ರಾಗಿಗುಡ್ಡದಲ್ಲಿ ಪರಿಸ್ಥಿತಿ ತಿಳಿಗೊಳಿಸಲು ತೆರಳಿದ್ದ ಎಸ್​ಪಿ ಮತ್ತು ಪೊಲೀಸರ ಮೇಲೆ ಕಲ್ಲು ! ಸ್ಥಳದಲ್ಲಿ 144 ಸೆಕ್ಷನ್​ ಜಾರಿ! ಲಾಠಿ ಪ್ರಹಾರ

KARNATAKA NEWS/ ONLINE / Malenadu today/ Oct 1, 2023 SHIVAMOGGA NEWS’ 

ಶಿವಮೊಗ್ಗ ನಗರದಲ್ಲಿ ಸಂಭ್ರಮದ ಈದ್ ಮಿಲಾದ್ ಮೆರವಣಿಗೆ ನಡೆಯುತ್ತಿದ್ದು, ಇನ್ನೊಂದೆಡೆ ರಾಗಿಗುಡ್ಡದಲ್ಲಿ ಅಹಿತಕರ ಘಟನೆಯೊಂದು ಸಂಭವಿಸಿದೆ. ಸ್ಥಳದಲ್ಲೀಗ 144 ಸೆಕ್ಷನ್ ವಿಧಿಸಲಾಗಿದೆ. 

ಏನಿದು ಘಟನೆ? 

ರಾಗಿಗುಡ್ಡದಲ್ಲಿ ನಡೆದ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ಸಂಭವಿಸಿದೆ. ಇದರ ಬೆನ್ನಲ್ಲೆ ಪೊಲೀಸರು ಜನರನ್ನು ಚದುರಿಸಿ, ಕೆಲವರನ್ನ ವಶಕ್ಕೆ ಪಡೆದಿದ್ದರು. ಆನಂತರ ಕೆಲವರು ಪೊಲೀಸರ ಮೇಲೂ ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ ಪರಿಸ್ಥಿತ ತಿಳಿಗೊಳಿಸಲು ಮುಂದಾದ ಎಸ್​ಪಿ ಮಿಥುನ್ ಕುಮಾರ್​ ರವರ ಕಡೆಗೂ ಕಲ್ಲು ಬೀಸಿದ್ದಾರೆ. , ಅಲ್ಲಿದ್ದ ಮನೆಗಳು ಹಾಗೂ ವಾಹನಗಳ ಮೇಲೆ ಕಲ್ಲೂ ತೂರಿದ್ದಾರೆ. ಈ ವೇಳೆ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು  ಲಾಠಿ ಪ್ರಹಾರ ಮಾಡಿದ್ದಾರೆ.

ತಕ್ಷಣವೇ ಸ್ಥಳದಲ್ಲಿದ್ದ ಎಸ್​ಪಿ ಮಿಥುನ್ ಕುಮಾರ್, ಮುನ್ನೆಚ್ಚರಿಕೆ ಕ್ರಮವಾಗಿ 144 ಸೆಕ್ಷನ್​ ಜಾರಿ  ಮಾಡಲಾಗಿದೆ. ಜನರು ಗುಂಪು ಸೇರದಂತೆ ಮನವಿ ಮಾಡಿದ್ದು ವದಂತಿಗಳಿಗೂ ಕಿವಿಗೊಡದಂತೆ ಮನವಿ ಮಾಡಿದ್ದಾರೆ. ಸದ್ಯ ಸ್ಥಳದಲ್ಲಿ ಪರಿಸ್ಥಿತಿ ಪೊಲೀಸರ ಕಂಟ್ರೋಲ್​ನಲ್ಲಿ ಆರ್​ಎಎಫ್​ ಪಡೆ ಸ್ಥಳದಲ್ಲಿ ಮೊಕ್ಕಾಂ ಹೂಡಿದೆ. ಘಟನೆಗಳ ಸಂಬಂಧ ಏಳು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ 


ಇನ್ನಷ್ಟು ಸುದ್ದಿಗಳು 

  1. ರಾಷ್ಟ್ರೀಯ ಹೆದ್ದಾರಿ 169 A ನಲ್ಲಿ ಬೆಳಗಿನ ಜಾವ ಧಗಧಗ ಹೊತ್ತಿ ಉರಿದ ಮರ! ಏನಿದು ಘಟನೆ

  2. ವಿಐಎಸ್​ಎಲ್​​ ಆವರಣದಲ್ಲಿ ಕಾಣಿಸಿಕೊಳ್ತು ಮತ್ತೊಂದು ಚಿರತೆ!

  3. ಸಿಗಂದೂರು ಚೌಡೇಶ್ವರಿ ದರ್ಶನ ಪಡೆದು ಬೆಂಗಳೂರಿಗೆ ಹೋಗುತ್ತಿದ್ದಾಗ ಶಾಕ್! ಸೂಡೂರು ಸಮೀಪ ಆಕ್ಸಿಡೆಂಟ್!


 

Leave a Comment