ಡಿಸೆಂಬರ್,02, 2025 : ಮಲೆನಾಡು ಟುಡೆ ಸುದ್ದಿ : ಕೊಲೆ ಯತ್ನ ಪ್ರಕರಣದಲ್ಲಿ ಆರೋಪಿಗೆ 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 35,000 ರೂಪಾಯಿ ದಂಡ ವಿಧಿಸಿದ ಶಿವಮೊಗ್ಗ ನ್ಯಾಯಾಲಯ
ಮಲೆನಾಡಲ್ಲಿ ಅಡಿಕೆ ದರ ಏರಿಳಿತ: ಶಿವಮೊಗ್ಗ, ಸಾಗರ ಸೇರಿದಂತೆ ಹಲವು APMC ಅಡಕೆ ರೇಟ್‌ಗಳು ಇಲ್ಲಿವೆ
ಶಿವಮೊಗ್ಗ ಕೋರ್ಟ್ ತೀರ್ಪು
ಹಗೆತನದಿಂದ ಸಂಬಂಧಿಕರ ಕೊಲೆಗೆ ಯತ್ನಿಸಿ ಗಂಭೀರವಾಗಿ ಹಲ್ಲೆ ನಡೆಸಿದ ಪ್ರಕರಣವೊಂದರಲ್ಲಿ, ಆರೋಪಿಗೆ ಶಿವಮೊಗ್ಗದ 3ನೇ ಹೆಚ್ಚುವರಿ ಮತ್ತು ಜಿಲ್ಲಾ ನ್ಯಾಯಾಲಯ ಶಿಕ್ಷೆ ನೀಡಿ ತೀರ್ಪು ನೀಡಿದೆ. ನ್ಯಾಯಾಲವು ಆರೋಪಿಗೆ 7 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 35,000 ರೂಪಾಯಿ ದಂಡ ವಿಧಿಸಿ ಆದೇಶಿಸಿದೆ.
Shivamogga Kallaganguru ಕಲ್ಲಗಂಗೂರು ಪ್ರಕರಣ
ಕಲ್ಲಗಂಗೂರು (Shivamogga Kallaganguru)ಗ್ರಾಮದ ನಿವಾಸಿ ದೊಡ್ಡೇಶಪ್ಪ (48) ಶಿಕ್ಷೆಗೆ ಗುರಿಯಾದ ಆರೋಪಿ. ಈತ ತನ್ನ ದೊಡ್ಡಪ್ಪನ ಮಗಳಾದ ಸುಮ ಮತ್ತು ಆಕೆಯ ಪತಿ ರಾಮಚಂದ್ರಪ್ಪ ಕೆ ಅವರ ಮೇಲೆ ಹಲವು ವರ್ಷಗಳಿಂದ ದ್ವೇಷ ಸಾಧಿಸ್ತಿದ್ದ. 2020 ರ ಡಿಸೆಂಬರ್ 11 ರಂದು, ಹಳೆ ವೈಷಮ್ಯದ ವಿಚಾರವಾಗಿ ರಾಮಚಂದ್ರಪ್ಪ ಮತ್ತು ದೊಡ್ಡೇಶಪ್ಪ ನಡುವೆ ಗಲಾಟೆ ಆಗಿತ್ತು. ಈ ವೇಳೆ, ರಾಮಚಂದ್ರಪ್ಪ ಅವರ ಮೇಲೆ ಆರೋಪಿ ದೊಡ್ಡೇಶಪ್ಪ ಕಂದ್ಲಿಯಿಂದ ತಲೆಗೆ ಹೊಡೆದಿದ್ದ. ಇದರಿಂದ ರಾಮಚಂದ್ರಪ್ಪ ಗಂಭೀರವಾಗಿ ಗಾಯಗೊಂಡಿದ್ದರು.

ಮಲೆನಾಡಲ್ಲಿ ಅಡಿಕೆ ದರ ಏರಿಳಿತ: ಶಿವಮೊಗ್ಗ, ಸಾಗರ ಸೇರಿದಂತೆ ಹಲವು APMC ಅಡಕೆ ರೇಟ್‌ಗಳು ಇಲ್ಲಿವೆ
ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ
ಈ ಸಂಬಂಧ ಸುಮ ಅವರು ನೀಡಿದ ದೂರಿನ ಮೇರೆಗೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಐಪಿಸಿ 326 , 504 , 506 ಮತ್ತು 307 (ಕೊಲೆ ಯತ್ನ) ಆರೋಪದ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಅಂದಿನ ತನಿಖಾಧಿಕಾರಿಯಾಗಿದ್ದ ಶಿವಮೊಗ್ಗ ಗ್ರಾಮಾಂತರದ ಪಿಐ, ಹಾಲಿ ಶಿವಮೊಗ್ಗ ಬಿ ಉಪ ವಿಭಾಗದ ಡಿವೈಎಸ್‌ಪಿ ಸಂಜೀವ್ ಕುಮಾರ್ ಟಿ. ಅವರು ನ್ಯಾಯಾಲಯಕ್ಕೆ ಆರೋಪಿ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಿದ್ದರು.
ಪ್ರಕರಣದ ಕುರಿತು ಕೋರ್ಟ್ನಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಶಾಂತರಾಜ್ ಜೆ ಅವರು ವಾದ ಮಂಡಿಸಿದ್ದರು. ಇನ್ನೂ ಕೇಸ್ನ ವಿಚಾರಣೆ ಮುಗಿಸಿದ ನ್ಯಾಯಾಧೀಶರಾದ ಯಶವಂತ ಕುಮಾರ್ ಅವರು ಆರೋಪಿಯು ಉದ್ದೇಶಪೂರ್ವಕವಾಗಿ ಕೊಲೆ ಯತ್ನಗೆ ಮುಂದಾಗಿದ್ದು, ದೃಡಪಟ್ಟಿರುವ ಹಿನ್ನೆಲೆ ಆರೋಪಿಗೆ ಶಿಕ್ಷೆ ಹಾಗೂ ದಂಡ ವಿಧಿಸಿದ್ದಾರೆ.

ಮಲೆನಾಡಲ್ಲಿ ಅಡಿಕೆ ದರ ಏರಿಳಿತ: ಶಿವಮೊಗ್ಗ, ಸಾಗರ ಸೇರಿದಂತೆ ಹಲವು APMC ಅಡಕೆ ರೇಟ್‌ಗಳು ಇಲ್ಲಿವೆ
ಕಲ್ಲಗಂಗೂರು ಕೊಲೆ ಯತ್ನ ಪ್ರಕರಣದಲ್ಲಿ ಆರೋಪಿಗೆ 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ, 35000 ರೂ. ದಂಡ Shivamogga Kallaganguru Attempted Murder Case – Accused Sentenced to 7 Years Rigorous Imprisonment, ₹35000 Fine
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel instagram youtube telegram google business malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!
ಪತ್ನಿ ವಿಚಾರದಲ್ಲಿ ಪತಿರಾಯನಿಗೆ 2 ವರ್ಷ ಶಿಕ್ಷೆ! ಸಾಗರ ಕೋರ್ಟ್ನಲ್ಲಿ ತೀರ್ಪು
Shivamogga news live, Shimoga news kannada live, ಶಿವಮೊಗ್ಗ ನ್ಯೂಸ್ today, Shimoga news kannada epaper today, ಶಿವಮೊಗ್ಗ ನ್ಯೂಸ್ yesterday, Malenadu news live, ಮಲೆನಾಡು ಸುದ್ದಿ, ಶಿವಮೊಗ್ಗ ಜಿಲ್ಲಾ ವಾರ್ತೆ,
