ರಾಗಿಗುಡ್ಡದಲ್ಲಿ ಪೊಲೀಸರ ಮೇಲೆ ಕಲ್ಲು! 30 ಕ್ಕೂ ಹೆಚ್ಚು ಮಂದಿ ವಶಕ್ಕೆ! ನಿನ್ನೆ ಘಟನೆ ಬಗ್ಗೆ ಎಸ್​ಪಿ ಹೇಳಿದ್ದೇನು?

ಹಂಚಿಕೊಳ್ಳಿ
WhatsApp Facebook X Telegram

KARNATAKA NEWS/ ONLINE / Malenadu today/ Oct 2, 2023 SHIVAMOGGA NEWS’  

ಶಿವಮೊಗ್ಗ ನಗರದ ರಾಗಿಗುಡ್ಡದಲ್ಲಿ ನಿನ್ನೆ ಪೊಲೀಸರ ಮೇಲೆಯೇ ನಡೆದ ಕಲ್ಲೂ ತೂರಾಟ  ಘಟನೆಗೆ ಸಂಬಂಧಿಸಿದಂತೆ ಶಿವಮೊಗ್ಗ ಪೊಲೀಸರು ಇದುವರೆಗೂ 30 ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಶಿವಮೊಗ್ಗಕ್ಕೆ ಹಿರಿಯ ಅಧಿಕಾರಿ ಮುರುಗನ್ ಆಗಮಿಸಿದ್ದಾರೆ ಎನ್ನಲಾಗಿದ್ದು, ಎಡಿಜಿಪಿ ಹಿತೇಂದ್ರ ಕೂಡ ಇವತ್ತು ಆಗಮಿಸುವ ಸಾದ್ಯತೆ ಇದೆ. 

ವಿಡಿಯೋ ಮಾಹಿತಿ ಮೇರೆಗೆ ಅರೆಸ್ಟ್ : ನಿನ್ನೆ ರಾಗಿಗುಡ್ಡದಲ್ಲಿ ನಡೆದ ಗಲಾಟೆ ಸಂಬಂಧ ಪೊಲೀಸರು ವಿಡಿಯೋಗಳನ್ನು ಪರಿಶೀಲಿಸುತ್ತಿದ್ದಾರೆ. ಮೆರವಣಿಗೆಯಲ್ಲಿ ಪಾಲ್ಗೊಂಡವರ ಪೈಕಿ ಯಾರೆಲ್ಲಾ ಗಲಾಟೆ ಮಾಡಿದ್ದಾರೆ. ಸಿಸಿಟಿವಿಯಲ್ಲಿ ಕಾಣಿಸಿಕೊಂಡಿರುವ ವ್ಯಕ್ತಿಗಳು ಯಾರ್ಯಾರು ಎಂದು ಹುಡುಕಾಡುತ್ತಿದ್ದಾರೆ. ಫೋಟೋ ಹಾಗೂ ವಿಡಿಯೋಗಳನ್ನು ಪಡೆದುಕೊಂಡು ಪೊಲೀಸರು ತಡರಾತ್ರಿಯವರೆಗೂ ಕಾರ್ಯಾಚರಣೆ ನಡೆಸಿದ್ದಾರೆ. 

ಎಸ್​ಪಿಯವರು ಹೇಳಿದ್ದೇನು? /ಶಿವಮೊಗ್ಗ ನಗರದ ರಾಗಿಗುಡ್ಡದಲ್ಲಿ ನಿನ್ನೆ ಸಂಜೆ ನಡೆದ ಘಟನೆ ಹಾಗೂ ಕಲ್ಲೂ ತೂರಾಟದ ಬಗ್ಗೆ ನಿನ್ನೆ ರಾತ್ರಿಯೇ ಪ್ರತಿಕ್ರಿಯಿಸಿದ್ದಾರೆ. ಈದ್ ಮಿಲಾದ್ ಮೆರವಣಿಗೆ ನಡೆಯುತ್ತಿದ್ದ ಸಂದರ್ಭದಲ್ಲಿ ಕಿಡಿಗೇಡಿಗಳಿಂದ ಕಲ್ಲು ತೂರಾಟ ನಡೆದಿದೆ, ಇದರಿಂದ ಕೆಲ ವಾಹನ, ಮನೆ ಜಖಂಗೊಂಡಿದೆ,  ಪೊಲೀಸ್ ಸೇರಿದಂತೆ ಕೆಲವರ ಮೇಲೆ ಕಲ್ಲು ಬಿದ್ದಿದೆ ಎಂದು ತಿಳಿಸಿದ ಅವರು, ಆನಂತರ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಕೆಲವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. 

ಅಲ್ಲದೆ , ಸ್ಥಳೀಯ ಪೊಲೀಸ್ ಮಾಹಿತಿ ಮತ್ತು ವಿಡಿಯೊ ಹಾಗೂ ಮಾಹಿತಿ ಆಧರಿಸಿ ಕಿಡಿಗೇಡಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿರುವ ಅವರು,  2 ಆರ್ ಎ ಎಫ್ ತುಕಡಿ, 20 ಕೆಎಸ್ಆರ್ಪಿ, 500 ಗೃಹ ರಕ್ಷಕದಳ  ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ. 

ಕಲ್ಲು ಏಟು ಬಿದ್ದಿರುವ ಪೊಲೀಸ್ ಸಿಬ್ಬಂದಿಯಿಂದಲೂ ದೂರು ಪಡೆದು ಪ್ರಕರಣ ದಾಖಲಿಸಲಾಗುತ್ತದೆ ಎಂದು ತಿಳಿಸಿರುವ ಎಸ್​ಪಿ ಮಿಥುನ್ ಕುಮಾರ್, ಶಾಂತಿನಗರ-ರಾಗಿಗುಡ್ಡ ಹೊರತುಪಡಿಸಿ ಉಳಿದೆಡೆ ಈದ್ ಮಿಲಾದ್ ಮೆರವಣಿಗೆ ಶಾಂತಿಯುತವಾಗಿ ನಡೆದಿದೆ ತಿಳಿಸಿದ್ದಾರೆ. ವದಂತಿಗಳಿಗೆ ಯಾರೂ ಕಿವಿಗೊಡಬಾರದು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ತಿಳಿಸಿದ್ದಾರೆ. 


ಇನ್ನಷ್ಟು ಸುದ್ದಿಗಳು 

  1.  ರಾಗಿಗುಡ್ಡದಲ್ಲಿ ಪರಿಸ್ಥಿತಿ ತಿಳಿಗೊಳಿಸಲು ತೆರಳಿದ್ದ ಎಸ್​ಪಿ ಮತ್ತು ಪೊಲೀಸರ ಮೇಲೆ ಕಲ್ಲು ! ಸ್ಥಳದಲ್ಲಿ 144 ಸೆಕ್ಷನ್​ ಜಾರಿ! ಲಾಠಿ ಪ್ರಹಾರ

  2. ನಮಗೆ ಬೆಲೆ ಇರುತ್ತಲ್ಲ ಎಂದು ಪ್ರಶ್ನಿಸಿದ ಬಾಲಕಿ! ಶಿಕ್ಷಕರ ಹಾಗೆ ವಿದ್ಯಾರ್ಥಿನಿಗೆ ಅರ್ಥ ಮಾಡಿಸಿದ ಸಚಿವ! ವೈರಲ್​ ಆಯ್ತು ವಿಡಿಯೋ!


 

ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor