ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರ ವಿರುದ್ಧ ಸುಮುಟೋ ಕೇಸ್! ಕಾರಣ? ಮನೆ ಮುಂದೆ ನಿಲ್ಲಿಸಿದ್ದ ಒಮಿನಿಗೆ ಬೆಂಕಿ, ಎಫ್​ಐಆರ್​!

KARNATAKA NEWS/ ONLINE / Malenadu today/ Aug 2, 2023 SHIVAMOGGA NEWS

ಮನೆ ಮುಂದೆ ನಿಲ್ಲಿಸಿದ್ದ ಒಮಿನಿಗೆ ಬೆಂಕಿ

ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು  ನ್ಯೂ ಟೌನ್ ಪೊಲೀಸ್ ಸ್ಟೇಷನ್ (New Town Police Station) ವ್ಯಾಪ್ತಿಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಒಮಿನಿ ವ್ಯಾನ್​ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಪ್ರವೀಣ್​ ಎಂಬವರಿಗೆ ಸೇರಿದ ಒಮನಿ ವಾಹನ ಘಟನೆಯಲ್ಲಿ ಅರ್ದಂಬರ್ಧ ಸುಟ್ಟು ಹೋಗಿದೆ. ಇನ್ನೂ ಘಟನೆ ಸಂಬಂಧ ಪೊಲೀಸರಿಗೆ ದೂರು ನೀಡಲಾಗಿದ್ದು, ಆರೋಪಿಗಳು ಯಾರು ಎಂಬುದು ಇನ್ನಷ್ಟೆ ಗೊತ್ತಾಗಬೇಕಿದೆ. 

ಉಸ್ತುವಾರಿ ಸಚಿವರಿಗೆ ಮುತ್ತಿಗೆ ದಾಖಲಾಯ್ತು ಎಫ್​ಐಆರ್

ಕಳೆದ  ಜುಲೈ  26 ರಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪನವರ (Minister Madhu Bangarappa) ವಿರುದ್ಧ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ ನಡೆಸಿತ್ತು. ಸಭಾಂಗಣದೊಳಗೆ ನುಗ್ಗಿ ಪ್ರತಿಭಟನೆ ನಡೆಸಿದ ಸಂಬಂಧ ಯುವ ಮೋರ್ಚಾ ಕಾರ್ಯಕರ್ತರ ವಿರುದ್ದ ಜಯನಗರ ಪೊಲೀಸ್ ಸ್ಟೇಷನ್​ನಲ್ಲಿ ಎಫ್ಐಆರ್ ದಾಖಲಾಗಿದೆ. ಪ್ರತಿಭಟನೆ ನಂತರ ಕಾರ್ಯಕರ್ತರನ್ನು ಪೊಲೀಸರು ಸ್ಟೆಷನ್​​ಗೆ ಕರೆತಂದಿದ್ದರು. ಇನ್ನೊಂದೆಡೆ ಶಿವಮೊಗ್ಗ ಶಾಸಕ ಕಾರ್ಯಕರ್ತರನ್ನು ಬಿಡುಗಡೆಗೊಳಿಸುವಂತೆ ಠಾಣೆ ಎದುರು ಪ್ರತಿಭಟಿಸಿದ್ದರು. ಆನಂತರ ಕಾರ್ಯಕರ್ತರನ್ನ ಬಿಡುಗಡೆಗೊಳಿಸಲಾಗಿತ್ತು. ಸದ್ಯ ಇದೇ ವಿಚಾರದಲ್ಲಿ ಎಫ್ಐಆರ್ ದಾಖಲಾಗಿದೆ. 

ತೀರ್ಥಹಳ್ಳಿಯಲ್ಲಿ ಕೋಳಿ ಪಡೆ ನಡೆಸ್ತಿದ್ದವರ ಮೇಲೆ ಪೊಲೀಸರ ರೇಡ್!

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ನಡೆಯುತ್ತಿದ್ದ ಕೋಳಿ ಅಂಕದ ಮೇಲೆ ಪೊಲೀಸರು ರೇಡ್ ಮಾಡಿದ್ದಾರೆ. ಮೂಲಗಳ ಪ್ರಕಾರ,  ಮಾಳೂರು ಪೊಲೀಸರು ಕೋಳಿ ಅಂಕ ನಡೆಸ್ತಿದ್ದವರ ಮೇಲೆ ದಾಳಿ ನಡೆಸಿದ್ದ ಹಲವರನ್ನ ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ತೀರ್ಥಹಳ್ಳಿ ತಾಲ್ಲೂಕಿನ ಹಳ್ಳಿಬೈಲ್​ ನಲ್ಲಿ ಕೋಳಿ ಅಂಕ ನಡೆಯುತ್ತಿತ್ತು. ಈ ಬಗ್ಗೆ ಮಾಹಿತಿ ಪಡೆದ ಮಾಳೂರು ಪೊಲೀಸ್ ಸ್ಟೇಷನ್​ ಪೊಲೀಸರು ದಾಳಿ ನಡೆಸಿದ್ದಾರೆ. ಅಂಕಕ್ಕೆ ಬಳಸಿದ್ದ ಕೋಳಿ ಹಾಗೂ ಅದಕ್ಕೆ ಸಂಬಂಧಿಸಿದವರನ್ನ ಪೊಲೀಸರು ವಶಕ್ಕೆ ಪಡೆದಿದ್ಧಾರೆ ಎಂಬ ಮಾಹಿತಿ ಸ್ಥಳೀಯರಿಂದ ಲಭ್ಯವಾಗಿದೆ. ಈ ಬಗ್ಗೆ ತೀರ್ಥಹಳ್ಳಿ ಪೊಲೀಸರಿಂದ ಅಧಿಕೃತ ಮಾಹಿತಿ ಇನ್ನಷ್ಟೆ ಹೊರಬರಬೇಕಿದೆ. 

Shivamogga Malenadu Today

 ​ 

 

 

Leave a Comment