ಶಾಲೆಯ ಪಠ್ಯ ಪುಸ್ತಕದಲ್ಲಿ ಸಂಚಾರ ಜಾಗೃತಿ ನಿಯಮಗಳ ಪಾಠ ! ಯಾವಾಗಿನಿಂದ ಬರಲಿದೆ ಈ ಶಿಕ್ಷಣ ಗೊತ್ತಾ?

ಹಂಚಿಕೊಳ್ಳಿ
WhatsApp Facebook X Telegram

Shivamogga Feb 13, 2024 |  ಸಂಚಾರಿ ನಿಯಮಗಳ ಬಗ್ಗೆ ಎಷ್ಟೆ ಜಾಗೃತಿ ಮೂಡಿಸಿದರೂ ನಿಯಮಗಳು ಪೂರ್ತಿ ಪಾಲನೆಯು ಸಾಧ್ಯವಾಗುತ್ತಿಲ್ಲ. ಈ ನಿಟ್ಟಿನಲ್ಲಿ ಮಕ್ಕಳ ಬಾಲ್ಯದಲ್ಲಿಯೇ ಸಂಚಾರಿ ನಿಯಮಗಳ ಬಗ್ಗೆ ತಿಳಿಸುವ ಪ್ರಯತ್ನವೊಂದು ಆರಂಭವಾಗಿದೆ. ಇದಕ್ಕೆ  ಪೂಕರವಾಗಿ ಬೆಂಗಳೂರು ಸಂಚಾರ ವಿಭಾಗದ ಜಂಟಿ ಆಯುಕ್ತ ಎಂ.ಎನ್‌.ಅನುಚೇತ್‌ ಮಾಹಿತಿಯೊಂದನ್ನ ಹಂಚಿಕೊಂಡಿದ್ದಾರೆ 

ಅವರು ಹಂಚಿಕೊಂಡಿರುವ ಮಾಹಿತಿ ಪ್ರಕಾರ,  ಸಂಚಾರ ಜಾಗೃತಿ ನಿಯಮದ ಕುರಿತು ಶಾಲೆ ಪಠ್ಯದಲ್ಲಿ ಪಾಠ ಸೇರಿಸುವ ಕೆಲಸ ಶುರು ಮಾಡಲಾಗಿದೆ. ಮಕ್ಕಳಿಗೆ ಸುಲಭವಾಗಿ ಅರ್ಥವಾಗುವಂತೆ ಪಾಠ ಸಿದ್ಧಪಡಿಸಿ, ಡಿಎಸ್‌ಇಆರ್‌ಟಿಗೆ ಸಲ್ಲಿಸಲಾಗಿದೆ. ಅವರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಮುಂದಿನ ವರ್ಷವೇ ಪಠ್ಯದಲ್ಲಿ ಪಾಠ ಸೇರ್ಪಡೆಯಾಗುವ ವಿಶ್ವಾಸವಿದೆ ಎಂದು ಬೆಂಗಳೂರು ಸಂಚಾರ ವಿಭಾಗದ ಜಂಟಿ ಆಯುಕ್ತ ಎಂ.ಎನ್‌.ಅನುಚೇತ್‌ ತಿಳಿಸಿದ್ದಾರೆ.

ಶಾಲಾ ಮಕ್ಕಳಲ್ಲಿ ಸಂಚಾರ ನಿಯಮಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಪಾಠವೊಂದನ್ನು ಸಿದ್ಧಪಡಿಸಿದ್ದು, ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆಗೆ ಸಲ್ಲಿಸಲಾಗಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ 1 ರಿಂದ 10ನೇ ತರಗತಿಯ ಪಠ್ಯದಲ್ಲಿ ಸೇರಿಸುವುದಾಗಿ ಡಿಎಸ್‌ಇಆರ್‌ಟಿ ಮಾಹಿತಿ ನೀಡಿದೆ.

– ಎಂ.ಎನ್.ಅನುಚೇತ್

ಬೆಂಗಳೂರು ಸಂಚಾರ ವಿಭಾಗದ ಜಂಟಿ ಆಯುಕ್ತರು

M.N. Anucheth, Joint Commissioner, Bengaluru Traffic Division

ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor