Shivamogga Mar 5, 2024 ಲೋಕಸಭಾ ಚುನಾವಣೆಗೆ ಅಖಾಡ ರೆಡಿಯಾಗುತ್ತಿದೆ. ಬಿಜೆಪಿ ಎರಡನೇ ಪಟ್ಟಿಯಲ್ಲಿ ಕರ್ನಾಟಕದ ಅಭ್ಯರ್ಥಿಗಳ ಹೆಸರು ಬಿಡುಗಡೆಯಾಗುವ ಸಾಧ್ಯತೆ ಇದೆ. ಈ ಮಧ್ಯೆ ಶಿವಮೊಗ್ಗ ಲೋಕಸಭಾ ಕ್ಷೇತ್ರ ದ ಕಾಂಗ್ರೆಸ್ ಅಭ್ಯರ್ಥಿ ಯಾರು ಎಂಬುದು ಸಖತ್ ಕುತೂಹಲ ಮೂಡಿಸಿತ್ತು. ಇದೀಗ ಕುತೂಹಲ ಕ್ಲೈಮ್ಯಾಕ್ಸ್ ತಲುಪಿದ್ದು ಬಹುತೇಕ ಗೀತಾ ಶಿವರಾಜ್ ಕುಮಾರ್ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಲಿದ್ದಾರೆ ಎನ್ನಲಾಗುತ್ತಿದೆ.
ಇದಕ್ಕೆ ಪೂರಕವಾಗಿ ಮುಂಬರುವ ಲೋಕ ಸಭಾಚುನಾವಣೆಗೆ ತನ್ನ ಮೊದಲ ಪಟ್ಟಿ ಘೋಷಣೆ ಬಗ್ಗೆ ಚರ್ಚಿಸಲು ಈ ವಾರಾಂತ್ಯದೊಳಗೆ ದೆಹಲಿಯಲ್ಲಿ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ನಡೆಯದೆ. ಈ ಸಭೆಯ ಹಿನ್ನೆಲೆಯಲ್ಲಿ ರಾಜ್ಯ ಉಸ್ತುವಾರಿ ರಣದೀಪ್‌ಸುರ್ಜೇವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಸಂಭವ ನೀಯರ ಪಟ್ಟಿಯನ್ನು ಫೈನಲ್ ಮಾಡಿದ್ದಾರೆ. ದೆಹಲಿಗೆ ಕಳುಹಿಸಲು ರೆಡಿಯಾಗಿರುವ ಪಟ್ಟಿಯಲ್ಲಿ ಗೀತಾ ಶಿವರಾಜ್ ಕುಮಾರ್ ಹೆಸರಿದೆ ಎಂದು ಹೇಳಲಾಗುತ್ತಿದೆ.
ಈ ಸಂಬಂಧ ನಿನ್ನೆ ಸೋಮವಾರ ವಿಸ್ಕೃತ ಚರ್ಚೆ ನಡೆಸಿದ್ದು, ಈ ಸಭೆಯಲ್ಲಿ 15 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಫೈನಲ್ ಮಾಡಿದ್ದು, ಆ ಪೈಕಿ ಶಿವಮೊಗ್ಗ ಕ್ಷೇತ್ರಕ್ಕೆ ಗೀತಾ ಶಿವರಾಜ್ ಕುಮಾರ್ ಹೆಸರು ಮಾತ್ರ ಫೈನಲ್ ಮಾಡಲಾಗಿದೆ ಎನ್ನಲಾಗಿದೆ. ಮಿಕ್ಕಂತೆ ಕೆಲವು ಕ್ಷೇತ್ರಗಳಿಗೆ ಎರಡು ಮೂರು ಹೆಸರುಗಳನ್ನ ಸೂಚಿಸಲಾಗಿದೆ.
