ಜಿ.ಪಂ. ತಾ.ಪಂ. ಚುನಾವಣೆಗೆ ಕೊನೆಗೂ ಮುಹೂರ್ತ ಫಿಕ್ಸ್​ : ಚುನಾವಣೆ ಯಾವಾಗ ಗೊತ್ತಾ..? 

prathapa thirthahalli
Prathapa thirthahalli - content producer

ಕಳೆದ ನಾಲ್ಕು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ತಾಲೂಕು ಪಂಚಾಯ್ತಿ ಮತ್ತು ಜಿಲ್ಲಾ ಪಂಚಾಯ್ತಿ ಚುನಾವಣೆಗಳನ್ನು ಅಂತಿಮವಾಗಿ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಇವತ್ತಿನಿಂದ 3 ದಿನ ಕರೆಂಟ್ ಇರಲ್ಲ! ಶಿವಮೊಗ್ಗ, ಭದ್ರಾವತಿ, ಆನವಟ್ಟಿಯಲ್ಲಿ ಪವರ್ ಕಟ್ ಎಲ್ಲೆಲ್ಲಿ!

Karnataka Local Body Elections 2026
Karnataka Local Body Elections 2026

ಸುವರ್ಣ ವಿಧಾನಸೌಧದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಗ್ರಾಮ ಪಂಚಾಯ್ತಿ, ತಾಲೂಕು ಮತ್ತು ಜಿಲ್ಲಾ ಪಂಚಾಯ್ತಿಗಳ ಜೊತೆಗೆ ವಿವಿಧ ಪುರಸಭೆ ಹಾಗೂ ನಗರಸಭೆಗಳು ಸೇರಿದಂತೆ ರಾಜ್ಯದ 6,500ಕ್ಕೂ ಹೆಚ್ಚು ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು 2026ರ ಏಪ್ರಿಲ್‌ನಲ್ಲಿ ನಡೆಸಲು ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲು ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. 

ಕಳೆದ ನಾಲ್ಕು ವರ್ಷಗಳಿಂದ ತಾಲೂಕು ಪಂಚಾಯ್ತಿ ಮತ್ತು ಜಿಲ್ಲಾ ಪಂಚಾಯ್ತಿ ಚುನಾವಣೆಗಳು ನಡೆದಿರಲಿಲ್ಲ. ಜೊತೆಗೆ, ನಗರ ಸ್ಥಳೀಯ ಸಂಸ್ಥೆಗಳ ಅವಧಿಯೂ ಮುಗಿದಿದ್ದು, ಹಲವು ಗ್ರಾಮ ಪಂಚಾಯ್ತಿಗಳ ಅವಧಿ ಕೂಡ ಮುಗಿಯುವ ಹಂತದಲ್ಲಿದೆ. ಜಿ.ಪಂ. ಮತ್ತು ತಾ.ಪಂ. ಚುನಾವಣೆ ವಿಳಂಬದ ಪ್ರಕರಣ ನ್ಯಾಯಾಲಯದಲ್ಲಿ ಬಾಕಿ ಉಳಿದಿದ್ದು, ತ್ವರಿತಗತಿಯಲ್ಲಿ ಚುನಾವಣೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ನ್ಯಾಯಾಲಯವು ಸಹ ಸರ್ಕಾರಕ್ಕೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ, ಪ್ರಸ್ತುತ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು 30 ತಿಂಗಳಾದರೂ ಒಂದೂ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸದ ಕಾರಣ, ಅನಗತ್ಯ ವಿಳಂಬ ಮಾಡದೆ ತಕ್ಷಣವೇ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿ ಪುನರ್‌ ವಿಂಗಡಣೆ, ಅಂತಿಮ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಮುಗಿಸಿ, ಚುನಾವಣಾ ಅಧಿಸೂಚನೆಯನ್ನು ಹೊರಡಿಸಲು ಕ್ರಮ ಕೈಗೊಳ್ಳಬೇಕು ಎಂದು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

Karnataka Local Body Elections 2026

Karnataka Local Body Elections 2026
Karnataka Local Body Elections 2026

 

Share This Article