KARNATAKA NEWS/ ONLINE / Malenadu today/ Aug 1, 2023 SHIVAMOGGA NEWS
ಜಿಟಿಟಿಸಿ : ಲ್ಯಾಟರಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ
ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ) ಶಿವಮೊಗ್ಗ ಕೇಂದ್ರದಲ್ಲಿ 2023-24 ನೇ ಸಾಲಿನ ಡಿಪ್ಲೊಮಾ ಇನ್ ಟೂಲ್ & ಡೈ ಮೇಕಿಂಗ್ ಕೋರ್ಸಿಗೆ ಪಿಯುಸಿ(ವಿಜ್ಞಾನ) ಹಾಗೂ ಐಟಿಐ (ಫಿಟ್ಟರ್, ಟರ್ನರ್ & ಮಷಿನಿಸ್ಟ್) ಪಾಸಾದ ವಿದ್ಯಾರ್ಥಿಗಳಿಗೆ ಲ್ಯಾಟರಲ್ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆಗಸ್ಟ್ 08 ಕಡೆಯ ದಿನವಾಗಿದೆ. ಈ ಕೋರ್ಸ್ ಶೇ.100 ಉದ್ಯೋಗಾವಕಾಶವನ್ನು ಹೊಂದಿದ್ದು, ಈ ಕೋರ್ಸ್ ಮುಗಿಸಿದ ಕೂಡಲೇ ಉದ್ಯೋಗ ದೊರಕುತ್ತದೆ ಹಾಗೂ ವ್ಯಾಸಂಗಕ್ಕೆ ಸಹಕಾರಿಯಾಗಿದೆ. ಸುಸಜ್ಜಿತವಾದ ಬಾಲಕರ ವಸತಿ ನಿಲಯ ಲಭ್ಯವಿದೆ. ಹೆಚ್ಚಿನ ಮಾಹಿತಿಗಾಗಿ ಘಟಕದ ಮುಖ್ಯಸ್ಥರು ಹಾಗೂ ಪ್ರಾಂಶುಪಾಲರು, ಜಿಟಿಟಿಸಿ, ಪ್ಲಾಟ್ ನಂ ಸಿಎ-38, ನಿದಿಗೆ ಕೈಗಾರಿಕಾ ಪ್ರದೇಶ, ಮಾಚೇನಹಳ್ಳಿ, ಶಿವಮಗ್ಗ ಮೊ.ಸಂ: 9448307027, 9880141054, 9902232839, 9449286543 ನ್ನು ಸಂಪರ್ಕಿಸಬಹುದೆಂದು ಜಿಟಿಟಿಸಿ ಪ್ರಾಂಶುಪಾಲರು ತಿಳಿಸಿದ್ದಾರೆ.
ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳಡಿಯಲ್ಲಿ ಅರ್ಜಿ ಆಹ್ವಾನ
ತೋಟಗಾರಿಕೆ ಇಲಾಖೆಯು 2023-24ನೇ ಸಾಲಿಗೆ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ್ರದೇಶ ವಿಸ್ತರಣೆ (ಅಂಗಾಂಶಬಾಳೆ, ಹೈಬ್ರೀಡ್ ತರಕಾರಿ, ಕಾಳುಮೆಣಸು, ಗೇರು, ಕೋಕೋ, ಬಿಡಿಹೂ, ಗೆಡ್ಡೆ ಜಾತಿಯ ಹೂ ಮತ್ತು ಗುಲಾಬಿ), ಸಮುದಾಯ ಕೃಷಿಹೊಂಡ, ವೈಯುಕ್ತಿಕ ಕೃಷಿಹೊಂಡ, ಪ್ಯಾಕ್ ಹೌಸ್, ಪ್ರಾಥಮಿಕ ಸಂಸ್ಕರಣಾ ಘಟಕಗಳಿಗೆ ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಿದೆ.ಆಸಕ್ತರು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಅಥವಾ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಆಗಸ್ಟ್ 16 ರೊಳಗಾಗಿ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-295415 ಅಥವಾ ಆಯಾ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸುವುದು.
ಆಕ್ಷೇಪಣೆ/ತಕರಾರು ಸಲ್ಲಿಸಲು ಆಹ್ವಾನ
ಕರ್ನಾಟಕ ರಾಜ್ಯದಲ್ಲಿ ವಾಸಿಸುವ ಮೊಗೇರ್ ಜಾತಿಯ ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿ ಪಟ್ಟಿಯಲ್ಲಿ ಸೇರಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಹಿಂದುಳೀದ ವರ್ಗಗಳ ಆಯೋಗವು ಸರ್ಕಾರದ ಆದೇಶ ಸಂ. ಸಕಇ/225/ಬಿಸಿಎ/2000, ದಿ:30/03/2002 ರ ಪ್ರವರ್ಗ-1 ಅನುಕ್ರಮ ಸಂ.: 6(ಎಇ) ರಲ್ಲಿ ‘ಮೊಗೇರ್’ ಜಾತಿಯನ್ನು ಕೈಬಿಡುವ ಬಗ್ಗೆ ಸಾರ್ವಜನಿಕರು/ ಸಂಘಸಂಸ್ಥೆಗಳಿಂದ ಆಕ್ಷೇಪಣೆ /ತಕರಾರುಗಳನ್ನು ಆಹ್ವಾನಿಸಿದೆ.ಸಾರ್ವಜನಿಕರು ಆಕ್ಷೇಪಣೆಗಳೇನಾದರೂ ಇದ್ದಲ್ಲಿ, ಈ ಪ್ರಕಟಣೆ ಹೊರಡಿಸಿದ 10 ದಿನಗಳೊಳಗೆ ಸಂಬಂಧಿಸಿದ ಜಿಲ್ಲಾ ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರಿಗೆ ಲಿಖಿತವಾಗಿ ಆಕ್ಷೇಪಣೆ/ತಕರಾರುಗಳನ್ನು ಸಲ್ಲಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50 ರಿಯಾಯಿತಿ
ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ 2023ರ ಆಗಸ್ಟ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ. 50 ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು. ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ. ಅಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಆನ್‍ಲೈನ್ www.kannadapustakapradhikara.com (ನಮ್ಮ ಪುಸ್ತಕಗಳ ವಿಭಾಗ) ನಲ್ಲಿ ಕೂಡ ಈ ಶೇ.50 ರಿಯಾಯಿತಿ ಲಭ್ಯವಿದೆ.ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈವರೆಗೆ ಪ್ರಕಟಿಸುತ್ತಾ ಬಂದಿದೆ. ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಹತ್ತು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಇದುವರೆಗೆ ಸುಮಾರು 704 ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ. ಅತ್ಯಂತ ಮೌಲಿಕವಾದ, ಪ್ರಾಜ್ಞರಿಂದ ರಚಿತವಾದ ಈ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸಬೇಕೆಂಬ ಉದ್ದೇಶ ಕನ್ನಡ ಪುಸ್ತಕ ಪ್ರಾಧಿಕಾರ ಹೊಂದಿದೆ ಎಂದು ಆಡಳಿತಾಧಿಕಾರಿ ಕೆ.ಬಿ.ಕಿರಣ್ ಸಿಂಗ್ ತಿಳಿಸಿದ್ದಾರೆ.
ಶಿವಮೊಗ್ಗ ನಗರದಲ್ಲಿ ವಿದ್ಯುತ್ ಕಟ್
ಶಿವಮೊಗ್ಗ ಮೆಸ್ಕಾಂ ವಿಭಾಗ ಇದೇ ಆಗಸ್ಟ್ 2 ರಂದು ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ಆಗಸ್ಟ್ 02 ರ ಬೆಳಿಗ್ಗೆ 09.00 ರಿಂದ ಮಧ್ಯಾಹ್ನ 1.00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಪೊಲೀಸ್ ಚೌಕಿ, ಸೂಡಾ ಕಚೇರಿ, ದಯಾನನ ಪ್ರಿಂಟರ್ಸ್, ಕೆಂಚಪ್ಪ ಲೇಔಟ್, ಎನ್.ಎಂ.ಸಿ ಕಾಂಪೌಂಡ್, ಕುವೆಂಪು ಬಡಾವಣೆ, ಲಕ್ಷ್ಮೀಪುರ ಹಾಗೂ ಸುತ್ತಮುತ್ತಲಿನ ಹಳ್ಳಿಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇನ್ನಷ್ಟು ಸುದ್ದಿಗಳು