Horrific Bus Accident near Hiriyur Chitradurga ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕು ಜವನಗೊಂಡನಹಳ್ಳಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಇವತ್ತು ಬೆಳಗಿನ ಜಾವ ಭೀಕರ ಘಟನೆ ಸಂಭವಿಸಿದೆ.
ಬೆಂಗಳೂರಿನಿಂದ ಗೋಕರ್ಣದತ್ತ ಪ್ರಯಾಣಿಸುತ್ತಿದ್ದ ಸೀಬರ್ಡ್ ನಾನ್ ಎಸಿ ಸ್ಲೀಪರ್ ಬಸ್ ಹಾಗೂ ಕಂಟೈನರ್ ನಡುವೆ ಡಿಕ್ಕಿಯಾಗಿ ಅಗ್ನಿ ಅವಘಡ ಸಂಭವಿಸಿದೆ.ಈ ಘಟನೆಯಲ್ಲಿ ಕನಿಷ್ಟ 9 ಮಂದಿ ಪ್ರಯಾಣಿಕರು ಬೆಂಕಿಗಾಹುತಿಯಾಗಿದ್ದಾರೆ. ಸಾವಿನ ಸಂಖ್ಯೆ ಜಾಸ್ತಿಯಾಗುವ ಆತಂಕ ನಿರ್ಮಾಣವಾಗಿದೆ. ಘಟನೆಯಲ್ಲಿ ಬಸ್ ಪೂರ್ತಿಯಾಗಿ ಸುಟ್ಟು ಅವಶೇಷ ಮಾತ್ರವಷ್ಟೆ ಉಳಿದುಕೊಂಢಿದೆ. ಇನ್ನೂ ಮೃತರ ಸಂಖ್ಯೆ ಇನ್ನು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಪೂರ್ವ ವಲಯ ಐಜಿ ರವಿಕಾಂತೇಗೌಡ ಅವರು ಮಾಹಿತಿ ನೀಡಿದ್ದಾರೆ.

Horrific Bus Accident near Hiriyur Chitradurga
ಭದ್ರಾ ಆನೆಯ ಶಿವಮೊಗ್ಗ ರೌಂಡ್ಸ್! ಶಿಕಾರಿಪುರದದಲ್ಲಿ ಕಾಣಿಸಿದ ಕಾಡಾನೆ!
ಕಂಟೈನರ್ ಚಾಲಕ ಅಜಾಗರೂಕತೆಯಿಂದ ಘಟನೆ ಸಂಭವಿಸಿದೆ ಅಂತಾ ಹೇಳಲಾಗುತ್ತಿದೆ. ಬೆಂಗಳೂರಿನತ್ತ ಸಾಗುತ್ತಿದ್ದ ಕಂಟೈನರ್ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ದಾಟಿ ಎದುರಿಗಡೆಯಿಂದ ರುತ್ತಿದ್ದ ಬಸ್ಗೆ ನೇರವಾಗಿ ಡಿಕ್ಕಿ ಹೊಡೆದಿದೆ. ಕಂಟೈನರ್ ಚಾಲಕ ನಿದ್ದೆ ಮಂಪರಿನಲ್ಲಿದ್ದ ಕಾರಣ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಡಿಕ್ಕಿ ಹೊಡೆದ ತಕ್ಷಣವೇ ವಾಹನಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಇಡೀ ಬಸ್ ಜ್ವಾಲೆಗೆ ಸಿಲುಕಿದೆ. ಅಪಘಾತದ ಸಮಯದಲ್ಲಿ ಬಸ್‌ನಲ್ಲಿ ಚಾಲಕ ಮತ್ತು ನಿರ್ವಾಹಕ ಸೇರಿದಂತೆ ಒಟ್ಟು 32 ಪ್ರಯಾಣಿಕರು ಇದ್ದರು ಎಂದು ವರದಿಯಾಗಿದೆ.Horrific Bus Accident near Hiriyur Chitradurga

#Chitradurga ಚಿತ್ರದುರ್ಗದ ಹಿರಿಯೂರು ಸಮೀಪ ಸೀಬರ್ಡ್ ಬಸ್ ಮತ್ತು ಕಂಟೈನರ್ ನಡುವೆ ಭೀಕರ ಡಿಕ್ಕಿ. ಅಪಘಾತದಲ್ಲಿ 9 ಮಂದಿ ಸಜೀವ ದಹನ, 21 ಗಾಯಾಳುಗಳು ಆಸ್ಪತ್ರೆಗೆ ದಾಖಲು. Fatal collision between Sea Bird bus and container near Hiriyur, Chitradurga. 9 passengers burnt alive and 21 injured in the accident. pic.twitter.com/Vt15IbPB3J
— malenadutoday.com (@malnadtoday) December 25, 2025
ಟ್ರೇಡಿಂಗ್ ಹೆಸರಿನಲ್ಲಿ ಶಿವಮೊಗ್ಗದ ವ್ಯಕ್ತಿಗೆ 4 ಲಕ್ಷ ವಂಚನೆ : ಹೀಗೂ ಯಾಮಾರಿಸ್ತಾರೆ ಹುಷಾರ್
ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆಯೇ ಹಲವು ಪ್ರಯಾಣಿಕರು ಬಸ್‌ನಿಂದ ಹೊರಕ್ಕೆ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ. 21 ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.


ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel instagram youtube telegram google business malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!
Shivamogga news live, Shimoga news kannada live, ಶಿವಮೊಗ್ಗ ನ್ಯೂಸ್ today, Shimoga news kannada epaper today, ಶಿವಮೊಗ್ಗ ನ್ಯೂಸ್ yesterday, Malenadu news live, ಮಲೆನಾಡು ಸುದ್ದಿ, ಶಿವಮೊಗ್ಗ ಜಿಲ್ಲಾ ವಾರ್ತೆ,