KARNATAKA NEWS/ ONLINE / Malenadu today/ Oct 14, 2023 SHIVAMOGGA NEWS
ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ತುಮರಿ ಭಾಗದ ಶರಾವತಿ ಹಿನ್ನೀರಿನಲ್ಲಿ ನಿರ್ಮಾಣವಾಗುತ್ತಿರುವ ಸಿಗಂದೂರು ಹಾಗೂ ಹಸಿರುಮಕ್ಕಿ ಸೇತುವೆ ಕಾಮಗಾರಿ ಆದಷ್ಟು ಬೇಗ ಪೂರ್ಣಗೊಳಿಸಬೇಕು ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಸಚಿವರಿಗೆ ಮನವಿ ಮಾಡಿದ್ದಾರೆ
ಶರಾವತಿ ಹಿನ್ನೀರಿನಲ್ಲಿ ನಿರ್ಮಾಣವಾಗುತ್ತಿರುವ ಸಿಗಂದೂರು ಮತ್ತು ಹಸಿರುಮಕ್ಕಿಯ ಸೇತುವೆ ಕಾಮಗಾರಿಗಳ ಕುರಿತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಶಾಸಕ ಗೋಪಾಲಕೃಷ್ಣ ಬೇಳೂರು ಬೆಂಗಳೂರಿನಲ್ಲಿ ಶುಕ್ರವಾರ ಭೇಟಿ ಮಾಡಿ ಮಾತನಾಡಿ, ತ್ವರಿತವಾಗಿ ಸೇತುವೆ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಮನವಿ ಮಾಡಿದ್ದಾರೆ
ಈ ವೇಳೆ ಮಾತನಾಡಿದ ಅವರು, ಈ ಸೇತುವೆಗಳು ಹಿನ್ನೀರ ಮುಳುಗಡೆ ಭಾಗದ ಜನರ ಸಂಪರ್ಕ ಕೊಂಡಿ, ಬದುಕಿನ ಜೀವನಾಡಿ. ಸಿಗಂದೂರು ಸೇತುವೆ ಮತ್ತು ಹಸಿರುಮಕ್ಕಿ ಸೇತುವೆ ಕಾಮಗಾರಿ ಸ್ಥಳಕ್ಕೆ ಆಗಮಿಸಿ ಕೆಲಸ ವೀಕ್ಷಿಸಿ ಸಾಧ್ಯವಾದಷ್ಟು ಬೇಗ ಇವುಗಳನ್ನು ಪೂರ್ತಿಗೊಳಿಸಲು ಅಗತ್ಯವಿರುವ ಅನುದಾನವನ್ನು ಬಿಡುಗಡೆಗೊಳಿಸಬೇಕು ಎಂದು ಕೋರಿದ್ದಾರೆ
ಇನ್ನಷ್ಟು ಸುದ್ದಿಗಳು