ಹಿರಿಯ ಮುಖಂಡ ಕಾಗೋಡು ತಿಮ್ಮಪ್ಪರಿಗೆ ಅರಸಿ ಬಂದ ಅರಸು ಪ್ರಶಸ್ತಿ!

KARNATAKA NEWS/ ONLINE / Malenadu today/ Aug 18, 2023 SHIVAMOGGA NEWS  

ರಾಜ್ಯ ಸರ್ಕಾರದಿಂದ ಕೊಡಲ್ಪಡುವ ದೇವರಾಜ ಅರಸು ಪ್ರಶಸ್ತಿಯನ್ನು ಈ ಸಾಲಿನಲ್ಲಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪನವರಿಗೆ ಘೋಷಿಸಿದೆ. ಸಮಾಜವಾದಿ ಪಕ್ಷದಿಂದ  ತಮ್ಮ ರಾಜಕೀಯ ಜೀವನವನ್ನು ಆರಂಭಿಸಿದ ಕಾಗೋಡು ತಿಮ್ಮಪ್ಪನವರಿಗೆ ಈ ಪ್ರಶಸ್ತಿ ಬಂದಿರುವುದು ಮಲೆನಾಡಿಗೆ ಹೆಮ್ಮೆಯ ಸಂಗತಿಯಾಗಿದೆ. 

ಕಾಗೋಡು ತಿಮ್ಮಪ್ಪರವರಿಗೆ 2023–24 ನೇ ಸಾಲಿ ದೇವರಾಜ ಅರಸು ಪ್ರಶಸ್ತಿ ಲಭ್ಯವಾಗಿದ್ದು, ಇದೇ 20 ರಂದು ವಿಧಾನಸೌಧದ ಬಾಂಕ್ವೆಟ್‌ಹಾಲ್‌ನಲ್ಲಿ ನಡೆಯುವ ದೇವರಾಜ ಅರಸು ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನಿಸಲಾಗುತ್ತದೆ . ಈ ಬಗ್ಗೆ  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ ತಂಗಡಗಿ ಮಾಹಿತಿ ನೀಡಿದ್ದು, ಈ ಪ್ರಶಸ್ತಿಯು ₹5 ಲಕ್ಷ ನಗದು ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ ಎಂದು ತಿಳಿಸಿದ್ದಾರೆ.   

ಇನ್ನಷ್ಟು ಸುದ್ದಿಗಳು


 ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸ ಬಯಸಿರುವ  ಕಾಂಗ್ರೆಸ್​ ಪಕ್ಷದ ಆಕಾಂಕ್ಷಿ  ನಂಜೇಶ್ ಬೆಣ್ಣೂರು

 

Leave a Comment