ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗಲೇ ಸಿಕ್ಕಿಬಿದ್ದ ಅಧಿಕಾರಿ! ಲೋಕಾಯುಕ್ತ ಶಾಕ್!

KARNATAKA NEWS/ ONLINE / Malenadu today/ Jul 24, 2023 SHIVAMOGGA NEWS 

ಶಿವಮೊಗ್ಗದಲ್ಲಿ  ಮತ್ತೆ ಲೋಕಾಯುಕ್ತ ಪೊಲೀಸರು (Lokayukta Police)ಅಧಿಕಾರಿಯೊಬ್ಬರಿಗೆ ಶಾಕ್ ಕೊಟ್ಟಿದ್ದಾರೆ. ಒಂದೂವರೆ ಲಕ್ಷ ರೂ. ಹಣ ಸ್ವೀಕರಿಸುವಾಗ ಶಿರಸ್ತೇದಾರ್ ಅವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಹಕ್ಕು ದಾಖಲೆ ಶಾಖೆ ಶಿರಸ್ತೇದಾರ್ ಅರುಣ್ ಕುಮಾರ್ ಅವರ ಮೇಲೆ ಲೋಕಾಯುಕ್ತ ದಾಳಿಯಾಗಿದೆ. ಶಿವಮೊಗ್ಗ ತಾಲೂಕು ಕಚೇರಿ ಕಟ್ಟಡದಲ್ಲಿರುವ ಶಿರಸ್ತೇದಾರ್ ಕಚೇರಿಯಲ್ಲಿ ದಾಳಿಯಾಗಿದೆ. ಲೋಕಾಯುಕ್ತ ಪೊಲೀಸರು ಪರಿಶೀಲನೆ‌ ನಡೆಸುತ್ತಿದ್ದಾರೆ. 

ಹನುಮಂತ ಬನ್ನಿಕೋಡ್ ಎಂಬುವವರಿಗೆ  ಖಾತೆ ಬದಲಾವಣೆಗಾಗಿ  ಶಿರಸ್ತೇದಾರ್ ಜಿ.ಅರುಣ್ ಕುಮಾರ್ 3 ಲಕ್ಷ ರೂಪಾಯಿ ಬೇಡಿಕೆ ಇಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಲೋಕಾಯುಕ್ತಕ್ಕೆ ದೂರು ದಾಖಲಾಗಿತ್ತು. ಟ್ರ್ಯಾಪ್ ಪ್ಲಾನ್ ಮಾಡಿದ ಲೋಕಾಯುಕ್ತ ಅಧಿಕಾರಿಗಳು, ಇವತ್ತು  1.5 ಲಕ್ಷ ರೂ. ಹಣ ವನ್ನು ಸ್ವೀಕರಿಸುತ್ತಿದ್ದಾಗ, ಅರುಣ್​ ಕುಮಾರ್​ರವರ ಮೇಲೆ ರೇಡ್ ಮಾಡಿದ್ದಾರೆ.  ಶಿರಸ್ತೇದಾರ್ ಜಿ.ಅರುಣ್ ಕುಮಾರ್ ಕಂದಾಯ ಇಲಾಖೆ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿದ್ದಾರೆ.  ಲೋಕಾಯುಕ್ತ ಚಿತ್ರದುರ್ಗ ಎಸ್ಪಿ ವಾಸುದೇವ್, ಶಿವಮೊಗ್ಗ ಡಿವೈಎಸ್ಪಿ ಉಮೇಶ್ ಈಶ್ವರ್ ನಾಯ್ಕ್ ನೇತೃತ್ವದಲ್ಲಿ ದಾಳಿ ನಡೆದಿದೆ. ಕಚೇರಿಯಲ್ಲಿ ತನಿಖೆ ಮುಂದುವರೆದಿದೆ.

Malenadu Today Shivamogga

ನಡುರಸ್ತೆಯಲ್ಲಿ ಮಹಿಳೆಯ ಕೊಲೆ! ಸಾಬೀತಾಯ್ತು ಅಪರಾಧ! ಶಿಕಾರಿಪುರ ಗ್ರಾಮಾಂತರ ಠಾಣೆಯ ಕೇಸ್​ನಲ್ಲಿ ಕೋರ್ಟ್ ತೀರ್ಪು!

ಮಾಜಿ ಸಿಎಂ ಬಿಎಸ್​ವೈ ಇನ್ಮುಂದೆ ಡಾ.ಬಿಎಸ್​ ಯಡಿಯೂರಪ್ಪ! ಅಭಿಮಾನಿಗಳಿಗೂ ಅವಕಾಶ ನೀಡಿದ BYR

ಮಗ ಬೈಕ್​ ಓಡಿಸಿದ ತಪ್ಪಿಗೆ 25 ಸಾವಿರ ರೂಪಾಯಿ ದಂಡ ಕಟ್ಟಿದ ತಂದೆ! ಕಾರಣವೇನು ಗೊತ್ತಾ?

ವೈದ್ಯರೊಬ್ಬರ ಸಮಯ ಪ್ರಜ್ಞೆಯಿಂದ ಬಯಲಾಯ್ತು ದುಷ್ಕೃತ್ಯ! ಶಿವಮೊಗ್ಗ ಜಿಲ್ಲೆಯಲ್ಲಿ ದಾಖಲಾಯ್ತು ಮತ್ತೊಂದು ಪೋಕ್ಶೋ ಕೇಸ್!

 ​ 

 

 

Leave a Comment