KARNATAKA NEWS/ ONLINE / Malenadu today/ Aug 30, 2023 SHIVAMOGGA NEWS
ಇಂದಿನಿಂದ ರಾಯರ ಆರಾಧನೆ ಮಹೋತ್ಸವ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಗುರುರಾಯರ 352ನೇ ಆರಾಧನೆ ಮಹೋತ್ಸವಕ್ಕೆ ಶ್ರೀಮಠದ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥರು ಗೋಪೂಜೆ ಸಲ್ಲಿಸಿ, ಧ್ವಜಾರೋಹಣ ಮಾಡುವ ಮೂಲಕ ಚಾಲನೆ ನೀಡಿದರು.

ಮಂತ್ರಾಲಯದಲ್ಲಿ ಗುರುರಾಯರ ಆರಾಧನಾ ಮಹೋತ್ಸವಕ್ಕೆ ಚಾಲನೆ #Mantralaya pic.twitter.com/sQ4TP75oW9
— malenadutoday.com (@CMalenadutoday) August 30, 2023
ರಾಯರ 352ನೇ ಆರಾಧನಾ ಮಹೋತ್ಸವಕ್ಕೆ ಶ್ರೀ ಮಠವು ಆರಾಧನೆಗಾಗಿ ವಿಶಿಷ್ಟ ರೀತಿಯ ದೀಪಾಲಂಕಾರ ಮತ್ತು ಪುಷ್ಪಾಲಂಕಾರ ಮಾಡುವ ಮೂಲಕ ಸಕಲ ಸಿದ್ಧತೆ ಮಾಡಿಕೊಂಡಿದೆ. ಶ್ರೀಮಠದ ಮುಂಭಾಗದಲ್ಲಿ ಗೋ ಪೂಜೆ, ಅಶ್ವ ಪೂಜೆ, ಧಾನ್ಯ ಪೂಜೆ ಹಾಗೂ ಧ್ವಜಾರೋಹಣ ನೆರವೇರಿಸಿ ಏಳು ದಿನಗಳ ಆರಾಧನಾ ಮಹೋತ್ಸವಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಿದರು.
ಏಳು ದಿನಗಳ ಸಪ್ತರಾತ್ರೋತ್ಸವದ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಲಿವೆ. ಇನ್ನೂ ಆರಾಧನಾ ಮಹೋತ್ಸವದ ಹಿನ್ನೆಲೆಯಲ್ಲಿ ನದಿಯಲ್ಲಿ ನೀರಿನ ಕೊರತೆ ಎದುರಾಗದಂತೆ, ಹೊಳೆಗೆ ಅಲ್ಪ ಪ್ರಮಾಣದಲ್ಲಿ ನೀರು ಹರಿಸಿರುವ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಮಾತನಾಡಿದ ಶ್ರೀಗಳು ಮಠಕ್ಕೆ ಆಗಮಿಸುವ ಭಕ್ತರಿಗೆ ಯಾವುದೇ ರೀತಿಯಾದಂತಹ ತೊಂದರೆ ಆಗದಂತೆ ವ್ಯವಸ್ಥೆ ಮಾಡಲಾಗುವುದು ಎಂದರು.
ಇನ್ನಷ್ಟು ಸುದ್ದಿಗಳು
ಪ್ರೀತಿ ಪೆಟ್ಟು ಹುಷಾರು! ಪ್ರೇಮಿಸಿದ ಯುವಕನನ್ನ ಕೂಡಿ ಹಾಕಿ ಹೊಡೆದ ಹುಡುಗಿ ಕಡೆಯವರು! ದಾಖಲಾಯ್ತು ಎಫ್ಐಆರ್!
ಮನೆ ಹಿತ್ತಲಲ್ಲಿದ್ದ ಬಾವಿಗೆ ಬಿದ್ದ ಮಹಿಳೆ! ಬಚಾವ್ ಆಗಿದ್ದೇ ಹೆಚ್ಚು! ನಡೆದಿದ್ದೇನು?