KARNATAKA NEWS/ ONLINE / Malenadu today/ Sep 10, 2023 SHIVAMOGGA NEWS
ಶಿವಮೊಗ್ಗದಲ್ಲಿ ಗಣಪತಿ ಕೂರಿಸುವ ಸಂಬಂಧ ಈಗಾಗಲೇ ಜಿಲ್ಲಾಡಳಿತ ಏಕಗವಾಕ್ಷಿ ಕೇಂದ್ರವನ್ನು ಸ್ಥಾಪಿಸಿದ್ದು, ಅಲ್ಲಿ ವಿವಿಧ ಇಲಾಖೆಗಳ ಅನುಮತಿ ಪಡೆಯುವಂತೆ ಸಾರ್ವಜನಿಕ ಗಣಪತಿ ಪ್ರತಿಷ್ಟಾಪನಾ ಸಮಿತಿಗಳಿಗೆ ತಿಳಿಸಿದೆ. ಇದರ ನಡುವೆ ಗಣಪತಿ ಸಮಿತಿಗಳಿಗೆ ಕೆಲವೊಂದು ಕ್ರಮಗಳನ್ನು ಅನುಸರಿಸುವಂತೆ ಪ್ರಕಟಣೆಯೊಂದನ್ನು ಹೊರಡಿಸಿದೆ. ಈ ಸಂಬಂಧ ಜಿಲ್ಲಾಡಳಿತದಿಂದ ಅಧಿಕೃತ ಪ್ರಕಟಣೆಯೊಂದನ್ನು ನೀಡಿದೆ.
ಏನಿದೆ ಪ್ರಕಟಣೆಯಲ್ಲಿ?
ಪ್ರತಿ ವರ್ಷದಂತೆ ಈ ಬಾರಿಯು ಸ್ವರ್ಣ ಗೌರಿ ಹಾಗೂ ವರಸಿದ್ದಿವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರಿಸ್ (POP) ಮತ್ತು ಬಣ್ಣದ ವಿಗ್ರಹಗಳನ್ನು ಸ್ಥಾಪಿಸಿ ಪೂಜಿಸಿದ ನಂತರ ಕೆರೆ ಬಾವಿ ಹಾಗೂ ಇನ್ನಿತರ ನೈಸರ್ಗಿಕ ಜಲ ಮೂಲಗಳಿಗೆ ವಿಸರ್ಜಿಸುವುದು ಸಂಪ್ರಾದಯವಾಗಿದ್ದು, ಇದರಿಂದಾಗಿ ನೈಸರ್ಗಿಕ ಜಲಮೂಲಗಳು ಕಲುಷಿತಗೊಂಡು ಇವುಗಳ ಭೌತಿಕ ಹಾಗೂ ರಾಸಾಯನಿಕ ಗುಣಮಟ್ಟವು ಮಾರ್ಪಟ್ಟು ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುವುದಲ್ಲದೇ ಪ್ರಾಣಿ, ಪಕ್ಷಿ ಹಾಗೂ ಇತರೇ ಜಲಚರಗಳ ಜೀವಕ್ಕೆ ಅಪಾಯವಾಗುತ್ತದೆ. ಅಲ್ಲದೇ ಇಂತಹ ಕಲುಷಿತ ನೀರಿನಿಂದ ಸಾರ್ವಜನಿಕರ ಆರೋಗ್ಯಕ್ಕೂ ಧಕ್ಕೆ ಉಂಟಾಗುತ್ತದೆ.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಸದರಿ ಹಬ್ಬದ ಆಚರಣೆಯಿಂದ ಉಂಟಾಗುವ ಮಾಲಿನ್ಯದಿಂದ ನೈಸರ್ಗಿಲ ಜಲಮೂಲಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ದಿನಾಂಕ 20,07, 2016 ರಂದು ಅಧಿಸೂಚನೆಯನ್ನು ಹೊರಡಿಸಿದ್ದು, ಪ್ಲಾಸ್ಟರ್ ಆಫ್ ಪ್ಯಾರಿಸ್ ಬಣ್ಣ ಲೇಪಿತವಾದ ಗೌರಿ ಮತ್ತು ಗಣೇಶ ವಿಗ್ರಹಗಳನ್ನು ಇನ್ನು ಮುಂದೆ ರಾಜ್ಯದ ಯಾವುದೇ ಕೆರೆ, ಬಾವಿ, ಕಟ್ಟೆ ಮತ್ತು ಇತರೆ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ.
ಆದ್ದರಿಂದ ಸಾರ್ವಜನಿಕರು ಈ ಕೆಳಕಂಡ ಕ್ರಮಗಳನ್ನು ಅನುಸರಿಸಿ ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬವನ್ನು ಆಚರಿಸಿ ನೈಸರ್ಗಿಕ ಜಲ ಸಂಪನ್ಮೂಲಗಳನ್ನು ಸಂರಕ್ಷಿಸಲು ಸಹಕರಿಸಬೇಕಾಗಿ ಕೋರಿದೆ.
ಪ್ಲಾಸ್ಟರ್ ಆಫ್ ಪ್ಯಾರಿಸ್ ಬಣ್ಣ ಲೇಪಿತವಾದ ವಿಗ್ರಹಗಳನ್ನು ತಯಾರಿಸಬಾರದೆಂದು ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಜಲ ಮಾಲಿನ್ಯ (ನಿವಾರಣೆ ಮತ್ತು ನಿಯಂತ್ರಣ) ಕ-1974 ರ ಪ್ರಕಾರ ಕಲಂ 33(ಎ)ಅನ್ವಯ ರಾಜ್ಯದ ಯಾವುದೇ ಜಲ ಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಬು ಲೇಪಿತ ಎಂದ ವಿಗ್ರಹಗಳನ್ನು ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಐ. ಪಿಸಿ ಸೆಕ್ಷನ್ 18 ರ ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು.
ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ಬಣ್ಣ ರಹಿತ ಮಣ್ಣಿನ ನೈಸರ್ಗಿಕ ಮೂರ್ತಿಗಳೊಂದಿಗೆ ಹಬ್ಬ ಆಚರಿಸಿ ತದನಂತರ ಗೌರಿ ಗಣೇಶ ಮೂರ್ತಿಗಳನ್ನು ನಗರ ಸಭೆ/ಪುರ ಸಭೆ ವತಿಯಿಂದ ನಿಗದಿ ಪಡಿಸಲಾಗುವ ಸ್ಥಳಗಳಲ್ಲಿ ಮಾತ್ರವೇ ವಿಗ್ರಹಗಳನ್ನು ವಿಸರ್ಜಿಸುವುದು,
ಗೌರಿ ಗಣೇಶ ಮೂರ್ತಿಗಳನ್ನು ವಿಸರ್ಜಿಸುವ ಸಂದರ್ಭದಲ್ಲಿ ಹಸಿ ಕಸ (ಹೂವು, ಹಣ್ಣು, ಬಾಳೆಕಂಬ, ಮಾವಿನ ತೋರಣ, ಇತ್ಯಾದಿ ಅಲಂಕಾರಿಕ ವಸ್ತುಗಳು) ಪ್ರತ್ಯೇಕಿಸಿ ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೆ, ಮಹಾನಗರ ಪಾಲಿಕೆ ನಗರ ಸಭೆ / ಪುರ ಸಭೆಯಲ್ಲಿ ಪಂಚಾಯತ್ನ ಕಸ ಸಂಗ್ರಹಣೆ ವಾಹನಕ್ಕೆ ನೀಡುವುದು.
ಸಾರ್ವಜನಿಕವಾಗಿ ನಡೆಸುವ ಗಣೇಶ ಮೂರ್ತಿಯ ಉತ್ಸವದ ಚಪ್ಪರಕ್ಕೆ ಪರಿಸರ ಸ್ನೇಹಿ ವಸ್ತುಗಳನ್ನೇ ಬಳಸಿ ಪ್ಲಾಸ್ಟಿಕ್ ವಸ್ತುಗಳ ಬಳಕೆ ಮಾಡಬೇಡಿ,
ರಾಜ್ಯದಲ್ಲಿ ನಿಷೇಧಿಸಲಾದ ಏಕ ಬಳಕ ಪ್ಲಾಸ್ಟಿಕ್ ವಸ್ತುಗಳನ್ನು ಯಾವುದೇ ಕಾರಣಕ್ಕೂ ಬಳಸದೇ ಇರುವುದು ಮತ್ತು ಬಳಸಿದಲ್ಲಿ ಸೂಕ್ತ ದಂಡವನ್ನು ಸ್ಥಳೀಯ ಸಂಸ್ಥೆಗಳ ಮೂಲಕ ವಿಧಿಸಲಾಗುವುದು,
ಇನ್ನಷ್ಟು ಸುದ್ದಿಗಳು
ಬಾರ್ನಲ್ಲಿ ಎಣ್ಣೆ ಕೊಡ್ಲಿಲ್ಲ ಎಂದು ಸಿಬ್ಬಂದಿಯನ್ನ ಅಟ್ಟಾಡಿಸಿ ಹಲ್ಲೆ! ಬಿಹೆಚ್ ರೋಡ್ನಲ್ಲಿ ನಿನ್ನೆ ನಡೆದಿದ್ದೇನು?
ಸಚಿವರ ಶಾಕ್/ 48 ಗಂಟೆಯಲ್ಲಿ ಬದಲಾಯ್ತು ಶಿವಮೊಗ್ಗ AIRPORT ನಲ್ಲಿದ್ದ ಈ ವ್ಯವಸ್ಥೆ!




