SHIVAMOGGA | Jan 10, 2024 | ಯುವನಿಧಿ ಕಾರ್ಯಕ್ರಮ ಶಿವಮೊಗ್ಗದಲ್ಲಿ ಆಯೋಜಿಸ್ತಿರುವ ಬೆನ್ನಲ್ಲೆ ಮತ್ತೊಮ್ಮೆ ಶಿವಮೊಗ್ಗಕ್ಕೆ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಆಗಮಿಸುತ್ತಿದ್ದಾರೆ. ಅವರ ಪ್ರವಾಸದ ವಿವರ ಈ ರೀತಿಯಿದೆ.
ಡಾ.ಶರಣಪ್ರಕಾಶ್ ಪಾಟೀಲ್
ಸರ್ಕಾರದ ಐದನೆ ಪ್ರಮುಖ ಗ್ಯಾರಂಟಿ ಯುವನಿಧಿ ಯೋಜನೆ. ಈ ಯೋಜನೆಗೆ ಶಿವಮೊಗ್ಗದ ಫ್ರೀಡಂ ಪಾರ್ಕ್ನಲ್ಲಿ ಚಾಲನೆ ನೀಡಲಾಗುತ್ತಿದೆ. ಈ ಸಂಬಂಧ ಡಾ. ಶರಣಪ್ರಕಾಶ್ ಪಾಟೀಲ್ ಮೂರು ದಿನ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಜ.10ರಂದು ಅಂದರೆ ಇಂದು ಮಧ್ಯಾಹ್ನ 2.20ಕ್ಕೆ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಬೆಂಗಳೂರಿನಿಂದ ವಿಮಾನದ ಮೂಲಕ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ.
READ : ಇವತ್ತು ಎಷ್ಟಿದೆ ಅಡಿಕೆ ದರ!? ಯಾವ್ಯಾವ ತಾಲ್ಲೂಕಿನಲ್ಲಿ ಎಷ್ಟಿದೆ ಅಡಿಕೆ ರೇಟು!?
ಸಂಜೆ 5 ಗಂಟೆಗೆ ಜಿಲ್ಲಾಧಿಕಾರಿ ಡಾ.ಆರ್ ಸೆಲ್ವಮಣಿ ಕಚೇರಿಯಲ್ಲಿ ಯುವನಿಧಿ ಯೋಜನೆ (yuvanidhi) ಗೆ ಚಾಲನೆ ನೀಡುವ ಕಾರ್ಯಕ್ರಮದ ಕುರಿತು ಪೂರ್ವಭಾವಿ ಸಭೆ ನಡೆಸಲಿದ್ದಾರೆ.
ರಾತ್ರಿ ಶಿವಮೊಗ್ಗದಲ್ಲೆ ವಾಸ್ತವ್ಯ ಮಾಡಲಿದಾರೆ. ಜ.11ರಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾರ್ಯಕ್ರಮದ ಕುರಿತು ಮತ್ತೊಂದು ಸುತ್ತಿನ ಸಭೆ ನಡೆಸಲಿದ್ದಾರೆ
ಜ.12ರಂದು ಬೆಳಗ್ಗೆ 11 ಗಂಟೆಗೆ ಫ್ರೀಡಂ ಪಾರ್ಕ್ನಲ್ಲಿ ನಡೆಯಲಿರುವ ಯುವನಿಧಿ ಯೋಜನೆ ಚಾಲನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅಂದು ಸಂಜೆ 5 ಗಂಟೆಗೆ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.