SHIVAMOGGA | Jan 19, 2024 Thirthahalli Incident | ತೀರ್ಥಹಳ್ಳಿ ತಾಲ್ಲೂಕು ನಲ್ಲಿ ಮತ್ತೊಬ್ಬ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದುಕೊಂಡು ಸೂಸೈಡ್ ಮಾಡಿಕೊಂಡಿದ್ದಾರೆ.
ವಿದ್ಯಾರ್ಥಿನಿ ಆತ್ಮಹತ್ಯೆ
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ಬಾಳೆಬೈಲು ನಲ್ಲಿರುವ ಡಿಗ್ರಿ ಕಾಲೇಜೊಂದರ ವಿದ್ಯಾರ್ಥಿನಿ ನೇಣಿಗೆ ಶರಣಾಗಿದ್ದಾರೆ. ಹೆಸರು ಅಧೀಕ್ಷಾ. ವಯಸ್ಸು 20 .ಬಿಳುಕೊಪ್ಪದ ನಿವಾಸಿ. ತಮ್ಮ ಮನೆಯಲ್ಲಿ ಇವರು ಸಾವಿಗೆ ಶರಣಾಗಿದ್ದಾರೆ. ಮೃತರ ಸಾವಿಗೆ ಕಾರಣ ಸ್ಪಷ್ಟವಾಗಿಲ್ಲ.
ಸ್ಥಳಕ್ಕೆ ತೀರ್ಥಹಳ್ಳಿ ಪೊಲೀಸ್ ಸ್ಟೇಷನ್ ಪೊಲೀಸರು ಬೇಟಿ ನೀಡಿದ್ದು ಪ್ರಕರಣ ದಾಖಲಿಸಿ ಮಹಜರ್ ನಡೆಸಿದ್ದಾರೆ. ವಿದ್ಯಾರ್ಥಿನಿಯ ಮೃತದೇಹವನ್ನು ತೀರ್ಥಹಳ್ಳಿ ಜಯಚಾಮರಾಜೇಂದ್ರ ಆಸ್ಪತ್ರೆ ಗೆ ರವಾನಿಸಿದ್ದಾರೆ. ತನಿಖೆ ಮುಂದುವರಿದಿದೆ.