ಶಿವಮೊಗ್ಗ ಜಿಲ್ಲೆ ಸಾಗರದ ಗಣಪತಿ ಕೆರೆ ಬಳಿಯಲ್ಲಿ ಪಲ್ಟಿಯಾದ ಕಾರು!

ಹಂಚಿಕೊಳ್ಳಿ
WhatsApp Facebook X Telegram

KARNATAKA NEWS/ ONLINE / Malenadu today/ Oct 10, 2023 SHIVAMOGGA NEWS

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ನಿನ್ನೆ ಎರಡು ಅಪಘಾತ ಪ್ರಕರಣಗಳು ಸಂಭವಿಸಿದೆ. ನಿನ್ನೆ ಸಂಜೆ ಸುಮಾರಿಗೆ ನಿಂತಿದ್ದ ಕೆಎಸ್​ಆರ್​ಟಿಸಿ ಬಸ್​ಗೆ ಬೈಕ್​​ವೊಂದು ಗುದ್ದಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದರು. ಈ ಪೈಕಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ತ್ರಿಬ್ಬಲ್ ರೈಡಿಂಗ್ ಬರುತ್ತಿದ್ದ ವಿದ್ಯಾರ್ಥಿಗಳು ನೇರವಾಗಿ ಬಸ್​ಗೆ ಗುದ್ದಿದ್ದರು. 

ಇನ್ನೂ ನಿನ್ನೆ ರಾತ್ರಿ ಸಾಗರ ಪೇಟೆಯ ಗಣಪತಿ ಕೆರೆಯ ಬಳಿಯಲ್ಲಿ  ಅಪಘಾತವೊಂದು ಸಂಭವಿಸಿದೆ. ಘಟನೆಯಲ್ಲಿ ಇಕೋ ಕಾರೊಂದು ಪಲ್ಟಿಯಾದ ಬಗ್ಗೆ ವರದಿಯಾಗಿದೆ. ಗಣಪತಿ ಕೆರೆಯ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದ್ದು, ಅದೃಷ್ಟಕ್ಕೆ ಯಾವುದೇ ಅಪಾಯ ಸಂಭವಿಸಿಲ್ಲ. ಇನ್ನೂ ಕಾರಿನಲ್ಲಿದ್ದವರಿಗೆ ಆದ ಗಾಯಗಳ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಪಲ್ಟಿಯಾದ ರಭಸಕ್ಕೆ ಕಾರು ಜಖಂಗೊಂಡಿದೆ.  ಅಲ್ಲದೆ ಘಟನೆಯಲ್ಲಿ ಕೆರೆಯ ಪಕ್ಕದಲ್ಲಿಯೇ ಕಾರು ಪಲ್ಟಿಯಾಗಿ ನಿಂತಿದೆ. 


ಇನ್ನಷ್ಟು ಸುದ್ದಿಗಳು 

  1. ಅಭಯ್ ಪ್ರಕಾಶ್ ಸಸ್ಪೆಂಡ್ ಪೊಲೀಸ್ ಇಲಾಖೆಯ ವೈಫಲ್ಯವೇ? ಹೀಗೆ ಮಾಡುವುದಾದರೆ ಹಲವರು ಅಮಾನತ್ತಲ್ಲಿರಬೇಕಿತ್ತಲ್ಲವೇ? ಯಾವ ತಪ್ಪಿಗೆ ಈ ಶಿಕ್ಷೆ? JP ಬರೆಯುತ್ತಾರೆ

  2. FACEBOOK , INSTAGRAM ಪೋಸ್ಟ್ ಹಾಕಬೇಕಾದರೆ ಹುಷಾರ್! ಬೀಳುತ್ತೆ ಕೇಸ್​! social media monitoring ಮಾಡುತ್ತಿದೆ ಶಿವಮೊಗ್ಗ ಪೊಲೀಸ್ ಇಲಾಖೆ

  3. ಈ ಹಾವು ನಿಮ್ಮ ಕಣ್ಣಿಗೆ ಬಿದ್ದಿತ್ತಾ? ಇದನ್ನ ಏನಂದು ಕರೆಯುತ್ತಾರೆ? ಈ ಹಾವಿನ ಮೈಮೇಲೆ ನೀರು ಇಂಗುತ್ತೆ ಗೊತ್ತಾ?


 

ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor