SHIVAMOGGA| Dec 15, 2023 | ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕುನಲ್ಲಿ ಪತ್ನಿಯನ್ನ ಪತಿಯೊಬ್ಬ ಹತ್ಯೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಳೆದ ಬುಧವಾರ ಈ ಘಟನೆ ನಡೆದಿದ್ದು, ಈ ಸಂಬಂಧ ಪೇಪರ್ ಟೌನ್ ಪೊಲೀಸ್ ಸ್ಟೇಷನ್ನಲ್ಲಿ ಪ್ರಕರಣ ದಾಖಲಾಗಿದೆ.
ಭದ್ರಾವತಿ ಬೊಮ್ಮನಕಟ್ಟೆ ಹೌಸಿಂಗ್ ಬೋರ್ಡ್ ನಲ್ಲಿ ರಮ್ಯಾ ಎಂಬಾಕೆಯ ಹತ್ಯೆ ನಡೆದಿದ್ದು, ಆಕೆಯ ಪತಿಯೇ ಅವರನ್ನ ಹತ್ಯೆ ಮಾಡಿರುವ ಬಗ್ಗೆ ಪೊಲೀಸರ ವಿಚಾರಣೆಯಲ್ಲಿ ಗೊತ್ತಾಗಿದೆ. ಹತ್ಯೆಗೆ ಕಾರಣ ಸ್ಪಷ್ಟವಾಗಿಲ್ಲವಾದರೂ ಪ್ರಕರಣ ಸಂಬಂಧ ಪೇಪರ್ ಟೌನ್ ಪೊಲೀಸರು ವಿಚಾರಣೆ ನಡೆಸ್ತಿದ್ದಾರೆ. ಈ ಬಗ್ಗೆ ಇನ್ನಷ್ಟು ಮಾಹಿತಿಗಳು ಲಭ್ಯವಾಗಬೇಕಿದೆ.