Shivamogga Mar 7, 2024 ಶಿವಮೊಗ್ಗ ಕೋರ್ಟ್ ಪೋಕ್ಸೋ ಕೇಸ್ನಲ್ಲಿ ಅಪರಾಧಿಯೊಬ್ಬನಿಗೆ ಬರೋಬ್ಬರಿ 20 ವರ್ಷ ಶಿಕ್ಷೆ ನೀಡಿದೆ. 35 ವರ್ಷದ ವ್ಯಕ್ತಿ 14 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಈ ಸಂಬಂಧ 2021ನೇ ಸಾಲಿನಲ್ಲಿ ಸೊರಬ ತಾಲ್ಲೂಕಲ್ಲಿ ಕೇಸ್ ದಾಖಲಾಗಿತ್ತು. ನೊಂದ ಬಾಲಕಿಯು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿದ್ದ ಪೊಲೀಸರು ತನಿಖೆ ಕೈಗೊಂಡಿದ್ದರು.
ಆಗಿನ ತನಿಖಾಧಿಕಾರಿಗಳಾದ ಶ್ರೀ ರಾಜಶೇಖರ್ ಎಲ್, ಪೊಲೀಸ್ ವೃತ್ತ ನಿರೀಕ್ಷಕರು, ಸೊರಬ ವೃತ್ತ ರವರು ಆರೋಪಿತನ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರವನ್ನು ಸಲ್ಲಿಸಿದ್ದರು. ಇನ್ನೂ ಶಿವಮೊಗ್ಗದ FTSC-1 ನ್ಯಾಯಲಯದಲ್ಲಿ ಈ ಸಂಬಂಧ ವಿಚಾರಣೆ ನಡೆದಿತ್ತು. ಸರ್ಕಾರದ ಪರವಾಗಿ ಹರಿಪ್ರಸಾದ್, ವಿಶೇಷ ಸರ್ಕಾರಿ ಅಭಿಯೋಜಕರವರು ವಾದ ಮಂಡಿಸಿದ್ದರು.
ಇದೀಗ ಶಿವಮೊಗ್ಗದ FTSC-1 ನ್ಯಾಯಾಲಯ ಪ್ರಕರಣದ ವಿಚಾರಣೆ ಮುಗಿಸಿ ತೀರ್ಪು ನೀಡಿದೆ. ಆರೋಪಿ ವಿರುದ್ಧ ಆರೋಪ ದೃಡಪಟ್ಟ ಹಿನ್ನೆಲೆಯಲ್ಲಿ, ನ್ಯಾಯಾಧಿಶರಾದ ಲತಾ ರವರು ದಿನಾಂಕಃ 06-03-2024 ರಂದು ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದ್ದಾರೆ. ಮತ್ತು 60,000/- ರೂ ದಂಡ, ದಂಡ ಕಟ್ಟಲು ವಿಫಲನಾದಲ್ಲಿ ಹೆಚ್ಚುವರಿ 4 ತಿಂಗಳು ಸಾಧಾ ಕಾರಾವಾಸ ಶಿಕ್ಷೆ ವಿಧಿಸಿದ್ದಾರೆ.
ಅಲ್ಲದೆ ದಂಡದ ಮೊತ್ತದಲ್ಲಿ 50,000/- ರೂ ಹಾಗೂ ಸರ್ಕಾರದಿಂದ 4,00,000/- ರೂ ಸೇರಿ ಒಟ್ಟು 4,50,000/- ರೂ ಗಳನ್ನು ನೊಂದ ಬಾಲಕಿಗೆ ಪರಿಹಾರವಾಗಿ ನೀಡಲು ಆದೇಶಿಸಿರುತ್ತಾರೆ.