ಸೆಪ್ಟೆಂಬರ್ 25 ಕ್ಕೆ ಕುವೆಂಪು ರಂಗಮಂದಿರದಲ್ಲಿ ಜನತಾ ದರ್ಶನ! ಯಾರೆಲ್ಲಾ ದೂರು ಸಲ್ಲಿಸಬಹುದು! ಸಲ್ಲಿಸುವ ವಿಧಾನ ಹೇಗೆ? ಇಲ್ಲಿದೆ ಮಾಹಿತಿ

This Article Written by / Malenadu Today / ಸೆಪ್ಟೆಂಬರ್ 22, 2023

KARNATAKA NEWS/ ONLINE / Malenadu today/ Sep 22, 2023 SHIVAMOGGA NEWS’

ಶಿವಮೊಗ್ಗ ಜಿಲ್ಲೆಯ ಜನರ ಅಹವಾಲುಗಳನ್ನು ಜಿಲ್ಲಾಮಟ್ಟದಲ್ಲಿಯೇ ಆಲಿಸಿ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್. ಬಂಗಾರಪ್ಪ ಅವರ ನೇತೃತ್ವದಲ್ಲಿ ಸೆ. 25ರಂದು ಬೆಳಿಗ್ಗೆ 10.30ರಿಂದ ನಗರದ ಕುವೆಂಪು ರಂಗಮಂದಿರದಲ್ಲಿ ಜನತಾದರ್ಶನ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ ಆರ್​ ಸೆಲ್ವಮಣಿ ತಿಳಿಸಿದ್ದಾರೆ.

ಈ ಕಾರ್ಯಕ್ರಮವನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲೆಯ ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಲಾಗುತ್ತಿದ್ದು, ಸ್ಥಳೀಯ ಸಮಸ್ಯೆಗಳಿಗೆ ಸ್ಥಳೀಯವಾಗಿಯೇ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಆಡಳಿತಾರೂಢ ಸರ್ಕಾರದ ಆಶಯದಂತೆ ಈ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್. ಬಂಗಾರಪ್ಪ ಸೇರಿದಂತೆ ಸ್ಥಳೀಯ ಚುನಾಯಿತ ಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಕಾರ್ಯಕ್ರಮವನ್ನು ನಡೆಸಲಾಗುವುದು. ಈ ಸಂದರ್ಭದಲ್ಲಿ ಜಿಲ್ಲೆಯ ಎಲ್ಲಾ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದು, ಸಾರ್ವಜನಿಕರ ಅಹವಾಲುಗಳಿಗೆ, ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿ ನಿರ್ದೇಶನದಂತೆ ರಾಜ್ಯಾದ್ಯಂತ ಏಕಕಾಲದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದ್ದು, ಅಂದು ಬೆಳಿಗ್ಗೆ 9.30ರಿಂದ ನಿಗದಿಪಡಿಸಿದ ಸ್ಥಳದಲ್ಲಿ ಖುದ್ದು ಹಾಜರಿದ್ದು, ಸಾರ್ವಜನಿಕರು ತಮ್ಮ ಅವಹಾಲುಗಳನ್ನು ಸಲ್ಲಿಸಬಹುದಾಗಿದೆ. ವೈಯಕ್ತಿಕ ಅಹವಾಲು ಸಲ್ಲಿಸುವವರು ತಮ್ಮ ಅಹವಾಲನ್ನು ಒಬ್ಬರೇ ಸಲ್ಲಿಸಬಹುದು. ಸಾರ್ವಜನಿಕ ಅಹವಾಲು ಸಲ್ಲಿಸುವವರು ಗರಿಷ್ಠ ಇಬ್ಬರಿಗೆ ಅವಕಾಶವನ್ನು ನೀಡಲಾಗುವುದು. ಅರ್ಜಿ ನೋಂದಾಯಿಸಿದ ನಂತರ ಟೋಕನ್‌ಗಳನ್ನು ಪಡೆದುಕೊಳ್ಳಬೇಕು. ಸಾರ್ವಜನಿಕರು ತಮ್ಮ ಅಹವಾಲು ಸಲ್ಲಿಕೆಯಾದ ನಂತರ ಉಳಿದವರಿಗೆ ಅವಕಾಶ ಕಲ್ಪಿಸಿಕೊಡುವಂತೆ ಮನವಿ ಮಾಡಿದ್ದಾರೆ.


ಇನ್ನಷ್ಟು ಸುದ್ದಿಗಳು 

 


 

Education Minister,soraba

ಮುಂದಿನ ಸುದ್ದಿ ಒದಿ

Leave a Comment