ತ್ವರೆಮಾಡಿ! ಇಂದಿನಿಂದ ಶಿವಮೊಗ್ಗದಲ್ಲಿ ಭಾರತ್ ರೈಸ್ ಅಕ್ಕಿ ವಿತರಣೆ! ವಿವರ ಇಲ್ಲಿದೆ

Shivamogga Mar 6, 2024   ಶಿವಮೊಗ್ಗದಲ್ಲಿ ಇವತ್ತಿನಿಂದ ಕೇಂದ್ರ ಸರ್ಕಾರದ ಭಾರತ್ ರೈಸ್   ಅಕ್ಕಿ ಖರೀದಿಗೆ ಚಾಲನೆ ಸಿಗಲಿದೆ. ಸಂಸದ ಬಿವೈ ರಾಘವೇಂದ್ರ   ಇದಕ್ಕೆ ಚಾಲನೆ ನೀಡಲಿದ್ದಾರೆ. ಈ ಸಂಬಂಧ ಅವರು ಮಾಹಿತಿ ನೀಡಿದ್ದಾರೆ. 

ಭಾರತ್ ರೈಸ್ ವಿತರಣಾ ಯೋಜನೆಗೆ ಕೇಂದ್ರ ಆಹಾರ ಮತ್ತು ನಾಗರೀಕ ಸರಬರಾಜು ಸಚಿವರೂ ಆದ ಪಿಯುಷ್ ಗೋಯಲ್‌ರವರು ಫೆ.06ರಂದು ದೆಹಲಿಯಲ್ಲಿ 100 ಆಹಾರ ವ್ಯಾನ್‌ಗಳಿಗೆ ಚಾಲನೆ ನೀಡುವುದರ ಮೂಲಕ ಅಕ್ಕಿ ವಿತರಣಾ ಕಾರ್ಯಕ್ರಮವನ್ನು ಪ್ರಾರಂಭಿಸಿದ್ದರು.

ಈ ಯೋಜನೆಯಡಿ ಶಿವಮೊಗ್ಗ ವಿಧಾನಸಭಾ ಕ್ಷೇತ್ರದಲ್ಲಿಯೂ ಸಹ ವಿತರಿಸಲಾಗುತ್ತಿದೆ. 10 ಕೆಜಿ ತೂಕದ ಬ್ಯಾಗ್​  290 ರೂಪಾಯಿಯಂತೆ ವಿತರಣೆ ಮಾಡಲು ಇವತ್ತು  ಬೆಳಿಗ್ಗೆ 10.30 ಗಂಟೆಗೆ ಶಿವಮೊಗ್ಗ ವಿನೋಬ ನಗರದ ಶಿವಾಲಯ ದೇವಸ್ಥಾನದ ಹತ್ತಿರ ಸಿದ್ದತೆ ಮಾಡಿಕೊಳ್ಳಲಾಗಿದೆ. 

ಮುಂದಿನ ದಿನಗಳಲ್ಲಿ ನಿರಂತರವಾಗಿ ಎಲ್ಲಾ ತಾಲ್ಲೂಕುಗಳಲ್ಲಿಯೂ ವಿತರಿಸಲಾಗುತ್ತದೆ. ನಾಳೆಯೇ ಶಿಕಾರಿಪುರ ವಿಧಾನಸಭಾ ಕ್ಷೇತ್ರದಲ್ಲಿ ಶಿಕಾರಿಪುರದ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಬೆಳಿಗ್ಗೆ 9.30ಕ್ಕೆ ನಡೆಯಲಿದೆ. ಹಾಗೂ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಉಪ್ಪುಂದ ಸಂತೆ ಮಾರ್ಕೆಟ್ ನಲ್ಲಿ ಬೆಳಿಗ್ಗೆ 9 ಗಂಟೆಗೆ ಭಾರತ್ ಅಕ್ಕಿ ವಿತರಣಾ ಕಾರ್ಯಕ್ರಮ ಪ್ರಾರಂಭವಾಗುತ್ತಿದೆ ಎಂದು ಸಂಸದರು ಮಾಹಿತಿ ನೀಡಿದ್ದಾರೆ. 

Leave a Comment

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು