SHIVAMOGGA | Dec 28, 2023 | gas and aadhaar link ಗ್ಯಾಸ್ ಕನೆಕ್ಷನ್ಗೆ ಆಧಾರ್ ಲಿಂಕ್ ಮಾಡಿಸಬೇಕಾ!? ಡಿಸೆಂಬರ್ 31 ಆಧಾರ್ ಲಿಂಕ್ ಮಾಡಲು ಲಾಸ್ಟ್ ಡೇಟಾ? ಹೀಗೊಂದು ಪ್ರಶ್ನೆಗಳು ಕಳೆದ ಕೆಲವು ದಿನಗಳಿಂದ ಶಿವಮೊಗ್ಗದಲ್ಲಿ ಕೇಳಿಬರುತ್ತಿದೆ. ಬಂಡಾರಿ ಗ್ಯಾಸ್ ಏಜೆನ್ಸಿ ಎದುರು ಅಂತೂ ನೋಟ್ ಬ್ಯಾನ್ ಆದಾಗ ಕ್ಯೂ ನಿಂತ ಹಾಗೆ ಜನರು ಸರತಿ ಸಾಲಿನಲ್ಲಿ ನಿಲ್ಲುತ್ತಿದ್ದಾರೆ. ಈ ಬಗ್ಗೆ ನಿನ್ನೆಯಷ್ಟೆ ರಾಜ್ಯಮಟ್ಟದ ಸುದ್ದಿಪತ್ರಿಕೆಯೊಂದು ವರದಿ ಮಾಡಿತ್ತಷ್ಟೆ ಅಲ್ಲದೆ, ಗ್ಯಾಸ್ ಸಂಪರ್ಕಕ್ಕೆ ಆಧಾರ್ ಲಿಂಕ್ ಮಾಡಬೇಕು ನಿಜ ಆದರೆ ಅದಕ್ಕೆ ಲಾಸ್ಟ್ ಡೇಟ್ ಅಂತೇನು ಇಲ್ಲ ಎಂದು ತಿಳಿಸಿತ್ತು.
ಇದೀಗ ಈ ಸಂಬಂಧ ಆಹಾರ, ನಾಗರಿಕರ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕರಾದ ಅವಿನ್ ಆರ್ ಪ್ರಕಟಣೆ ನೀಡಿದ್ದಾರೆ.
ಆಧಾರ್ ಇ-ಕೆವೈಸಿ ಮಾಡಿಸಲು ಅಂತಿಮ ದಿನಾಂಕ ನಿಗಧಿಪಡಿಸಿಲ್ಲ / gas and aadhaar link
ಅಡುಗೆ ಅನಿಲ ಸಂಪರ್ಕ ಹೊಂದಿರುವವರು ಆಧಾರ್ ಇ-ಕೆವೈಸಿ ಮಾಡಿಸಲು ಅಂತಿಮ ದಿನಾಂಕವನ್ನು ಕೇಂದ್ರ ಸರ್ಕಾರವು ನಿಗಧಿಪಡಿಸಿರುವುದಿಲ್ಲ. ಸಾರ್ವಜನಿಕರು ತಮ್ಮ ಬಿಡುವಿನ ವೇಳೆಯಲ್ಲಿ ಗ್ಯಾಸ್ ಏಜೆನ್ಸಿಗಳಿಗೆ ತೆರಳಿ ಆಧಾರ್ ಇ-ಕೆವೈಸಿ ಮಾಡಿಸಬಹುದಾಗಿದ್ದು, ಸಾರ್ವಜನಿಕರು ಆತಂಕದಿಂದ ಗ್ಯಾಸ್ ಏಜೆನ್ಸಿಗಳ ಮುಂದೆ ಸರತಿ ಸಾಲಿನಲ್ಲಿ ನಿಲ್ಲುವ ಅವಶ್ಯಕತೆ ಇರುವುದಿಲ್ಲ.
ಆದ್ದರಿಂದ ಅನಾವಶ್ಯಕವಾಗಿ ಗೊಂದಲ ಅಥವಾ ತಪ್ಪು ಮಾಹಿತಿಯಿಂದ ಗ್ಯಾಸ್ ಏಜೆನ್ಸಿಗಳ ಬಳಿ ಸರತಿ ಸಾಲಿನಲ್ಲಿ ನಿಲ್ಲುವ ಅಗತ್ಯವಿರುವುದಿಲ್ಲ ಹಾಗೂ ಸಿಲಿಂಡರ್ಗಳನ್ನು ಮನೆಗೆ ಡೆಲಿವರಿ ಪಡೆಯುವ ವೇಳೆಯಲ್ಲಿ ಕೂಡ ಇ-ಕೆವೈಸಿ ಮಾಡಿಸಲು ಅವಕಾಶವಿರುತ್ತದೆ.
ಅಲ್ಲದೇ ಹೆಲೋ ಬಿಪಿಸಿಎಲ್, ಇಂಡಿಯನ್ ಆಯ್ಲ್ ಒನ್ ಮತ್ತು ವಿಟ್ರನ್ ಹೆಚ್ಪಿ ಗ್ಯಾಸ್ ಈ ಮೊಬೈಲ್ ಆಪ್ಗಳ ಮೂಲಕ ಇ-ಕೆವೈಸಿ ಮಾಡಿಸಬಹುದಾಗಿದೆ ಎಂದು ಆಹಾರ, ನಾಗರಿಕರ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಉ ಉಪನಿರ್ದೇಶಕರಾದ ಅವಿನ್ ಆರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.