Shivamogga | Feb 7, 2024 | ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ಯುವಕನೊಬ್ಬನಿಗೆ ಚಾಕುವಿನಿಂದ ಇರಿಯಲಾಗಿದೆ. ನಿನ್ನೆ ಶಿಕಾರಿಪುರ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಯುವಕ ಗಾಯಗೊಂಡಿದ್ದು, ಆತನನ್ನ ಶಿವಮೊಗ್ಗದ ಖಾಸಗಿ ಆಸತ್ರೆಗೆ ದಾಖಲಿಸಲಾಗಿದೆ. ಸದ್ಯ ಆತನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಚಾಕುವಿನಿಂದ ಇರಿದ ಯುವಕರು ಅನ್ಯಕೋಮಿನವರು ಎನ್ನಲಾಗಿದೆ.
ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ಯವಕನಿಗೆ ಚಾಕು ಇರಿತ ಘಟನೆ ನಿನ್ನೆ ಸಂಭವಿಸಿದೆ #shivamogga pic.twitter.com/qNrgk6XmZH
— malenadutoday.com (@malnadtoday) February 7, 2024
ಇನ್ನೂ ಸುಶೀಲ್ ಎಂಬ 23 ವರ್ಷದ ಯುವಕ ಘಟನೆಯಲ್ಲಿ ಗಾಯಗೊಂಡಿದ್ದಾರೆ. ರ್ಯಾಶ್ ಡ್ರೈವಿಂಗ್ ಮಾಡುತ್ತಿರುವುದನ್ನ ಪ್ರಶ್ನಿಸಿದ್ದಕ್ಕೆ ಈ ರೀತಿಯ ಘಟನೆಯಾಗಿದೆ ಎಂದು ಎಸ್ಪಿ ಮಿಥುನ್ ಕುಮಾರ್ ಮಾಧ್ಯಮಗಳಿಗೆ ವಾಟ್ಸ್ಯಾಪ್ ಮೆಸೇಜ್ ರವಾನೆ ಮಾಡಿದ್ದಾರೆ.
ಶಿಕಾರಿಪುರದಲ್ಲಿ ನಡೆದ ಘಟನೆ ಸಂಬಂಧ ಸ್ಥಳಕ್ಕೆ ಎಂಪಿ @BYRBJP ಬಿ.ವೈ. ರಾಘವೇಂದ್ರ pic.twitter.com/SVTfqE1SnP
— malenadutoday.com (@malnadtoday) February 7, 2024
ಶಿಕಾರಿಪುರ ತಾಲ್ಲೂಕು ಶಿಕಾರಿಪುರ ಪಟ್ಟಣದ ದೊಡ್ಡಪೇಟೆ ಮುಖ್ಯರಸ್ತೆಯ ವಿಠ್ಠಲ ದೇವಸ್ಥಾನದ ಬಳಿ ಘಟನೆ ನಡೆದಿದೆ. ಬೈಕ್ ರ್ಯಾಶ್ ಡ್ರೈವಿಂಗ್ ಮಾಡಬೇಡ ಎಂದು ಯುವಕನೊಬ್ಬನಿಗೆ ಸುಶೀಲ್ ಹೇಳಿದ್ದಾನೆ. ಆತನ ತನ್ನ ಸಹೋದರರನ್ನ ಕರೆದುಕೊಂಡು ಬಂದು ಸುಶೀಲ್ ಮೇಲೆ ಹಲ್ಲೆ ಮಾಡಿದ್ದಾನೆ. ಈ ವೇಳೆ ಚಾಕುವಿನಿಂದ ಇರಿಯಲಾಗಿದೆ.
ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ಚಾಕು ಇರಿತಕ್ಕೆ ಒಳಗಾದ ಯುವಕ ಆಸ್ಪತ್ರೆಗೆ ಶಿಫ್ಟ್ ! pic.twitter.com/D9zbPyBJfQ
— malenadutoday.com (@malnadtoday) February 7, 2024
ಇನ್ನೂ ಘಟನೆ ಬೆನ್ನಲ್ಲೆ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಮಾಹಿತಿ ನೀಡಿರುವ ಎಸ್ಪಿ ಮಿಥುನ್ ಕುಮಾರ್ ಪ್ರಕರಣದ ಪ್ರಾಥಮಿಕ ತನಿಖೆಯಲ್ಲಿ ರ್ಯಾಶ್ ಡ್ರೈವಿಂಗ್ ಪ್ರಶ್ನಿಸಿದ್ದಕ್ಕೆ ಈ ಘಟನೆ ನಡೆದಿದೆ ಎಂದು ಗೊತ್ತಾಗಿದೆ. ಈ ವಿಚಾರವಾಗಿ ಇಬ್ಬರನ್ನ ಬಂಧಿಸಲಾಗಿದೆ ಈ ಸಂಬಂಧ ತನಿಖೆ ಮುಂದುವರಿದಿದೆ ಎಂದಿದ್ದಾರೆ
