ಮಲವಗೊಪ್ಪದಲ್ಲಿ ವ್ಯಕ್ತಿಗೆ ಚಾಕುವಿನಿಂದ ಇರಿದ ದುಷ್ಕರ್ಮಿ!

ಶಿವಮೊಗ್ಗದ ಮಲವಗೊಪ್ಪ ಪೆಟ್ರೋಲ್ ಬಂಕ್ ಎದುರು 35 ವರ್ಷದ ವಿನೋದ್ ಎಂಬುವವರ ಮೇಲೆ ವಿಕ್ರಂ ಎಂಬಾತ ಚಾಕುವಿನಿಂದ ಭೀಕರವಾಗಿ ದಾಳಿ ನಡೆಸಿದ್ದಾನೆ. ಗಂಭೀರ ಗಾಯಗೊಂಡ ವಿನೋದ್ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದು, ಗ್ರಾಮಾಂತರ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಹಂಚಿಕೊಳ್ಳಿ
WhatsApp Facebook X Telegram
Malenadu Today E-Paper malenadu today epaperMalenadu Today ePaper
Malenadu Today E-Paper Malenadu Today ePaper
ಸುದ್ದಿ ಸಾರಾಂಶ

ಶಿವಮೊಗ್ಗದ ಮಲವಗೊಪ್ಪ ಪೆಟ್ರೋಲ್ ಬಂಕ್ ಎದುರು 35 ವರ್ಷದ ವಿನೋದ್ ಎಂಬುವವರ ಮೇಲೆ ವಿಕ್ರಂ ಎಂಬಾತ ಚಾಕುವಿನಿಂದ ಭೀಕರವಾಗಿ ದಾಳಿ ನಡೆಸಿದ್ದಾನೆ. ಗಂಭೀರ ಗಾಯಗೊಂಡ ವಿನೋದ್ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದು, ಗ್ರಾಮಾಂತರ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಶಿವಮೊಗ್ಗ :  ​ಡಿಸೆಂಬರ್ 28, 2025, ನಗರದ ಹೊರವಲಯದ ಮಲವಗೊಪ್ಪದ ಸಮೀಪವಿರುವ ಪೆಟ್ರೋಲ್ ಬಂಕ್ ಎದುರು ತಡರಾತ್ರಿ ಇಬ್ಬರು ವ್ಯಕ್ತಿಗಳ ನಡುವೆ ನಡೆದ ಗಲಾಟೆ ವಿಕೋಪಕ್ಕೆ ಹೋಗಿ ಓರ್ವನಿಗೆ ಇರಿಯಲಾಗಿದೆ.

ಮಲವಗೊಪ್ಪದ ಮುಖ್ಯ ರಸ್ತೆಯಲ್ಲಿ ನಡೆದ  ಘಟನೆಯಲ್ಲಿ 35 ವರ್ಷ ವಯಸ್ಸಿನ ವಿನೋದ್ ಎಂಬುವವರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದ್ದು, ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ನಗರದ ಮಿಳ್ಳಘಟ್ಟ ನಿವಾಸಿಯಾದ ವಿನೋದ್ ಮೇಲೆ 42 ವರ್ಷದ ವಿಕ್ರಂ ಎಂಬಾತ ಚಾಕು ಇರಿದಿದ್ದು. , ಕೃತ್ಯವೆಸಗಿದ ಬಳಿಕ ಸ್ಥಳದಿಂದ ಪರಾರಿಯಾಗಿದ್ದಾನೆ.

​ನಿನ್ನೆ ದಿನ ರಾತ್ರಿ, ವಿನೋದ್ ಮತ್ತು ವಿಕ್ರಂ ನಡುವೆ  ಮಾತಿನ ಚಕಮಕಿ ಆರಂಭವಾಗಿದೆ. ಜಗಳ ತಾರಕಕ್ಕೇರಿ ಆಕ್ರೋಶಗೊಂಡ ವಿಕ್ರಂ, ತನ್ನ ಬಳಿಯಿದ್ದ ಚಾಕುವಿನಿಂದ ವಿನೋದ್ ಅವರ ಮೇಲೆ ಅನಿರೀಕ್ಷಿತವಾಗಿ ದಾಳಿ ನಡೆಸಿದ್ದಾನೆ. ಗಾಯಾಳು ವಿನೋದ್ ಅವರನ್ನು ತಕ್ಷಣವೇ ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.  ​ಈ ಘಟನೆಗೆ ಸಂಬಂಧಿಸಿದಂತೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ. 

Malenadu Today Shivamogga

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel  instagram youtube telegram  google business   malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!

ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor