KARNATAKA NEWS/ ONLINE / Malenadu today/ Apr 25, 2023 GOOGLE NEWS
ಶಿವಮೊಗ್ಗ/ ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ, ನೀತಿ ಸಂಹಿತೆ ಉಲ್ಲಂಘಿಸಿ ಅಕ್ರಮವಾಗಿ ಹಣ ಹಾಗೂ ವಸ್ತುಗಳನ್ನು ಸಂಗ್ರಹಿಸಿಟ್ಟಿದ್ದವರ ಮೇಲೆ ಶಿವಮೊಗ್ಗ ಪೊಲೀಸರು ದಾಳಿ ನಡೆಸಿದ್ದಾರೆ.
24-04-2023 ರಂದು ಸೂಕ್ತ ದಾಖಲೆಗಳಿಲ್ಲದೇ ಸಾಗಾಟ ಮಾಡುತ್ತಿದ್ದ ಮತ್ತು ಸಂಗ್ರಹಿಸಿಟ್ಟಿದ್ದ ವಸ್ತು ಮತ್ತು ನಗದು ಹಣವನ್ನು ಅಮಾನತ್ತು ಪಡಿಸಿಕೊಂಡಿದ್ದಾರೆ.
ಎಲ್ಲೆಲ್ಲಿ ಏನೇನು?
1)ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆ ಇಲ್ಲದೆ ಸಂಗ್ರಹಿಸಿಟ್ಟಿದ್ದ ಅಂದಾಜು ಮೌಲ್ಯ 5,40,000/- ರೂ ಗಳ ಸೀರೆಗಳನ್ನು ಅಮಾನತ್ತು ಪಡಿಸಿಕೊಳ್ಳಲಾಗಿರುತ್ತದೆ.
2)ಶಿಕಾರಿಪುರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆ ಇಲ್ಲದೆ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ರೂ 98,00,000/- ನಗದು ಹಣವನ್ನು ಅಮಾನತ್ತು ಪಡಿಸಿಕೊಳ್ಳಲಾಗಿರುತ್ತದೆ.
3)ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆ ಇಲ್ಲದೆ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ಅಂದಾಜು ಮೌಲ್ಯ 59,00,000/- ರೂ ಗಳ ಸೀರೆಗಳನ್ನು ಅಮಾನತ್ತು ಪಡಿಸಿಕೊಳ್ಳಲಾಗಿರುತ್ತದೆ.
4) ಸೊರಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆ ಇಲ್ಲದೆ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ರೂ 12,00,000/- ನಗದು ಹಣವನ್ನು ಅಮಾನತ್ತು ಪಡಿಸಿಕೊಳ್ಳಲಾಗಿರುತ್ತದೆ.
Read/ ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಬಂದಿದ್ದ ಟೂರಿಸ್ಟ್ ಬಸ್ ಪಲ್ಟಿ! ಓರ್ವರ ಸಾವು/ 20 ಕ್ಕೂ ಹೆಚ್ಚು ಮಂದಿಗೆ ಗಾಯ!
Malenadutoday.com Social media