಳಿಗೂ ಅವಕಾಶ ನೀಡಿದ BYR

ಮಗ ಬೈಕ್​ ಓಡಿಸಿದ ತಪ್ಪಿಗೆ 25 ಸಾವಿರ ರೂಪಾಯಿ ದಂಡ ಕಟ್ಟಿದ ತಂದೆ! ಕಾರಣವೇನು ಗೊತ್ತಾ?

ವೈದ್ಯರೊಬ್ಬರ ಸಮಯ ಪ್ರಜ್ಞೆಯಿಂದ ಬಯಲಾಯ್ತು ದುಷ್ಕೃತ್ಯ! ಶಿವಮೊಗ್ಗ ಜಿಲ್ಲೆಯಲ್ಲಿ ದಾಖಲಾಯ್ತು ಮತ್ತೊಂದು ಪೋಕ್ಶೋ ಕೇಸ್!

 ​ 

 

 

ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor