ಶಿವಮೊಗ್ಗ : ಶಿವಮೊಗ್ಗ ತಾಲ್ಲೂಕಿನ ತಿಮ್ಮಕಾಪುರ ಸಕ್ರೆಬೈಲು ಗ್ರಾಮದ ಸರ್ಕಾರಿ ಕನ್ನಡ ಮತ್ತು ಉರ್ದು ಶಾಲೆ ಹಾಗೂ ಅಂಗನವಾಡಿ ಕೇಂದ್ರದ ಸಂಯುಕ್ತಾಶ್ರಯದಲ್ಲಿ 2ನೇ ವರ್ಷದ ಶಾಲಾ ವಾರ್ಷಿಕೋತ್ಸವ ಸಮಾರಂಭವು ಅತ್ಯಂತ ಸಂಭ್ರಮದಿಂದ ಜರುಗಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಓ) ರಮೇಶ್ ಅವರು ಶಾಲೆಯ ಶೈಕ್ಷಣಿಕ ಪ್ರಗತಿಯನ್ನು ಶ್ಲಾಘಿಸಿ, ಮುಂದಿನ ಶೈಕ್ಷಣಿಕ ಸಾಲಿನಲ್ಲಿ ಶಾಲೆಗೆ ಹೊಸ ಕಟ್ಟಡ ನಿರ್ಮಿಸಿಕೊಡುವ ಭರವಸೆಯನ್ನು ನೀಡಿದರು.

ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಸಿಬ್ಬಂದಿಗಳಿಂದಲೇ ಆಪರೇಷನ್ ಮೊಬೈಲ್ ! ಸಿಕ್ತು 10 ಸಾವಿರ ಬಹುಮಾನ
Sakrebailu School ಕಾರ್ಯಕ್ರಮದ ವಿಶೇಷತೆಯಾಗಿ ಹಳೆಯ ವಿದ್ಯಾರ್ಥಿ ಸಂಘದ ಸಹಕಾರದೊಂದಿಗೆ ಅಭಿವೃದ್ಧಿಪಡಿಸಲಾದ ಶಾಲೆಯ ನೂತನ ಆಟದ ಮೈದಾನವನ್ನು ಹಳೆಯ ವಿದ್ಯಾರ್ಥಿಗಳು ಅನಾವರಣಗೊಳಿಸಿದರು. ಗ್ರಾಮೀಣ ಭಾಗದ ಮಕ್ಕಳ ಕ್ರೀಡಾ ಆಸಕ್ತಿಗೆ ಪೂರಕವಾಗಿ ಈ ಮೈದಾನ ಸಜ್ಜುಗೊಂಡಿರುವುದು ಪೋಷಕರ ಮೆಚ್ಚುಗೆಗೆ ಪಾತ್ರವಾಯಿತು. ಬಿಇಓ ರಮೇಶ್ ಅವರು ಮಾತನಾಡಿ, ಸರ್ಕಾರಿ ಶಾಲೆಗಳ ಬಲವರ್ಧನೆಗೆ ಹಳೆಯ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರ ಸಹಭಾಗಿತ್ವ ಅವಶ್ಯಕವಾಗಿದ್ದು, ಮೂಲಸೌಕರ್ಯಗಳ ಕೊರತೆಯನ್ನು ಹಂತ ಹಂತವಾಗಿ ನೀಗಿಸಲಾಗುವುದು ಎಂದರು.

ಸಮಾರಂಭದಲ್ಲಿ ಸಿಆರ್‌ಪಿ ಪದಾಧಿಕಾರಿಗಳು, ಗ್ರಾಮಸ್ಥರು, ಹಳೆಯ ವಿದ್ಯಾರ್ಥಿ ಸಂಘದ ಸದಸ್ಯರು ಹಾಗೂ ಶಾಲಾ ಅಭಿವೃದ್ಧಿ ಸಮಿತಿಯ ಮುಖಂಡರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರದರ್ಶನಗೊಂಡವು. ಶಾಲಾ ಶಿಕ್ಷಕರು ಹಾಗೂ ಪೋಷಕರು ಈ ಹಬ್ಬದಂತಹ ವಾತಾವರಣಕ್ಕೆ ಸಾಕ್ಷಿಯಾದರು.