KARNATAKA NEWS/ ONLINE / Malenadu today/ Aug 4, 2023 SHIVAMOGGA NEWS
ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ನಿಟ್ಟೂರು ಸಮೀಪ ನಿನ್ನೆ ಬಸ್ವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಸಂಭವಿಸಿದೆ. ಕೆಲದಿನಗಳ ಹಿಂದ ಸಾಗರ ತಾಲ್ಲೂಕಿನ ಗೆಣಸಿನಕುಣಿ ಬಳಿಯಲ್ಲಿ ಖಾಸಗಿ ಬಸ್ವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಯಾಗಿತ್ತು. ಪರಿಣಾಮ ಕರೆಂಟ್ ವಯರ್ ಬಸ್ ಮೇಲೆಯೆ ಬಿದ್ದಿತ್ತು. ಈ ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದರು.
ಇದರ ಬೆನ್ನಲ್ಲೆ ನಿನ್ನೆ ನಿಟ್ಟೂರು ಸಮೀಪ ನಾಗೋಡಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿ ಬಸ್ಸೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ತಮಿಳುನಾಡಿನ ವಂದವಾಸಿಯಿಂದ ಬಂದಿದ್ದ ಬಸ್ ಹುಂಚಾದ ಮೂಲಕ ಸಾಗಿ ಕೊಲ್ಲೂರು ಕಡೆಗೆ ಹೋಗುತ್ತಿತ್ತು. ದನವೊಂದಕ್ಕೆ ಡಿಕ್ಕಿಯಾಗುವುದನ್ನ ತಪ್ಪಿಸುವ ವೇಳೆ ಬಸ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ . ಅದೃಷ್ಟಕ್ಕೆ ಯಾವುದೇ ಅಪಾಯ ಸಂಭವಿಸಲಿಲ್ಲ. ಬಸ್ನಲ್ಲಿ 51 ಜನರಿದ್ದರು. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಇನ್ನಷ್ಟು ಸುದ್ದಿಗಳು
ಶರಾವತಿ ಹಿನ್ನೀರಿನಲ್ಲಿ ಮುಳುಗಿತು ಲಾರಿ! ಲಾಂಚ್ ಹತ್ತಿಸುವಾಗ ನಡೆದ ಘಟನೆ!
ಬಾಯಿ ತಪ್ಪಿ ಆಡಿದ ಮಾತು! ಖರ್ಗೆ, ಖಂಡ್ರೆ ಬಗ್ಗೆ ಅಪಾರ ಗೌರವವಿದೆ ಎಂದರು ಮಾಜಿ ಗೃಹಸಚಿವ!
ಪ್ರತಿಭಟನೆ ಸಂದರ್ಭದಲ್ಲಿ ಆರಗ ಜ್ಞಾನೇಂದ್ರರವರು ಆಡಿದ ಮಾತು ವಿವಾದಕ್ಕೆ ಕಾರಣವಾಯ್ತಾ?
ಮಹಿಳೆಯ ಕೈ ಹಿಡಿದು ಎಳೆದಾಡಿದ್ದಕ್ಕೆ ಕೋರ್ಟ್ ಕೊಟ್ಟ ಶಿಕ್ಷೆ ಏನು ಗೊತ್ತಾ?
