ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ: ಮೆಸ್ಕಾಂ ತುರ್ತು ಕಾಮಗಾರಿಯನ್ನು ಹಮ್ಮಿಕೊಂಡಿರುವ ಕಾರಣಕ್ಕಾಗಿ ಶಿವಮೊಗ್ಗ, ಭದ್ರಾವತಿ ಮತ್ತು ಆನವಟ್ಟಿಯ (Shivamogga Bhadravathi Anavatti Power Cut)ಕೆಲವು ಪ್ರದೇಶಗಳಲ್ಲಿ ಮೂರು ದಿನಗಳ ಕಾಲ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಅದರ ವಿವರ ಹೀಗಿದೆ
Shivamogga Bhadravathi Anavatti Power Cut

ಇಂದು ಕರೆಂಟ್ ಇರಲ್ಲ
ಶಿವಮೊಗ್ಗ: ನಗರ ಆಲ್ಕೊಳ ವಿದ್ಯುತ್ ವಿತರಣೆ ಕೇಂದ್ರದಿಂದ ಸರಬರಾಜಾಗುವ ಫೀಡರ್ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಿನ್ನೆಲೆಯಲ್ಲಿ ಡಿ. 12ರಂದು ಬೆಳಗ್ಗೆ 9ರಿಂದ ಸಂಜೆ 5 ರವರೆಗೆ ಐಜಿ ವೃತ್ತ, ಶಿವಪ್ಪನಾಯಕ ಬಡಾವಣೆ, ಜಯದೇವ ಬಡಾವಣೆ, ಕಾಶೀಪುರ, ಆಲ್ಕೊಳ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ನಾಳೆ ವಿದ್ಯುತ್ ವ್ಯತ್ಯಯ
ಭದ್ರಾವತಿಯ ಭದ್ರಾ ಜನರೇಟಿಂಗ್ ಸ್ಟೇಷನ್‌ನಲ್ಲಿ ತುರ್ತು ಕಾಮಗಾರಿ ಹಿನ್ನೆಲೆಯಲ್ಲಿ ಡಿ.13ರಂದು ಬೆಳಗ್ಗೆ 9ರಿಂದ ಸಂಜೆ 6ರ ವರೆಗೆ ವದಿಯೂರು, ಗ್ಯಾರೇಜ್ ಕ್ಯಾಂಪ್, ಸಿಂಗನಮನೆ, ಶಂಕರಘಟ್ಟ, ಕುವೆಂಪು ವಿವಿ, ನೆಲ್ಲಿಸರ, ಮಾಳೇನಹಳ್ಳಿ, ಗೋಣಿಬೀಡು, ಶಾಂತಿನಗರ, ತಾವರಘಟ್ಟ, ಮಲ್ಲಿಗೇನಹಳ್ಳಿ, ತಮ್ಮಡಿಹಳ್ಳಿ, ಜಂಕ್ಷನ್, ರಂಗನಾಥಪುರ, ಹುಣಸೇಕಟ್ಟೆ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
14ರಂದು ವಿದ್ಯುತ್ ವ್ಯತ್ಯಯ
ಆನವಟ್ಟಿಯ ಕೋಟಿಪುರ ವಿದ್ಯುತ್ ವಿತರಣಾಕೇಂದ್ರದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಿನ್ನೆಲೆಯಲ್ಲಿ ಆನವಟ್ಟಿ ಪಟ್ಟಣ ಮತ್ತು ಕೋಟಿಪುರ ಫೀಡರ್ ವ್ಯಾಪ್ತಿಯ ಗ್ರಾಮಗಳಲ್ಲಿ 14ರಂದು ಬೆಳಗ್ಗೆ 10ರಿಂದ ಸಂಜೆ 6ರ ವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel instagram youtube telegram google business malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!
Shivamogga news live, Shimoga news kannada live, ಶಿವಮೊಗ್ಗ ನ್ಯೂಸ್ today, Shimoga news kannada epaper today, ಶಿವಮೊಗ್ಗ ನ್ಯೂಸ್ yesterday, Malenadu news live, ಮಲೆನಾಡು ಸುದ್ದಿ, ಶಿವಮೊಗ್ಗ ಜಿಲ್ಲಾ ವಾರ್ತೆ, ಶಿವಮೊಗ್ಗ ಭದ್ರಾವತಿ ಆನವಟ್ಟಿ ಡಿ. 12 ರಿಂದ 14ರವರೆಗೆ ವಿದ್ಯುತ್ ವ್ಯತ್ಯಯ ಪವರ್ ಕಟ್ ಪ್ರದೇಶಗಳು. Shivamogga Bhadravathi Anavatti Power Cut Electricity Interruption Dec 12 to 14.
