ಮಲೆನಾಡಿಗರಿಗೆ ರಿಲೀಫ್! ಹುಲಿ ಉಗುರು & ಕಾಡುಪ್ರಾಣಿಗಳ ವಸ್ತುಗಳನ್ನ ವಾಪಸ್ ಕೊಡಲು ಸರ್ಕಾರದಿಂದ ಲಾಸ್ಟ್​ ಚಾನ್ಸ್​!

ಹಂಚಿಕೊಳ್ಳಿ
WhatsApp Facebook X Telegram

SHIVAMOGGA  |  Jan 6, 2024  |  ಮಲೆನಾಡು ಶಿವಮೊಗ್ಗದಲ್ಲಿ ವನ್ಯಜೀವಿಗೆ ಸಂಬಂಧಿಸಿದ ವಸ್ತುಗಳನ್ನ ಇಟ್ಟುಕೊಂಡಿರುವ ಪ್ರಕರಣ ಸಾಕಷ್ಟು ಸದ್ದು ಮಾಡಿದ್ದು ಮಲೆನಾಡು ಜನಪ್ರತಿನಿಧಿಗಳು ಇಂತಹ ಪ್ರಕರಣಗಳಲ್ಲಿ ಸರ್ಕಾರ ಕಾಲಾವಕಾಶ ನೀಡಬೇಕು ಎಂದು ಆಗ್ರಹಿಸಿದ್ದರು. ಇದಕ್ಕೆ ಪೂರಕವಾಗಿ ಇದೀಗ ರಾಜ್ಯ ಸಚಿವ ಸಂಪುಟ ಪ್ರಮುಖವಾದ ನಿರ್ಣಯವನ್ನು ಕೈಗೊಂಡಿದೆ.  

ಹುಲಿ ಉಗುರು/Tiger Claw

ಹುಲಿ ಉಗುರು, ಆನೆ ದಂತ, ಜಿಂಕೆ ಸೇರಿ. ಅಕ್ರಮ ವಾಗಿಟ್ಟುಕೊಂಡಿರುವ ಯಾವುದೇ ವನ್ಯ ಜೀವಿಯ ಅಂಗಾಂಗ, ಟ್ರೋಫಿಯನ್ನು ಸರ್ಕಾರಕ್ಕೆ ಹಿಂತಿರುಗಿಸಲು ಒಂದು ಬಾರಿ ಕಾಲಾವಕಾಶ ನೀಡಲು ಶುಕ್ರವಾರ ನಡೆದ ಸಚಿವ ಸಂಪುಟ ಸಭೆ ನಿರ್ಧರಿಸಿದೆ. 

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ  ಪ್ರಸ್ತಾಪಕ್ಕೆ ಅನುಮೋದನೆ ನೀಡಲಾಗಿದೆ. ಕೆಲವರು ಕಾನೂನಿನ ಅರಿವಿಲ್ಲದೆ ಇಂತಹ ಉತ್ಪನ್ನಗಳನ್ನು ತಲತಲಾಂತರದಿಂದ ತಮ್ಮ ಮನೆಯಲ್ಲಿಟ್ಟು ಕೊಂಡಿದ್ದು, 2 ಬಾರಿ ಅವಕಾಶ ನೀಡಿದರೂ ಪ್ರಮಾಣ ಪತ್ರ ಪಡೆದಿರುವುದಿಲ್ಲ. ಈ ಬಗ್ಗೆ ಶುಕ್ರವಾರ ಸಚಿವ ಸಂಪುಟದಲ್ಲಿ ಚರ್ಚಿಸ ಲಾಗಿದ್ದು, ಇಂತಹ ವಸ್ತುಗಳನ್ನು ಸರ್ಕಾರಕ್ಕೆಸ್ವಯಂಪ್ರೇರಿತವಾಗಿ ಹಿಂತಿರುಗಿಸಲು ಮಾತ್ರ ಕೊನೆಯ ಅವಕಾಶ ನೀಡಲು ತೀರ್ಮಾನಿಸಲಾಗಿದೆ.

READ : ಹುಲಿಉಗುರು ಸೇರಿ ವನ್ಯಜೀವಿಗಳ ವಸ್ತುಗಳಿದ್ರೆ ವಾಪಸ್ ನೀಡಲು ಮೂರು ತಿಂಗಳ ಕಾಲವಾಕಾಶ!? ಏನಂದ್ರು ಈಶ್ವರ್ ಖಂಡ್ರೆ

ಈ ಸಂಬಂಧ  ಅತಿ ಶೀಘ್ರದಲ್ಲೇ ಈ ಬಗ್ಗೆ ಅಧಿಸೂಚನೆ ಹೊರಡಿಸಿ 3 ತಿಂಗಳ ಕಾಲಾವಕಾಶ ನೀಡಲು ತೀರ್ಮಾನಿಸಲಾಗಿದೆ.  ಈ ಪ್ರಕಾರವಾಗಿ 1973ರಲ್ಲಿ ಮತ್ತು 2003ರಲ್ಲಿ ಅಧಿಕೃತ ಘೋಷಣೆ ಮಾಡಿಕೊಂಡು ಹಕ್ಕಿನ ಪ್ರಮಾಣ ಪತ್ರ ಪಡೆಯದವರು ತಮ್ಮಲ್ಲಿ ಹುಲಿ ಉಗುರು. ಆನೆ ಬಾಲದ ಉಂಗುರ, ಜಿಂಕೆಯ ಕೊಂಬು, ಆನೆ ದಂತ, ಹುಲಿ, ಜಿಂಕೆ ಚರ್ಮ, ಕಾಡೆಮ್ಮೆ ಕೊಂಬು, ಹುಲಿ, ಸಿಂಹ, ಚಿರತೆ, ಜಿಂಕೆ, ಕಡವೆ, ಕಾಡೆಮ್ಮೆ, ಅನೆಸೇರಿ ಯಾವುದೇ ವನ್ಯಜೀವಿಯ ಮುಖದ ಸಂಸ್ಕರಿಸಿದ ಅಥವಾ ಸಂಸ್ಕರಿಸದ ಟ್ರೋಫಿ, ಆನೆಯ ದಂತದಿಂದ ಮಾಡಿದ ಅಲಂಕಾರಿಕ ವಸ್ತು ಇತ್ಯಾದಿಗಳು ಇದ್ದಲ್ಲಿ, ಅದನ್ನು ಸರ್ಕಾರಕ್ಕೆ ಮರಳಿಸಬೇಕಾಗುತ್ತದೆ.

READ : ಹುಲಿ ಉಗುರು | ಮಲೆನಾಡು ಗಢಗಢ |ಕಿಮ್ಮನೆ ರತ್ನಾಕರ್​ & ಆರಗ ಜ್ಞಾನೇಂದ್ರರಿಂದ ಒಂದೇ ಮಾತು!

ಇನ್ನೂ ಈ ಸಂಬಂಧ ರಾಜ್ಯದ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಸದ್ಯ ಪ್ರಸ್ತಾವಾಗಿರುವ  ಕಾಲಾವಕಾಶ ಮುಗಿದ ಬಳಿಕ ಯಾರಾದರೂ ಇಂತಹ ವನ್ಯಜೀವಿ ಉತ್ಪನ್ನಗಳನ್ನು ತಮ್ಮಲ್ಲಿ ಇಟ್ಟುಕೊಂಡಿದ್ದರೆ, ಸಾಗಾಟ, ಮಾರಾಟ ಮಾಡಿದರೆ, ಉಡುಗೊರೆ ನೀಡಿದರೆ ಅವರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯಿದೆ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ತಿಳಿಸಿದ್ದಾರೆ. 

ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor