ಶಿವಮೊಗ್ಗ: ಕಾಂಗ್ರೆಸ್‌ ಪ್ರತಿಭಟನೆ ವೇಳೆ ಕಳ್ಳರ ಕೈಚಳಕ; ಮಹಿಳಾ ಎಎಸ್‌ಐ  ಚಿನ್ನದ ಸರ ಕಳವು

ಹಂಚಿಕೊಳ್ಳಿ
WhatsApp Facebook X Telegram
Shivamogga
Shivamogga

ಶಿವಮೊಗ್ಗ |. ಜಿಲ್ಲಾ ಕಾಂಗ್ರೆಸ್ ಹಮ್ಮಿಕೊಂಡಿದ್ದ ಬಿಜೆಪಿ ಕಚೇರಿ ಮುತ್ತಿಗೆ ಪ್ರತಿಭಟನೆಯ ವೇಳೆ , ಕರ್ತವ್ಯ ನಿರತ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರ  ಕುತ್ತಿಗೆಯಲ್ಲಿದ್ದ ಸುಮಾರು 60 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕಳ್ಳರು ಕಿತ್ತುಕೊಂಡು ಪರಾರಿಯಾಗಿದ್ದಾರೆ. 

Shivamogga Woman ASI's Gold Chain Snatched
Shivamogga Woman ASI’s Gold Chain Snatched

ಪ್ರತಿಭಟನಾಕಾರರನ್ನು ನಿಯಂತ್ರಿಸುವಲ್ಲಿ ಪೊಲೀಸರು ನಿರತರಾಗಿದ್ದ ಸಂದರ್ಭದಲ್ಲಿ ಈ ಕಳ್ಳತನ ನಡೆದಿದೆ.  ಎ ಎಸ್​ ಐ ಅಮೃತಾಬಾಯಿ ಅವರು ಇತ್ತೀಚೆಗಷ್ಟೇ ಹೊಸ ಮಾಂಗಲ್ಯ ಸರವನ್ನು ಮಾಡಿಸಿದ್ದರು ಎನ್ನಲಾಗಿದ್ದು, ಇಂದು ಪ್ರತಿಭಟನೆಯ ತಳ್ಳಾಟ-ನೂಕಾಟದ ವೇಳೆ ಕಳ್ಳರು  ಸರವನ್ನು ಎಗರಿಸಿದ್ದಾರೆ.

ಘಟನೆ ನಡೆದ ತಕ್ಷಣ ಎಚ್ಚೆತ್ತುಕೊಂಡ ಪೊಲೀಸರು. ಪ್ರತಿಭಟನೆಯ ಆಸುಪಾಸಿನಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳು ಹಾಗೂ ಮಾಧ್ಯಮಗಳ ವಿಡಿಯೋ ಕ್ಲಿಪ್ಪಿಂಗ್‌ಗಳನ್ನು ಪರಿಶೀಲಿಸಿ ಕಳ್ಳರ ಪತ್ತೆಗೆ ಮುಂದಾಗಿದ್ದಾರೆ. 

Shivamogga Woman ASI’s Gold Chain Snatched

Shivamogga Woman ASI's Gold Chain Snatched

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor