ಹೊಲಕ್ಕೆ ನೀರು ಬಿಟ್ಟು ಬರುತ್ತಿದ್ದವನಿಗೆ ಆ್ಯಂಬುಲೆನ್ಸ್ ಡಿಕ್ಕಿ! ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಸ್ಟೇಷನ್​ನಲ್ಲಿ ಕೇಸ್

Published: 04 ಜನವರಿ 2024, 9:39 ಫೂರ್ವಾಹ್ನ • 1 min read

SHIVAMOGGA |  Jan 4, 2024  |  ಆ್ಯಂಬುಲೆನ್ಸ್ ಡಿಕ್ಕಿಯಾದ ಪರಿಣಾಮ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಸ್ಟೇಷನ್ ಲಿಮಿಟ್ಸ್ ನಲ್ಲಿ ನಡೆದಿದೆ. ಘಟನೆಯ ಸಂಬಂಧ ಐಪಿಸಿIPC 1860 (U/s-279,337) ಅಡಿಯಲ್ಲಿ ಕೇಸ್ ದಾಖಲಾಗಿದೆ. 

READ : ಯಾವ ಅಡಿಕೆ ಮಾರುಕಟ್ಟೆಯಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ದರ! ವಿವರ ಇಲ್ಲಿದೆ

ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಸ್ಟೇಷನ್

ಸಂಜೆ ಆರು ಗಂಟೆ ಸುಮಾರಿಗೆ ಜಮೀನಿಗೆ ನೀರು ಬಿಡಲು ಹೋಗಿ ಮನೆಗೆ ವಾಪಸ್ ಆಗುತ್ತಿದ್ದ ಯಜಮಾನರೊಬ್ಬರಿಗೆ ಆ್ಯಂಬುಲೆನ್ಸ್ ಡಿಕ್ಕಿಯಾಗಿದೆ. ಶಿವಮೊಗ್ಗದ ಕಡೆಯಿಂದ ಬರುತ್ತಿದ್ದ ಆ್ಯಂಬುಲೆನ್ಸ್​ ಡಿಕ್ಕಿಯಾದ ಪರಿಣಾಮ  ಮೇಲಿನ ಕುಂಚೇನಹಳ್ಳಿ ನಿವಾಸಿಯ ತಲೆಗೆ ಹಾಗೂ ಮೈ ಕೈಗೆ ಗಂಭೀರ ಪೆಟ್ಟಾಗಿದೆ. 

ತಕ್ಷಣವೇ ಅಲ್ಲಿದ್ದ ಸ್ಥಳೀಯರು ಅವರನ್ನ ಆಸ್ಪತ್ರೆಗೆ ರವಾನಿಸಿದ್ದಾರೆ. ಇನ್ನೂ ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್​ ಸ್ಟೇಷನ್​ನಲ್ಲಿ ದಾಖಲಾದ ದೂರು ಸಂಬಂಧ ಎಫ್​ಐಆರ್​ ರಿಜಿಸ್ಟರ್ ಆಗಿದೆ. 

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY

Ganesh Ajjimane

Senior Journalist | Malenadu Today
✓ Verified Journalist

Authority

Published by: Malenadu Today Editorial Desk
✓ Fact Checked   ✓ Updated   Editorial Policy