ಅಮೀರ್ ಅಹಮ್ಮದ್ ಸರ್ಕಲ್‌ ಬಳಿ ಮೊಬೈಲ್​ ಅಂಗಡಿಯಲ್ಲಿ ಯುವಕನಿಗೆ ಇರಿತ

ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ:  ಶಿವಮೊಗ್ಗ ನಗರದ ಅಮೀರ್ ಅಹಮ್ಮದ್ ಸರ್ಕಲ್‌  ಬಳಿ (Amir Ahmad Circle Shimoga) ಯುವಕನೊಬ್ಬನಿಗೆ ಮಾರಕಾಸ್ತ್ರದಿಂದ ಇರಿಯಲಾಗಿದೆ, ಸಯ್ಯದ್ ಬರ್ಕತ್ (32) ಎಂಬಾತನಿಗೆ ಇರಿಯಾಗಲಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದಾನೆ. ಈತನನ್ನು ಸದ್ಯ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 

ಗಮನಕ್ಕೆ: ಶಿವಮೊಗ್ಗ ಜಿಲ್ಲಾ ಪಂಚಾಯತಿಯಲ್ಲಿ ಅಕೌಂಟ್ಸ್ ಮ್ಯಾನೇಜರ್ ಹುದ್ದೆ! ಉದ್ಯೋಗ ಸುದ್ದಿ!

ಅಮೀರ್ ಅಹಮ್ಮದ್ ಸರ್ಕಲ್ ಸಮೀಪ ಮೊಬೈಲ್ ಅಂಗಡಿ ಇಟ್ಟುಕೊಂಡಿದ್ದ ಸಯ್ಯದ್​ ಬರ್ಕತ್​, ಎಂದಿನಂತೆ ವ್ಯವಹಾರದಲ್ಲಿ ತೊಡಗಿದ್ದ. ಈ ವೇಳೆ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳು ಆತನ ಮೇಲೆ ಹಲ್ಲೆ ಮಾಡಿ ಮಾರಕಾಸ್ತ್ರದಿಂದ ಇರಿದು, ಸ್ಥಳದಿಂದ ಪರಾರಿಯಾಗಿದ್ದಾರೆ.  ಗಾಯಗೊಂಡಿರುವ ಬರ್ಕತ್ ಅವರನ್ನು ತಕ್ಷಣವೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಹಳೆ ದ್ವೇಷ ಮತ್ತು ವೈಯಕ್ತಿಕ ದ್ವೇಷದ ಹಿನ್ನಲೆಯಲ್ಲಿ ಈ ಕೃತ್ಯ ಎಸಗಲಾಗಿದೆ ಎನ್ನಲಾಗುತ್ತಿದೆ. ಈ ಬಗ್ಗೆ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿರುವ ದೊಡ್ಡಪೇಟೆ ಪೊಲೀಸ್ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. 

Amir Ahmad Circle Shimoga
Amir Ahmad Circle Shimoga

ತುಮಕೂರಿನ ವ್ಯಕ್ತಿ ಶಿವಮೊಗ್ಗದಲ್ಲಿ ಸಾವು, ಈತನ ಬಗ್ಗೆ ತಿಳಿದಿದ್ದರೆ ಪೊಲೀಸರಿಗೆ ಮಾಹಿತಿ ನೀಡಿ

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel  instagram youtube telegram  google business   malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!

Shivamogga news live, Shimoga news kannada live, ಶಿವಮೊಗ್ಗ ನ್ಯೂಸ್ today, Shimoga news kannada epaper today, ಶಿವಮೊಗ್ಗ ನ್ಯೂಸ್ yesterday, Malenadu news live, ಮಲೆನಾಡು ಸುದ್ದಿ, ಶಿವಮೊಗ್ಗ ಜಿಲ್ಲಾ ವಾರ್ತೆ, ಶಿವಮೊಗ್ಗದ ಅಮೀರ್ ಅಹಮ್ಮದ್ ಸರ್ಕಲ್‌ನಲ್ಲಿ ಯುವಕನಿಗೆ ಚಾಕು ಇರಿತ ದೊಡ್ಡಪೇಟೆ ಠಾಣೆಯಲ್ಲಿ ಕೇಸ್ Youth Stabbed at Amir Ahmad Circle Shimoga: Case Registered in Doddapete Station
Amir Ahmad Circle Shimoga
Amir Ahmad Circle Shimoga

 

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು