ಎಣ್ಣೆ ಹೊಡ್ಕೊಂಡು, ಬೀಡಿ ಸೇದ್ಕೊಂಡು ಇರ್ತಿದ್ದೆ! ಹೀಗ್ಯಾಕೆ ಹೇಳಿದ್ರು ರೇಣುಕಾಚಾರ್ಯ! ಶಿವಮೊಗ್ಗದಲ್ಲಿ ಮಾಜಿ ಸಚಿವರ ನಾಲ್ಕು ಮಾತು!

ಹಂಚಿಕೊಳ್ಳಿ
WhatsApp Facebook X Telegram

KARNATAKA NEWS/ ONLINE / Malenadu today/ Oct 10, 2023 SHIVAMOGGA NEWS

ಮಾಜಿ ಸಚಿವ ರೇಣುಕಾಚಾರ್ಯ ನಿನ್ನೆ ಶಿವಮೊಗ್ಗಕ್ಕೆ ಬಂದಿದ್ದರು. ಈ ವೇಳೆ ಅವರು ಹಲವು ವಿಚಾರಗಳ ಬಗ್ಗೆ ಪ್ರತಿಕ್ರಿಯಿಸಿದರು. ಅದರಲ್ಲಿಯು ಮುಖ್ಯವಾಗಿ ಬಿಎಸ್​ ಯಡಿಯೂರಪ್ಪ ನನ್ನ ಕೈ ಹಿಡಿಯದಿದ್ದರೇ ನಾನು ಎಣ್ಣೇ ಹೊಡ್ಕೊಂಡು ಬೀಡಿ ಸೇದ್ಕೊಂಡು ಇರುತ್ತಿದ್ದೆ ಎಂದು ಮನದಾಳವನ್ನು ತೆರೆದಿಟ್ಟಿದ್ದಾರೆ. 

ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಯಡಿಯೂರಪ್ಪ ಒಬ್ಬ ಶಿಲ್ಪಿಯಿದ್ದಂತೆ. ಕಾಡುಗಲ್ಲಿನಂತಿದ್ದ  ನನ್ನನ್ನು ಪರಿವರ್ತನೆ ಮಾಡಿದರು.  ಅವರು ಇಲ್ಲದಿದ್ದರೆ ನಾನು ಬೀಡಿ ಸೇದುತ್ತ, ಎಣ್ಣೆ ಹೊಡ್ಕೊಂಡು ಇರ್ತಿದ್ದೆ. ಎಂದಿದ್ದಾರೆ. 

ಬಿಜೆಪಿ ಹೈಕಮಾಂಡ್, ಬಿಎಸ್ ಯಡಿಯೂರಪ್ಪರವರನ್ನು ಕಡೆಗಣಿಸುವುದು ಸರಿಯಲ್ಲ ಎಂದ ಅವರು, ರಾಜ್ಯದಲ್ಲಿ ಯಡಿಯೂರಪ್ಪರನ್ನು ಮೂಲೆಗುಂಪು ಮಾಡಿ, ಮೋದಿ ಭಾವಚಿತ್ರ ಹಿಡಿದು ಹೋದರೆ ಮತ ಸಿಗಲ್ಲ ಎಂದು ವಾಗ್ದಾಳಿ ನಡೆಸಿದ್ರು. 

ರೇಣುಕಾಚಾರ್ಯರವರ ಮಾತಿನ ಅಂಶಗಳು!

  • ಗುಜರಾತ್ ಮಾದರಿ 70 ಜನ ಹೊಸಬರಿಗೆ ಟಿಕೆಟ್ ನೀಡಿ ವಿಧಾನಸಭಾ ಚುನಾವಣೆ ಎದುರಿಸಿದ್ರು. ಫಲಿತಾಂಶ ಏನಾಯ್ತು ? 

  • ಯಡಿಯೂರಪ್ಪ ಎಲ್ಲ ಸಮುದಾಯದವರಿಗೆ ಮೀಸಲಾತಿ ಕೊಡಲು ಹೋಗಿದ್ರು, ಅದಕ್ಕೆ ಬ್ರೇಕ್ ಹಾಕಿದ್ರು ಎಂದು ಸ್ವಪಕ್ಷದ ವರಿಷ್ಠರ ವಿರುದ್ಧವೇ ಹರಿಹಾಯ್ದರು.

  • ರಾಜ್ಯಾಧ್ಯಕ್ಷರ ಮೇಲೆ ಗೌರವವಿದೆ. ಆದರೆ. ನಮಗೆ ರಬ್ಬರ್ ಸ್ಟ್ಯಾಂಪ್ ರಾಜ್ಯ ಅಧ್ಯಕ್ಷರ ಅಗತ್ಯವಿಲ್ಲ. ನ

  • ನಗೂ ರಾಜ್ಯಾಧ್ಯಕ್ಷರಾಗುವ ಸಾಮರ್ಥ್ಯವಿದೆ. ಯಾರಿಗೆ ಸಾಮರ್ಥ್ಯವಿದೆಯೋ ಅವರನ್ನೆ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಲಿ. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಹಾಗೂ ವಿಪಕ್ಷ ನಾಯಕನ ಸ್ಥಾನವನ್ನು ಭರ್ತಿ ಮಾಡಬೇಕು

  • ಯಡಿಯೂರಪ್ಪ ವಿಚಾರದಲ್ಲಿ ಬಿಜೆಪಿ ನಾಯಕರು ಆತ್ಮಾವಲೋಕನ ಮಾಡಿಕೊಳ್ಳಲಿ. ಸರ್ವಾಧಿಕಾರಿ ಧೋರಣೆ ತೋರಬೇಡಿ

  •  ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಬೇಕಿದೆ. ಆದರೆ, ರಾಜ್ಯದಲ್ಲಿ ಯಡಿಯೂರಪ್ಪ ನಿರ್ಲಕ್ಷಿಸಿದರೆ ಬಿಜೆಪಿ ಇನ್ನಷ್ಟು ನೆಲೆಕಚ್ಚುತ್ತೆ. 


ಇನ್ನಷ್ಟು ಸುದ್ದಿಗಳು 

  1. ಅಭಯ್ ಪ್ರಕಾಶ್ ಸಸ್ಪೆಂಡ್ ಪೊಲೀಸ್ ಇಲಾಖೆಯ ವೈಫಲ್ಯವೇ? ಹೀಗೆ ಮಾಡುವುದಾದರೆ ಹಲವರು ಅಮಾನತ್ತಲ್ಲಿರಬೇಕಿತ್ತಲ್ಲವೇ? ಯಾವ ತಪ್ಪಿಗೆ ಈ ಶಿಕ್ಷೆ? JP ಬರೆಯುತ್ತಾರೆ

  2. FACEBOOK , INSTAGRAM ಪೋಸ್ಟ್ ಹಾಕಬೇಕಾದರೆ ಹುಷಾರ್! ಬೀಳುತ್ತೆ ಕೇಸ್​! social media monitoring ಮಾಡುತ್ತಿದೆ ಶಿವಮೊಗ್ಗ ಪೊಲೀಸ್ ಇಲಾಖೆ

  3. ಈ ಹಾವು ನಿಮ್ಮ ಕಣ್ಣಿಗೆ ಬಿದ್ದಿತ್ತಾ? ಇದನ್ನ ಏನಂದು ಕರೆಯುತ್ತಾರೆ? ಈ ಹಾವಿನ ಮೈಮೇಲೆ ನೀರು ಇಂಗುತ್ತೆ ಗೊತ್ತಾ?


 

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor