ವಿದ್ಯಾರ್ಥಿ ವೇತನ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಹಂಚಿಕೊಳ್ಳಿ
WhatsApp Facebook X Telegram

SHIVAMOGGA  |  Jan 9, 2024  |   ವಿದ್ಯಾರ್ಥಿ ವೇತನ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. 

ವಿದ್ಯಾರ್ಥಿ ವೇತನ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ

 ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2023-24 ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ (ಎಸ್‍ಎಸ್‍ಪಿ) ಮೂಲಕ ವಿದ್ಯಾರ್ಥಿ ವೇತನ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. 

ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಹಾಗೂ ತಾಲ್ಲೂಕಿನ ಎಲ್ಲಾ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಸ್.ಜಿ ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

READ : ಶಿವಮೊಗ್ಗದ ಫ್ರೀಡಂ ಪಾರ್ಕ್‌ನಲ್ಲಿ ಜನವರಿ 12 ಕ್ಕೆ ಯುವನಿಧಿ ಯೋಜನೆ ಉದ್ಧಾಟನೆ ಬಗ್ಗೆ ಹೆಚ್​.ಎಸ್​.ಸುಂದರೇಶ್ ಹೇಳಿಕೆ!.

ಆಯವ್ಯಯ ಕುರಿತು ಸಮಾಲೋಚನಾ ಸಭೆ

ಶಿವಮೊಗ್ಗ ಮಹಾನಗರ ಪಾಲಿಕೆಯು 2024-25 ನೇ ಸಾಲಿನ ಆಯವ್ಯಯವನ್ನು ತಯಾರಿಸುವ ಬಗ್ಗೆ ಪೂರ್ವಭಾವಿ ಸಮಾಲೋಚನಾ ಸಭೆಯನ್ನು ಜ.11 ರಂದು ಬೆಳಗ್ಗೆ 11 ಗಂಟೆಗೆ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಸಾರ್ವಜನಿಕರ ಹಾಗೂ ಸಂಘ ಸಂಸ್ಥೆಗಳ ಮೊದಲನೇಯ ಹಂತದ ಪೂರ್ವಭಾವಿ ಸಭೆಯಾಗಿದ್ದು, ಈ ಸಭೆಗೆ ನಗರದ ನಾಗರೀಕರು ಹಾಜರಾಗಿ ತಮ್ಮ ಸಲಹೆ ಸೂಚನೆಗಳನ್ನು ನೀಡಬೇಕೆಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor