ಮತ್ತೆ ಮುನ್ನೆಲೆಗೆ ಆಯನೂರು ಮಂಜುನಾಥ್ | ಕೆಪಿಸಿಸಿಯಲ್ಲಿ ಮಹತ್ತರ ಜವಾಬ್ದಾರಿ ನೀಡಿದ ಡಿಕೆ ಶಿವಕುಮಾರ್

ಹಂಚಿಕೊಳ್ಳಿ
WhatsApp Facebook X Telegram
ಮತ್ತೆ ಮುನ್ನೆಲೆಗೆ ಆಯನೂರು ಮಂಜುನಾಥ್  |  ಕೆಪಿಸಿಸಿಯಲ್ಲಿ ಮಹತ್ತರ ಜವಾಬ್ದಾರಿ ನೀಡಿದ ಡಿಕೆ ಶಿವಕುಮಾರ್

KARNATAKA NEWS/ ONLINE / Malenadu today/ Oct 11, 2023 SHIVAMOGGA NEWS

ಮಾಜಿ ಸಂಸದ ಆಯನೂರು ಮಂಜನಾಥ್‌ ಅವರನ್ನು ಕೆಪಿಸಿಸಿ ವಕ್ತಾರರನ್ನಾಗಿ ನೇಮಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಆದೇಶಿಸಿದ್ದಾರೆ.

ಈ ಸಂಬಂಧ ಇಂದು ಪ್ರಕಟಣೆ ಹೊರಬಿದ್ದಿದೆ.  ದೃಶ್ಯ ಮಾಧ್ಯಮ, ಮುದ್ರಣ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕವಾಗಿ ರಾಜಕೀಯ ಸಾಮಾಜಿಕ ವಿಷಯಗಳ ಬಗ್ಗೆ ಚರ್ಚೆಯಲ್ಲಿ ಹೆಚ್ಚು ಪ್ರಚಾರ ದಲ್ಲಿರುವುದನ್ನು ಗಮನಿಸಿ, ಕಾಂಗ್ರೆಸ್ ಪಕ್ಷದ ವಿಚಾರಧಾರೆಗಳನ್ನು ಹಾಗೂ ಸರ್ಕಾರದ ಯೋಜನೆಗಳನ್ನು ಮಾಧ್ಯಮಗಳಲ್ಲಿ ಪರಿಣಾಮಕಾರಿ ಬಿಂಬಿಸುವ ಹಿನ್ನೆಲೆಯಲ್ಲಿ ಆಯನೂರು ಮಂಜುನಾಥ್ ಇವರನ್ನು “ಕೆ.ಪಿ.ಸಿ.ಸಿ. ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಲಾಗಿದೆ. 

ತಮಗೆ ನೀಡಿರುವ ಈ ಜವಾಬ್ದಾರಿಯನ್ನು ವಹಿಸಿಕೊಂಡು ಕೆಪಿಸಿಸಿಯ ಸಂವಹನ ಮತ್ತು ಮಾಧ್ಯಮ ಮುಖ್ಯಸ್ತರು ನೀಡುವ ಸಲಹೆ ಹಾಗೂ ಮಾರ್ಗದರ್ಶನಗಳ ಅನ್ವಯ ಕಾರ್ಯಪ್ರವೃತರಾಗಿ ಪಕ್ಷ ಬಲವರ್ದನೆಗೆ ಸಹಕಾರಿಯಾಗಬೇಕಾಗಿ ಕೋರುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ತಿಳಿಸಿದ್ದಾರೆ 


ಇನ್ನಷ್ಟು ಸುದ್ದಿಗಳು 

  1.  R M MANJUNATH GOWDA ರವರ ಮನೆಗಳ ಮೇಲೆ ED ದಾಳಿಗೆ ಕಾರಣವೇನು? ಏನಿದು ಪ್ರಕರಣ?

  2. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮೈಸೂರು ಮಹತ್ವದ ಪ್ರಕಟಣೆ! ಶಿವಮೊಗ್ಗದಲ್ಲಿಯೇ ನೋಂದಣಿ ಮಾಡಿಕೊಳ್ಳಿ

  3. ಶಿವಮೊಗ್ಗ ಮತ್ತೆ ಆಗುತ್ತಾ ಪವರ್ ಸೆಂಟರ್! ನವರಾತ್ರಿ ನಂತರ ಏನಾಗುತ್ತೆ? ರಾಜ್ಯ ರಾಜಕಾರಣದ ಕುತೂಹಲದ ಸುದ್ದಿ


 

ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor