KARNATAKA NEWS/ ONLINE / Malenadu today/ Apr 27, 2023 GOOGLE NEWS
ಶಿವಮೊಗ್ಗ/ ಶಿವಮೊಗ್ಗ ಮಹಾನಗರ ಪಾಲಿಕೆ ಆಡಳಿತ ಪಕ್ಷದ ನಾಐಕ ಜ್ಞಾನೇಶ್ವರ್ ರವರ ಸಹೋದರ ಹಾಗೂ ಕುರುಬರ ಸೊಸೈಟಿಯಲ್ಲಿ ಪಿಗ್ಮಿ ಸಂಗ್ರಹಗಾರರಾಗಿದ್ದ ಅನಿಲ್ ರವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಿನ್ನೆ ಅವರು ಕೃಷಿ ನಗರದಲ್ಲಿರುವ ತಮ್ಮ ಮನೆಯಲ್ಲಿ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು.
ಅನಾರೋಗ್ಯಕಾಡುತ್ತಿದ್ದ ಅವರಿಗೆ ಆಪರೇಷನ್ ಸಹ ಆಗಿತ್ತು, ಸ್ಟ್ರೋಕ್ ಆಗುವ ಆತಂಕದಲ್ಲಿದ್ದರು. ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಡೆತ್ ನೋಟ್ ಬರೆದಿಟ್ಟಿದ್ದಾರೆ. ಈ ಸಂಬಂಧ ಶಿವಮೊಗ್ಗ ಗ್ರಾಮಾಂತ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ಧಾರೆ.
ಇದನ್ನ ಓದಿ/ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ ಶಿವಮೊಗ್ಗ ಕೋರ್ಟ್ ನೀಡಿತು ಭಾರೀ ಶಿಕ್ಷೆ