Davanagere | ಮಹಾನಗರ ಪಾಲಿಕೆಯ ಸ್ಟ್ರಾಂಗ್ ರೂಂನಲ್ಲಿ ರೈಫಲ್​ನಿಂದ ಫೈರ್​ ! ಪೊಲೀಸ್ ಪೇದೆ ಗಂಭೀರ

ಹಂಚಿಕೊಳ್ಳಿ
WhatsApp Facebook X Telegram

Feb 15, 2024 |   ದಾವಣಗೆರೆ ಜಿಲ್ಲೆ ದಾವಣಗೆರೆ ಮಹಾನಗರ ಪಾಲಿಕೆ ಆವರಣದಲ್ಲಿ ಪೊಲೀಸ್ ಪೇದೆಯೊಬ್ಬರು ರೈಫಲ್​ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆಯೊಂದು ನಡೆದಿದೆ.. ಡಿಎಆರ್ ಪೇದೆ ಗುರುಮೂರ್ತಿ ಸ್ಥಿತಿ ಸದ್ಯ ಗಂಭೀರವಾಗಿದೆ 

ದಾವಣಗೆರೆ ಮಹಾನಗರ ಪಾಲಿಕೆಯ ಸ್ಟ್ರಾಂಗ್ ರೂಂನಲ್ಲಿ ಈ ಘಟನೆ ಸಂಭವಿಸಿದೆ. ವಿಜಯನಗರ ಜಿಲ್ಲೆ ಹರಪನಹಳ್ಳಿ ಪಟ್ಟಣಸ ನಿವಾಸಿ ಈ ಗುರುಮೂರ್ತಿ (34) ದಾವಣಗೆರೆಯಲ್ಲಿ ಕೆಲಸ ಮಾಡುತ್ತಿದ್ದರು. ಪಾಲಿಕೆಯಲ್ಲಿ ನಿರ್ಮಿಸಿರುವ ಸ್ಟ್ರಾಂಗ್ ರೂಂ ಇವಿಎಂ ಮಷಿನ್ ಕಾವಲು‌ ಸೇವೆಯಲ್ಲಿ ಗುರುಮೂರ್ತಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದರು 

ಇವತ್ತು ಅವರು ರೈಫಲ್​ನಿಂದ ಗುಂಡು ಹಾರಿಸಿಕೊಂಡಿದ್ದಾರೆ. ತಕ್ಷಣವೇ ಅವರನ್ನು ಅಲ್ಲಿದ್ದವರು ಆಸ್ಪತ್ರೆಗೆ ಸಾಗಿಸಿದ್ದಾರೆ. ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯ ಮೂಲಗಳು ತಿಳಿಸಿವೆ. 

ಘಟನೆಗೆ ಕಾರಣ ಸ್ಪಷ್ಟವಾಗಿಲ್ಲ. ಮಾನಸಿಕ ಕಿರುಕುಳ, ಅಂತರ್​ ಜಿಲ್ಲಾ ವರ್ಗಾವಣೆಗೆ ನಿರಾಕಾರ, ಕೌಟುಂಬಿಕ ಕಲಹ ಹೀಗೆ ಮೂರು ಕಾರಣಗಳನ್ನ ಸ್ಥಳೀಯರು ಹೇಳುತ್ತಿದ್ದಾರೆ. ಯಾವ ಕಾರಣದಿಂದ ಹೀಗೆ ಮಾಡಿಕೊಂಡರು ಎಂಬುದು ದೃಢವಾಗಿಲ್ಲ. 

ಸ್ಥಳಕ್ಕೆ ಪೂರ್ವ ವಲಯ ಐಜಿಪಿ ತ್ಯಾಗರಾಜನ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು, ದಾವಣಗೆರೆ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ  ಘಟನೆ‌ ನಡೆದಿದ್ದು ಹೆಚ್ಚಿನ ತನಿಖೆ ಮುಂದುವರಿದಿದೆ ಎನ್ನಲಾಗುತ್ತಿದೆ.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor