ಶಿವಮೊಗ್ಗ ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯ ವ್ಯಾಪ್ತಿಯಲ್ಲಿ ನಾಪತ್ತೆಯಾಗಿದ್ದ ಒಟ್ಟು 110 ಮೊಬೈಲ್ ಫೋನ್‌ಗಳನ್ನು ಪತ್ತೆ ಹತ್ತೆಹಚ್ಚಿದ್ದು, ಇಂದು (ಬುಧವಾರ) ಸಂಜೆ 5 ಗಂಟೆಗೆ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಅವುಗಳನ್ನು ವಾರಸುದಾರರಿಗೆ ಹಿಂದಿರುಗಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಎಟಿಎಂ ಅಪ್ಡೇಟ್ ನೆಪದಲ್ಲಿ ಸಾಗರದ ಮಹಿಳೆಗ ₹2.84 ಲಕ್ಷ ವಂಚನೆ
ಈ ಕುರಿತು ಪೊಲೀಸ್ ಇಲಾಖೆ ಪ್ರಕಟಣೆ ಹೊರಡಿಸಿದ್ದು, ಡಿವೈಎಸ್‌ಪಿ ಕೃಷ್ಣಮೂರ್ತಿ ಕೆ. ಮತ್ತು ಪೊಲೀಸ್ ಇನ್ಸ್‌ಪೆಕ್ಟರ್ ಮಂಜುನಾಥ್ ಅವರ ನೇತೃತ್ವದಲ್ಲಿ ಸಿಬ್ಬಂದಿ ವರ್ಗವು ಈ ಕಾರ್ಯಾಚರಣೆಯನ್ನು ಯಶಸ್ವಿಗೊಳಿಸಿದೆ. ಸೈಬರ್ ಕ್ರೈಂ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ CEIR (Central Equipment Identity Register) ಪೋರ್ಟಲ್ ಅನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಮೊಬೈಲ್‌ಗಳನ್ನು ಪತ್ತೆ ಹಚ್ಚಿದ್ದಾರೆ.
ಶಿವಮೊಗ್ಗ ಜಿಲ್ಲೆಯಾದ್ಯಂತ ಇದುವರೆಗೂ ಸುಮಾರು 6,445 ಕಳೆದುಹೋದ ಮೊಬೈಲ್‌ಗಳು ವರದಿಯಾಗಿದ್ದು, ಇದಕ್ಕೂ ಮೊದಲು ದೇಶದ ವಿವಿಧ ರಾಜ್ಯಗಳಾದ ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಕೇರಳ, ತೆಲಂಗಾಣ ಸೇರಿದಂತೆ ಕರ್ನಾಟಕದ ಎಲ್ಲ ಜಿಲ್ಲೆಗಳಿಂದಲೂ ಒಟ್ಟು 1,194ಕ್ಕೂ ಹೆಚ್ಚು ಮೊಬೈಲ್‌ಗಳನ್ನು ಪತ್ತೆ ಮಾಡಿ ವಾರಸುದಾರರಿಗೆ ನೀಡಲಾಗಿದೆ., ಈಗ ಮತ್ತೆ ಪತ್ತೆಯಾದ 110 ಮೊಬೈಲ್‌ಗಳನ್ನು ಇಂದು ಸಂಜೆ ಅವುಗಳ ಮಾಲೀಕರಿಗೆ ಹಸ್ತಾಂತರಿಸಲಾಗುತ್ತದೆ ಎಂದಿದೆ.
Cyber Crime Police Recover 110 Lost Mobiles


