ತಿರುಪತಿ, ಹೈದ್ರಾಬಾದ್, ಗೋವಾಕ್ಕೆ SHIVAMOGGA AIRPORT ಪ್ಲೈಟ್​ ಹಾರಾಟ | ಬುಕ್ಕಿಂಗ್ ಶುರು! | ದರ ಎಷ್ಟು ? ಯಾವಾಗಿನಿಂದ ಆರಂಭ ಗೊತ್ತಾ

ಹಂಚಿಕೊಳ್ಳಿ
WhatsApp Facebook X Telegram

KARNATAKA NEWS/ ONLINE / Malenadu today/ Oct 17, 2023 SHIVAMOGGA NEWS

ಶಿವಮೊಗ್ಗ ಏರ್​ಪೋರ್ಟ್​ನಿಂದ ಬೆಂಗಳೂರಿಗೆ ಮಾತ್ರನೇನಾ ವಿಮಾನ ಅನ್ನುವವರಿಗೆ ಇದೀಗ ಶಿವಮೊಗ್ಗದಿಂದ ಗೋವಾ, ತಿರುಪತಿ, ಹೈದರಾಬಾದ್​ಗೂ ಹೋಗಬಹುದು ಎನ್ನುವ ಉತ್ತರ ಸಿಕ್ಕಿದೆ. ಹೌದು,.  ಸ್ಟಾರ್​ ಏರ್​ಲೈನ್ಸ್​ ಶಿವಮೊಗ್ಗದಿಂದ ಗೋವಾ, ಹೈದರಾಬಾದ್ ಹಾಗೂ ತಿರುಪತಿಗೆ ಸಂಪರ್ಕ ಕಲ್ಪಿಸಿದ್ದು, ಇದೀಗ ಬುಕ್ಕಿಂಗ್ ಕೂಡ ಆರಂಭಿಸಿದೆ. 

Star Airlines ಸಂಸ್ಥೆಯು ಶಿವಮೊಗ್ಗದಿಂದ ತಿರುಪತಿ, ಗೋವಾ ಮತ್ತು ಹೈದರಾಬಾದ್‌ಗೆ ವಾರದಲ್ಲಿ ಆರು ದಿನ ವಿಮಾನಯಾನ ಸೇವೆ ಆರಂಭಿಸುತ್ತಿದೆ. ನವೆಂಬರ್‌ 17 ರಿಂದ ಸ್ಟಾರ್‌ ಏರ್‌ ತನ್ನ ಸೇವೆ ಆರಂಭಿಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಈ ಸಂಬಂಧ ಸಂಸ್ಥೆಯ ವೆಬ್​ಸೈಟ್​ನಲ್ಲಿ ಬುಕ್ಕಿಂಗ್ ಕೂಡ ಆರಂಭವಾಗಿದೆ.  

ಗೋವಾ, ತಿರುಪತಿ ಹಾಗೂ ಹೈದ್ರಾಬಾದ್​ಗೆ ಸರಿಸುಮಾರು ಒಂದೆ ರೀತಿಯ ದರಪಟ್ಟಿಯಿದ್ದು, ಇವತ್ತೆ ಬುಕ್​ ಮಾಡಿದರೆ, INR 12,305.00 ,  INR 14,545.00  ರೂಪಾಯಿಗಳ ಟಿಕೆಟ್ ಲಭ್ಯವಿದೆ. ಇನ್ನೂ   

ಬೆಳಗ್ಗೆ 9.30ಕ್ಕೆ ಹೈದರಾಬಾದ್‌ನಿಂದ ಹೊರಡಲಿದೆ. ಬೆಳಗ್ಗೆ 10.35ಕ್ಕೆ ಶಿವಮೊಗ್ಗ ತಲುಪಲಿದೆ. 

ಬೆಳಗ್ಗೆ 11ಕ್ಕೆ ಶಿವಮೊಗ್ಗದಿಂದ ಹೊರಟು ಮಧ್ಯಾಹ್ನ 12ಕ್ಕೆ ತಿರುಪತಿ ತಲುಪಲಿದೆ. 

ತಿರುಪತಿಯಿಂದ ಮಧ್ಯಾಹ್ನ 12.35ಕ್ಕೆ ಹೊರಟು ಮಧ್ಯಾಹ್ನ 1.40ಕ್ಕೆ ಶಿವಮೊಗ್ಗಕ್ಕೆ ಆಗಮಿಸಲಿದೆ. 

ಮಧ್ಯಾಹ್ನ 1.55ಕ್ಕೆ ಶಿವಮೊಗ್ಗದಿಂದ ಹೊರಟು ಮಧ್ಯಾಹ್ನ 2.45ಕ್ಕೆ ಗೋವಾ ತಲುಪಲಿದೆ.

ಗೋವಾದಿಂದ ಮಧ್ಯಾಹ್ನ 3.15ಕ್ಕೆ ಹೊರಟು ಸಂಜೆ 4.05ಕ್ಕೆ ಶಿವಮೊಗ್ಗ ತಲುಪಲಿದೆ.

ಸಂಜೆ 4.30ಕ್ಕೆ ಶಿವಮೊಗ್ಗದಿಂದ ಹೊರಟು ಸಂಜೆ 5.30ಕ್ಕೆ ಹೈದರಾಬಾದ್‌ ತಲುಪಲಿದೆ.


ಇನ್ನಷ್ಟು ಸುದ್ದಿಗಳು 

ಶೇ…ಹಾವು ಕಚ್ಚಿತು | ಮನೆ ಬಳಿ ಬಂದ ನಾಗರವನ್ನು ಹಿಡಿಯಲು ಹೋದವರ ಸ್ಥಿತಿ ಗಂಭೀರ | VIDEO VIRAL

ಪ್ರಯಾಣಿಕರ ಗಮನಕ್ಕೆ: ನೈಋತ್ಯ ರೈಲ್ವೆಯಿಂದ ದಸರಾ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಸಂಚಾರ | ಪೂರ್ತಿ ವಿವರ ಇಲ್ಲಿದೆ

ಶಿವಮೊಗ್ಗ ದಸರಾಕ್ಕೆ ಚಾಲನೆ | ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದ ಪಾಲಿಕೆ ಸದಸ್ಯರು | ಕುಣಿದು ಸಂಭ್ರಮಿಸಿದ ಶಾಸಕ ಎಸ್​.ಎನ್​. ಚನ್ನಬಸಪ್ಪ


 

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor